'ರೋಹಿತ್ ಶರ್ಮಾ ಜೊತೆಗೆ ಶುಬ್ಮನ್ ಗಿಲ್ ಓಪನ್ ಮಾಡ್ಬೇಕು'

ಮುಂಬೈ: ಮುಂಬರಲಿರುವ ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಭಾರತದ ಅನುಭವಿ ಆರಂಭಿಕ ಬ್ಯಾಟ್ಸ್‌ಮನ್‌ ರೋಹಿತ್ ಶರ್ಮಾ ಜೊತೆಗೆ ಯುವ ಬ್ಯಾಟ್ಸ್‌ಮನ್‌ ಶುಬ್ಮನ್ ಗಿಲ್ ಓಪನ್‌ ಮಾಡ್ಬೇಕು ಎಂದು ಟೀಮ್ ಇಂಡಿಯಾದ ಮಾಜಿ ಆರಂಭಿಕ ಬ್ಯಾಟ್ಸ್‌ಮನ್‌ ಗೌತಮ್ ಗಂಭೀರ್ ಹೇಳಿದ್ದಾರೆ.

ಸಯ್ಯದ್ ಮುಷ್ತಾಕ್ ಅಲಿ, ಕ್ವಾ.ಫೈ 4: ಬಿಹಾರ ವಿರುದ್ಧ ಗೆದ್ದ ರಾಜಸ್ಥಾನ

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಹಿಟ್‌ಮ್ಯಾನ್ ರೋಹಿತ್ ಶರ್ಮಾ ಜೊತೆಗೆ ಶುಬ್ಮನ್ ಗಿಲ್ ಆರಂಭಿಕರಾಗಿ ಆಡಬೇಕು. ಆದರೆ ಗಿಲ್‌ ಅವರು ಟೆಸ್ಟ್‌ಗೆ ಈಗಷ್ಟೇ ಪಾದಾರ್ಪಣೆ ಮಾಡಿರುವುದರಿಂದ ತುಂಬಾ ಎಚ್ಚರಿಕೆಯಿಂದ ಆಡಬೇಕು. ಒತ್ತಡಕ್ಕೆ ಒಳಗಾಗಬಾರದು ಎಂದು ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೂರು ಪಂದ್ಯಗಳಲ್ಲಿ ಆಡಿದ್ದ ಗಿಲ್, 259 ರನ್ ಗಳಿಸಿದ್ದರು. ಇದರಲ್ಲಿ ಗಬ್ಬಾ ಸ್ಟೇಡಿಯಂನಲ್ಲಿ ಗಿಲ್ ಬಾರಿಸಿದ 91 ರನ್ ಮತ್ತು ಅದಕ್ಕೂ ಹಿಂದಿನ ಎರಡು ಅರ್ಧ ಶತಕಗಳೂ ಕೂಡ ಸೇರಿದೆ. ಶರ್ಮಾ ಜೊತೆಗೆ ಗಿಲ್ ಉತ್ತಮ ಆರಂಭಿಕ ಆಟ ಆಡುತ್ತಿದ್ದಾರೆ. ಆದರೆ ಇನ್ನೂ ಸುಧಾರಿಸಬೇಕು ಎಂದು ಗಂಭೀರ್ ಸಲಹೆ ನೀಡಿದ್ದಾರೆ.

ICC ODI ranking: ಅಗ್ರ ಸ್ಥಾನದಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ

ಸ್ಟಾರ್‌ ಸ್ಪೋರ್ಟ್ಸ್‌ನ ಗೇಮ್‌ ಪ್ಲ್ಯಾನ್ ಕಾರ್ಯಕ್ರಮದಲ್ಲಿ ಮಾತನಾಡಿದ ಗಂಭೀರ್, 'ಗಿಲ್ ಖಂಡಿತಾ ಶರ್ಮಾ ಜೊತೆ ಓಪನ್ ಮಾಡ್ಬೇಕು. ಅದರಲ್ಲಿ ಸಂಶಯವೇ ಇಲ್ಲ. ಆದರೆ ದುಡುಕೋದು ಸರಿಯಲ್ಲ. ಅವನ ಮೇಲು ತುಂಬಾ ಒತ್ತಡ ಹಾಕಬಾರದು. ಅವನಲ್ಲಿ ಪ್ರತಿಭೆಯಿದೆ. ಆದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಡುವಾಗ ತುಂಬಾ ಎಚ್ಚರಿಕೆ ವಹಿಸಬೇಕಾಗುತ್ತದೆ,' ಎಂದು ಹೇಳಿದ್ದಾರೆ.

For Quick Alerts
ALLOW NOTIFICATIONS
For Daily Alerts
 

ಕ್ರಿಕೆಟನ್ನು ಪ್ರೀತಿಸುತ್ತೀರಾ? ಋಜುವಾತುಪಡಿಸಿ! ಮೈಖೇಲ್ ಫ್ಯಾಂಟಸಿ ಕ್ರಿಕೆಟ್ ಆಟವಾಡಿ

Story first published: Wednesday, January 27, 2021, 23:25 [IST]
Other articles published on Jan 27, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X