2ನೇ ಟೆಸ್ಟ್‌ನಲ್ಲಿ ಗಿಲ್ ಕಣಕ್ಕೆ ಇಳಿಯುತ್ತಾರಾ? BCCI ಬಿಗ್ ಅಪ್‌ಡೇಟ್
ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಎರಡನೇ ಟೆಸ್ಟ್ ಪಂದ್ಯ ಗುವಾಹಟಿಯಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ಶುಭಮನ್ ಗಿಲ್ ಕಣಕ್ಕೆ ಇಳಿಯುತ್ತಾರಾ ಎಂಬ ಪ್ರಶ್ನೆ ಉದ್ಭವಿಸಿದೆ. ಗುವಾಹಟಿಯಲ್ಲಿ ನಡೆಯಲಿರುವ ಪಂದ್ಯದಲ್ಲಿ ತಂಡವನ್ನು ಮುನ್ನಡೆಸುವುದು ಯಾರು ಎಂಬ ಪ್ರಶ್ನೆಗಳು ಸಹ ಎದ್ದಿವೆ. ಈ ವೇಳೆ ಬಿಸಿಸಿಐ ಬಿಗ್ ಅಪ್‌ಡೇಟ್ ನೀಡಿದೆ.
ಕೋಲ್ಕತ್ತ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಎರಡನೇ ದಿನ ಬ್ಯಾಟಿಂಗ್ ಮಾಡುವಾಗ ನಾಯಕ ಶುಭಮನ್ ಗಿಲ್ ಗಾಯಕ್ಕೆ ತುತ್ತಾದರು. ಒಂದು ಬೌಂಡರಿ ಬಾರಿಸುತ್ತಿದ್ದಂತೆ ಗಿಲ್ ಕತ್ತು ಹಿಡಿದುಕೊಂಡು ಮೈದಾನದಿಂದ ಹೊರ ನಡೆದರು. ಬಳಿಕ ಅವರನ್ನು ಕೋಲ್ಕತ್ತದಲ್ಲಿ ಆಸ್ಪತ್ರೆಗೆ ದಾಖಲಿಸಲಾಯಿತು. ಹೀಗಾಗಿ ಇವರು ಎರಡನೇ ಇನಿಂಗ್ಸ್‌ನಲ್ಲಿ ಭಾರತದ ಪರ ಬ್ಯಾಟ್ ಸಹ ಮಾಡಲಿಲ್ಲ. ಹೀಗಾಗಿ ಶುಭಮನ್ ಗಿಲ್ ಎರಡನೆ ಟೆಸ್ಟ್ ಪಂದ್ಯವನ್ನು ಆಡುತ್ತಾರೋ ಇಲ್ಲವೋ ಎಂಬ ಬಗ್ಗೆ ದೊಡ್ಡ ಸಂದೇಹ ಮೂಡಿದೆ. ಈ ಬಗ್ಗೆ ಬಿಸಿಸಿಐ ಬಿಗ್ ಅಪ್‌ಡೇಟ್ ನೀಡಿದೆ. ಟೀಮ್ ಇಂಡಿಯಾ 2ನೇ ಟೆಸ್ಟ್ ಪಂದ್ಯವನ್ನು ಆಡಲು ಗುವಾಹಟಿಗೆ ತೆರಳುತ್ತಿರುವಂತೆಯೇ ಬಿಸಿಸಿಐ ದೊಡ್ಡ ಅಪ್‌ಡೇಟ್ ನೀಡಿದೆ.

ಶುಭಮನ್ ಗಿಲ್ ಕೋಲ್ಕತ್ತದಲ್ಲಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರಿಂದ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿತ್ತು. ಈ ಬಗ್ಗೆ ಬಿಸಿಸಿಐ ದೊಡ್ಡ ಅಪ್‌ಡೇಟ್ ನೀಡಿದೆ. ನವಂಬರ್ 19 ರಂದು ಟೀಮ್ ಇಂಡಿಯಾ ಎರಡನೇ ಟೆಸ್ಟ್ ಪಂದ್ಯವನ್ನು ಆಡಲು ಗುವಾಹಟಿಗೆ ಪ್ರಯಾಣ ಬೆಳಸಲಿದೆ. ಈ ವೇಳೆ ಶುಭಮನ್ ಗಿಲ್ ಸಹ ತಂಡದೊಂದಿಗೆ ಪ್ರಯಾಣ ಮಾಡಲಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ. ಅಲ್ಲದೆ ಗಿಲ್ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿರುವುದಾಗಿ ಹೇಳಿದೆ.
ಬಿಸಿಸಿಐ ವೈದ್ಯಕೀಯ ತಂಡವ ಗಿಲ್ ಅವರ ಮೇಲ್ವಿಚಾರಣೆ ಮಾಡುವುದನ್ನು ಮುಂದುವರಿಸುತ್ತದೆ. ಅಲ್ಲದೆ ಎರಡನೇ ಟೆಸ್ಟ್ ಪಂದ್ಯದಲ್ಲಿ ಗಿಲ್ ಆಡುತ್ತಾರೋ ಇಲ್ಲವೋ ಎಂಬ ಬಗ್ಗೆ ಸಹ ತಮ್ಮ ನಿಲುವನ್ನು ವೈದ್ಯರು ಪಡೆಯಲಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.

ದಕ್ಷಿಣ ಆಫ್ರಿಕಾ ತಂಡದಲ್ಲೂ ಬದಲಾವಣೆ
ಎರಡನೇ ಟೆಸ್ಟ್ ಪಂದ್ಯದಲ್ಲಿ ಶುಭಮನ್ ಗಿಲ್ ಮೈದಾನಕ್ಕೆ ಇಳಿಯದೇ ಇದ್ದರೆ ತಂಡ ಒತ್ತಡಕ್ಕೆ ಸಿಲುಕುತ್ತದೆ. ಈಗಾಗಲೇ ಮೊದಲ ಟೆಸ್ಟ್ ಸೋತಿರುವ ಟೀಮ್ ಇಂಡಿಯಾ, 2ನೇ ಟೆಸ್ಟ್ ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ. ಇಂತಹ ಪರಿಸ್ಥಿತಿಯಲ್ಲಿ ಗಿಲ್ ಅನುಪಸ್ಥಿತಿ ತಂಡಕ್ಕೆ ದೊಡ್ಡ ಪೆಟ್ಟು ನೀಡಲಿದೆ. ಗಿಲ್ ಗಾಯಕ್ಕೆ ತುತ್ತಾಗಿದ್ದರಿಂದ ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಇನ್ನು ದಕ್ಷಿಣ ಆಫ್ರಿಕಾ ತಂಡ ಕಗಿಸೊ ರಬಾಡ ಅವರ ಬದಲಿಗೆ ವೇಗಿ ಲುಂಗಿ ಎನ್‌ಗಿಡಿ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ರಬಾಡ ಕೋಲ್ಕತ್ತದಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಪಕ್ಕೆಲುಬಿನ ಗಾಯದಿಂದಾಗಿ ಕಣಕ್ಕೆ ಇಳಿದಿರಲಿಲ್ಲ.
2ನೇ ಟೆಸ್ಟ್ ಪಂದ್ಯದಲ್ಲಿ ಶುಭಮನ್ ಗಿಲ್ ಅವರು ಕಣಕ್ಕೆ ಇಳಿಯದೇ ಇದ್ದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಶುಭಮನ್ ಗಿಲ್ ತಂಡವನ್ನು ಮುನ್ನಡೆಸುವ ಸಾಧ್ಯತೆ ಹೆಚ್ಚಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications