Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ICC ODI Ranking: ಗಿಲ್‌ ಅಗ್ರ ಸ್ಥಾನ ಭದ್ರ: ವಿರಾಟ್‌ಗೆ ಬಡ್ತಿ, ರೋಹಿತ್‌ ಕುಸಿತ

ಟೀಮ್ ಇಂಡಿಯಾದ ಆಟಗಾರರು ಚಾಂಪಿಯನ್ಸ್ ಟ್ರೋಫಿಯಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿದ್ದಾರೆ. ಇದರ ನೇರ ಪರಿಣಾಮ ಅವರ ಶ್ರೇಯಾಂಕದಲ್ಲಿ ಆಗಿದೆ. ಟೀಮ್ ಇಂಡಿಯಾ ಬ್ಯಾಟರ್‌ಗಳು ರ್ಯಾಂಕಿಂಗ್‌ನಲ್ಲಿ ಸ್ಥಿರತೆ ಕಾಯ್ದುಕೊಂಡಿದ್ದಾರೆ. ಏಕದಿನ ಫಾರ್ಮೆಟ್‌ನ ನೂತನ ಸುಲ್ತಾನ್‌ ಶುಭಮನ್‌ ಗಿಲ್, ಈ ಫಾರ್ಮೆಟ್‌ನಲ್ಲಿ ನಂಬರ್ 1 ಸ್ಥಾನದಲ್ಲಿ ಮುಂದುವರೆದಿದ್ದಾರೆ. ಇನ್ನು ವಿರಾಟ್‌ ಕೊಹ್ಲಿ ಶ್ರೇಯಾಂಕದಲ್ಲಿ ಏರಿಕೆ ಆಗಿದ್ದು, ರೋಹಿತ್ ಶರ್ಮಾ ಕುಸಿತ ಕಂಡಿದ್ದಾರೆ.

ಶುಭಮನ್‌ ಗಿಲ್‌ ಚಾಂಪಿಯನ್ಸ್‌ ಟ್ರೋಫಿಯಲ್ಲಿ ದೊಡ್ಡ ಇನಿಂಗ್ಸ್‌ ಕಟ್ಟದೇ ಇದ್ದರೂ ಸ್ಥಿರ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ. ಇವರ ಈ ಪ್ರದರ್ಶನದ ಫಲವಾಗಿ ಶ್ರೇಯಾಂಕದಲ್ಲಿ ಸ್ಥಿರತೆ ಕಾಯ್ದುಕೊಂಡಿದ್ದಾರೆ. ಶುಭಮನ್‌ ಗಿಲ್‌ 791 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಅಗ್ರ ಸ್ಥಾನದಲ್ಲಿ ಮುಂದುವರೆದಿದ್ದಾರೆ. ಎರಡನೇ ಸ್ಥಾನದಲ್ಲಿ ಪಾಕ್‌ ತಂಡದ ಬಾಬರ್‌ ಅಜಮ್‌ ಇದ್ದಾರೆ. ಇವರ ಬುಟ್ಟಿಯಲ್ಲಿ ಸದ್ಯ 770 ಅಂಕಗಳಿವೆ. ಇನ್ನು ದಕ್ಷಿಣ ಆಫ್ರಿಕಾದ ಹೆನ್ರಿಚ್ ಕ್ಲಾಸೆನ್‌ 760 ಅಂಕಗಳನ್ನು ಹೊಂದಿದ್ದು, ಮೂರನೇ ಸ್ಥಾನದಲ್ಲಿದ್ದಾರೆ.

Shubman Gill Tops ICC ODI Rankings Virat Kohli Rises as Rohit Sharma Drops

ವಿರಾಟ್‌ಗೆ ಬಡ್ತಿ

ಪಾಕಿಸ್ತಾನ ವಿರುದ್ಧದ ಲೀಗ್‌ ಹಂತದ ಎರಡನೇ ಪಂದ್ಯದಲ್ಲಿ ಅಮೋಘ ಶತಕ ಬಾರಿಸಿ ಫಾರ್ಮ್‌ಗೆ ಮರಳಿರುವ ವಿರಾಟ್‌ ಕೊಹ್ಲಿ, ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಏರಿಕೆ ಆಗಿದೆ. ಇವರು ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್‌ ಪಂದ್ಯದಲ್ಲೂ 84 ರನ್‌ ಸಿಡಿಸಿ ತಂಡದ ಜಯದಲ್ಲಿ ಮಿಂಚಿದ್ದರು. ಇವರ ಪ್ರದರ್ಶನದಿಂದ ಲಾಭವಾಗಿದ್ದು, ಇವರು 4ನೇ ಸ್ಥಾನದಲ್ಲಿದ್ದಾರೆ. ವಿರಾಟ್‌ ಸದ್ಯ 747 ಅಂಕಗಳನ್ನು ಹೊಂದಿದ್ದು, ಒಂದು ಸ್ಥಾನ ಏರಿಕೆ ಕಂಡಿದ್ದಾರೆ. ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಶ್ರೇಯಾಂಕದಲ್ಲಿ ಕುಸಿತ ಕಂಡಿದ್ದಾರೆ. ಇವರು ಎರಡು ಸ್ಥಾನ ಇಳಿಕೆ ಕಂಡಿದ್ದು, ಐದನೇ ಸ್ಥಾನದಲ್ಲಿದ್ದಾರೆ.

