ಏಕದಿನ ಫಾರ್ಮೆಟ್‌ಗೂ ಗಿಲ್ ನಾಯಕ: ರೋಹಿತ್, ವಿರಾಟ್‌ಗೆ ತಂಡದಲ್ಲಿ ಸ್ಥಾನ
ಆಸ್ಟ್ರೇಲಿಯಾ ಪ್ರವಾಸಕ್ಕಾಗಿ ಟೀಮ್ ಇಂಡಿಯಾವನ್ನು ಶನಿವಾರ ಪ್ರಕಟಿಸಲಾಗಿದೆ. ಈ ವೇಳೆ ಎಲ್ಲರ ಕಣ್ಣುಗಳು ಟೀಮ್ ಇಂಡಿಯಾದ ನಾಯಕ ಯಾರು ಎಂಬುದರ ಬಗ್ಗೆ ಚಿತ್ತ ನೆಟ್ಟಿದ್ದರು. ಅಜಿತ್ ಅಗರ್ಕರ್ ಅವರ ಮುಂದಾಳತ್ವದ ಆಯ್ಕೆ ಸಮಿತಿ ಯುವ ನಾಯಕ ಶುಭಮನ್ ಗಿಲ್ ಅವರಿಗೆ ಮಣೆ ಹಾಕಿದೆ. ಅಲ್ಲದೆ ಸ್ಟಾರ್ ಆಟಗಾರ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಅವರಿಗೂ ಸ್ಥಾನ ನೀಡಿದೆ. ತಂಡದಲ್ಲಿ ಅಚ್ಚರಿಯ ಬದಲಾವಣೆಯ ಎಂಬ ರೀತಿ ಶ್ರೇಯಸ್ ಅಯ್ಯರ್ ಅವರಿಗೆ ಉಪನಾಯಕನ ಬವ್ದಾರಿಯನ್ನು ನೀಡಲಾಗಿದೆ.
ಆಸ್ಟ್ರೇಲಿಯಾ ಪ್ರವಾಸದಲ್ಲಿ ಯಾರು ತಂಡವನ್ನು ಮುನ್ನಡೆಸಲಿದ್ದಾರೆ ಎಂಬ ಪ್ರಶ್ನೆಗಳು ಉದ್ಭವಿಸಿದ್ದವು. ಇದಕ್ಕೆ ಉತ್ತರ ಸಿಕ್ಕಿದೆ. ಟೆಸ್ಟ್ ತಂಡವನ್ನು ಮುನ್ನಡೆಸುತ್ತಿರುವ ಶುಭಮನ್ ಗಿಲ್ ಅವರೇ ಏಕದಿನ ಫಾರ್ಮೆಟ್‌ನಲ್ಲೂ ತಂಡವನ್ನು ಮುನ್ನಡೆಸುತ್ತಿದ್ದಾರೆ. ಇವರು ಟೀಮ್ ಇಂಡಿಯಾದ ಯಶಸ್ವಿ ನಾಯಕ ರೋಹಿತ್ ಶರ್ಮಾ ಅವರಿಂದ ಏಕದಿನ ನಾಯಕತ್ವವನ್ನು ಪಡೆದುಕೊಂಡಿದ್ದಾರೆ. ಟಿ20 ಹಾಗೂ ಟೆಸ್ಟ್ ಫಾರ್ಮೆಟ್‌ಗಳಿಗೆ ರೋಹಿತ್ ನಿವೃತ್ತಿ ಘೋಷಿಸಿದ್ದರಿಂದ, ಈ ಎರಡು ಫಾರ್ಮೆಟ್‌ಗೆ ಬೇರೆ ನಾಯಕನ ಹುಡುಕಾಟ ನಡೆದಿತ್ತು. ಆದರೆ ಏಕದಿನ ಫಾರ್ಮೆಟ್‌ಗೆ ಇನ್ನು ಅವರು ನಿವೃತ್ತಿ ಘೋಷಿಸದೇ ಇದ್ದಿದ್ದರಿಂದ ಇವರೇ ಮುಂದುವರೆಯುತ್ತಾರೆ ಎಂಬ ಮಾತುಗಳು ಇದ್ದವು. ಆದರೆ ಆಯ್ಕೆ ಸಮಿತಿ ಇವರಿಂದ ನಾಯಕತ್ವ ಕಸಿದುಕೊಂಡು ಗಿಲ್ ಅವರಿಗೆ ನೀಡಿದೆ.