ಚಾಂಪಿಯನ್ಸ್ ಟ್ರೋಫಿಯಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿರುವ ಶ್ರೇಯಸ್‌ ಅಯ್ಯರ್ ರ್ಯಾಂಕಿಂಗ್‌ನಲ್ಲಿ ಬಡ್ತಿ ಪಡೆದಿದ್ದಾರೆ. ಇವರು ಒಂದು ಸ್ಥಾನ ಬಡ್ತಿ ಪಡೆದಿದ್ದು, ಸದ್ಯ 8ನೇ ಸ್ಥಾನದಲ್ಲಿದ್ದಾರೆ. ಇನ್ನು ಕೆಎಲ್ ರಾಹುಲ್‌ 15ನೇ ಸ್ಥಾನದಲ್ಲಿ ಮುಂದುವರೆದಿದ್ದಾರೆ.

Shubman Gill Tops ICC ODI Rankings Virat Kohli Rises as Rohit Sharma Drops

ಕುಲ್‌ದೀಪ್‌ಗೆ ನಷ್ಟ

ಟೀಮ್ ಇಂಡಿಯಾದ ಚೈನಾ ಮೆನ್ ಬೌಲರ್‌ ಕುಲ್‌ದೀಪ್‌ ಯಾದವ್ ತಮ್ಮ ಶ್ರೇಯಾಂಕದಲ್ಲಿ ಕುಸಿತ ಕಂಡಿದ್ದಾರೆ. ಕುಲ್‌ದೀಪ್‌ 637 ಅಂಕಗಳೊಂದಿಗೆ 6ನೇ ಸ್ಥಾನವನ್ನು ತಲುಪಿದ್ದಾರೆ. ಬೌಲರ್‌ಗಳ ಪಟ್ಟಿಯಲ್ಲಿ ಶ್ರೀಲಂಕಾದ ಮಹೀಶ್ ತೀಕ್ಷಣ್‌ ಅಗ್ರ ಸ್ಥಾನದಲ್ಲಿ ಮುಂದುವರೆದಿದ್ದಾರೆ. ದಕ್ಷಿಣ ಆಫ್ರಿಕಾದ ಕೇಶವ್ ಮಹಾರಾಜ್ 2ನೇ ಸ್ಥಾನ, ನ್ಯೂಜಿಲೆಂಡ್‌ನ ಮ್ಯಾಟ್‌ ಹೆನ್ರಿ 3ನೇ ಸ್ಥಾನದಲ್ಲಿದ್ದಾರೆ. ಉಳಿದಂತ ಮೊಹಮ್ಮದ್ ಶಮಿ 11, ರವೀಂದ್ರ ಜಡೇಜಾ 13, ಮೊಹಮ್ಮದ್ ಸಿರಾಜ್‌ 14ನೇ ಸ್ಥಾನದಲ್ಲಿದ್ದಾರೆ.

ಅಜ್ಮತುಲ್ಲಾ ನಂಬರ್‌ 1

ಅಫ್ಘಾನಿಸ್ತಾನದ ಅಜ್ಮತುಲ್ಲಾ ಒಮರ್ಜೈ ಸ್ಥಿರ ಪ್ರದರ್ಶನ ನೀಡಿದ್ದು, ಐಸಿಸಿ ಏಕದಿನ ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ನಂಬರ್ 1 ಸ್ಥಾನದಲ್ಲಿ ಮುಂದುವರೆದಿದ್ದಾರೆ. ಇವರು 296 ಅಂಕಗಳನ್ನು ಕಲೆ ಹಾಕಿದ್ದು ಅಗ್ರ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ. ಮೊಹಮ್ಮದ್ ನಬಿ ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ. ಜಿಂಬಾಬ್ವೆ ಸಿಕಂದರ್‌ ರಾಜ್‌ ಮೂರನೇ ಸ್ಥಾನದಲ್ಲಿದ್ದಾರೆ. ಭಾರತದ ರವೀಂದ್ರ ಜಡೇಜಾ 9ನೇ ಸ್ಥಾನದಲ್ಲಿದ್ದಾರೆ.

Story first published: Wednesday, March 5, 2025, 15:45 [IST]
Other articles published on Mar 5, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+