ರೋಹಿತ್ ಹಾಗೂ ವಿರಾಟ್ ಚಾಂಪಿಯನ್ಸ್ ಟ್ರೋಫಿಯ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್ ಆಡಲು ಸಜ್ಜಾಗಿದ್ದಾರೆ. ಅಂದರೆ ಸುಮಾರು 7 ತಿಂಗಳ ಬಳಿಕ ಉಭಯ ಆಟಗಾರರು ಅಂತಾರಾಷ್ಟ್ರೀಯ ಕ್ರಿಕೆಟ್ ಆಡಲು ತಯಾರಿ ನಡೆಸಿದ್ದಾರೆ. ಆಸ್ಟ್ರೇಲಿಯಾ ಪ್ರವಾಸದಲ್ಲಿ ಬ್ಯಾಕ್ ಆಪ್ ಓಪನರ್ ಆಗಿ ಯಶಸ್ವಿ ಜೈಸ್ವಾಲ್ ಅವರಿಗೆ ಸ್ಥಾನ ನೀಡಲಾಗಿದೆ.
ಧ್ರುವ್ ಜುರೇಲ್‌ಗೆ ಅವಕಾಶ
ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಶತಕ ಬಾರಿಸಿದ ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ಧ್ರುವ್ ಜುರೆಲ್ ಅವರಿಗೆ ಏಕದಿನ ತಂಡದಲ್ಲಿ ಸ್ಥಾನ ನೀಡಲಾಗಿದೆ. ಇವರು ಬ್ಯಾಕ್ ಅಪ್ ವಿಕೆಟ್ ಕೀಪರ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ನಿತೀಶ್ ಕುಮಾರ್ ರೆಡ್ಡಿ ಆಲ್‌ರೌಂಡರ್‌ಗಳಾಗಿ ಕಾಣಿಸಿಕೊಳ್ಳಲಿದ್ದಾರೆ.
ಹಾರ್ದಿಕ್, ಪಂತ್‌ಗೆ ಗಾಯ
ಟೀಮ್ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಏಷ್ಯಾ ಕಪ್ ಟಿ20 ಟೂರ್ನಿಯ ಸೂಪರ್ 4 ಹಂತದ ಕೊನೆಯ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಗಾಯಕ್ಕೆ ತುತ್ತಗಿದ್ದರು. ಹೀಗಾಗಿ ಇವರಿಗೆ ವಿಶ್ರಾಂತಿ ನೀಡಲಾಗಿದೆ. ಇನ್ನು ಗಾಯಾದಿಂದ ಚೇತರಿಸಿಕೊಳ್ಳುತ್ತಿರುವ ರಿಷಭ್ ಪಂತ್ ಅವರಿಗೂ ಅವಕಾಶ ನೀಡಿಲ್ಲ. ಯಾರ್ಕರ್ ಸ್ಪೆಷಲಿಸ್ಟ್ ಜಸ್ಪ್ರೀತ್ ಬುಮ್ರಾ ಅವರಿಗೆ ಏಕದಿನ ತಂಡದಿಂದ ಕೈ ಬಿಡಲಾಗಿದೆ.
ಆಸ್ಟ್ರೇಲಿಯಾ ಪ್ರವಾಸಕ್ಕೆ ಭಾರತದ ಏಕದಿನ ತಂಡ: ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್‌ದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಪ್ರಸಿದ್ಧ ಕೃಷ್ಣ, ಧ್ರುವ್ ಜುರೇಲ್ (ವಿಕೆಟ್ ಕೀಪರ್), ಯಶಸ್ವಿ ಜೈಸ್ವಾಲ್,
ಆಸ್ಟ್ರೇಲಿಯಾ ಪ್ರವಾಸಕ್ಕೆ ಭಾರತದ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭಮನ್ ಗಿಲ್, ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಕುಲ್‌ದೀಪ್ ಯಾದವ್, ಹರ್ಷಿತ್ ರಾಣಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್,
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications