ಜುಲೈ 16 ಮಂಗಳವಾರ, ಜಿಂಬಾಬ್ವೆ ವಿರುದ್ಧದ ಯಶಸ್ವಿ ಟಿ20 ಸರಣಿಯ ಬಳಿಕ ಭಾರತ ತಂಡವು ಶ್ರೀಲಂಕಾ ಪ್ರವಾಸಕ್ಕೆ ತೆರಳಲಿದ್ದು, ಅಲ್ಲಿ 3 ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ.
ಸದ್ಯಕ್ಕೆ ಈ ಸರಣಿಯಲ್ಲಿ ಭಾರತ ತಂಡದ ನಾಯಕ ಯಾರು ಎಂಬ ಕುತೂಹಲ ಹೆಚ್ಚಿಸಿದ. ಟಿ20 ತಂಡದ ಜವಾಬ್ದಾರಿಯನ್ನು ಹಾರ್ದಿಕ್ ಪಾಂಡ್ಯ ವಹಿಸಿಕೊಳ್ಳಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ.

ಒಂದು ವೇಳೆ ಹಾರ್ದಿಕ್ ಪಾಂಡ್ಯ ನಾಯಕನಾಗದಿದ್ದರೆ, ಸತತ ಮೂರನೇ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾ ವಿಭಿನ್ನ ನಾಯಕನನ್ನು ಹೊಂದಿರಲಿದೆ.ಟೀಮ್ ಇಂಡಿಯಾ ಇತ್ತೀಚೆಗೆ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟಿ20 ವಿಶ್ವಕಪ್ ಮತ್ತು ಶುಭಮನ್ ಗಿಲ್ ನಾಯಕತ್ವದಲ್ಲಿ ಜಿಂಬಾಬ್ವೆ ವಿರುದ್ಧದ ಸರಣಿಯನ್ನು ಕೈ ವಶಪಡಿಸಿಕೊಂಡಿದೆ.
ಆದರೆ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಿಂದ ನಿವೃತ್ತಿಯಾಗಿದ್ದಾರೆ. ಭಾರತದ ಅನೇಕ ಯುವ ಆಟಗಾರರು ಟಿ20 ಕ್ರಿಕೆಟ್‌ನಲ್ಲಿ ನಾಯಕರಾಗಿ ತಮ್ಮ ಪ್ರತಿಭೆಯನ್ನು ತೋರಿಸಿದ್ದಾರೆ.
ಇದಕ್ಕೆ ಪ್ರಮುಖ ಕಾರಣ ಐಪಿಎಲ್‌ನಲ್ಲಿ ಭಾರತೀಯ ಯುವ ಆಟಗಾರರು ಅನೇಕ ಫ್ರಾಂಚೈಸಿ ತಂಡಗಳ ನಾಯಕತ್ವವನ್ನು ವಹಿಸಿಕೊಂಡಿದ್ದಾರೆ. ಅದರಲ್ಲೂ 2024ರಲ್ಲಿ ಟಿ20 ನಾಯಕನಾಗಿ ಶುಭಮನ್ ಅತಿ ಹೆಚ್ಚು ರನ್ ಗಳಿಸಿರುವುದು ಮತ್ತು ಸರಣಿಯನ್ನು ಗೆದ್ದಿರುವುದು ಅವರಿಗೆ ಯಶಸ್ಸು ತಂದು ಕೊಟ್ಟಿದೆ.
ಜಿಂಬಾಬ್ವೆ ವಿರುದ್ಧ ಟೀಮ್ ಇಂಡಿಯಾ ನಾಯಕನಾಗಿ ಶುಭಮನ್ ಗಿಲ್ 5 ಪಂದ್ಯಗಳಲ್ಲಿ 170 ರನ್ ಗಳಿಸಿದ್ದರು. ಇದರೊಂದಿಗೆ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ (162) ಜೊತೆಗೆ ಗಿಲ್ ಹೆಸರು ಕೂಡ ಇದೀಗ ವಿಶೇಷ ಪಟ್ಟಿಗೆ ಸೇರ್ಪಡೆಯಾಗಿದ್ದರು.
ಶುಭಮನ್ ಗಿಲ್ ನಾಯಕನಾಗಿ ಟಿ20 ಸರಣಿಯಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ 4ನೇ ಆಟಗಾರ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ 231 ರನ್ ಗಳಿಸಿ ಅಗ್ರಸ್ಥಾನದಲ್ಲಿದ್ದಾರೆ.
141 ಸ್ಟ್ರೈಕ್ ರೇಟ್‌ನೊಂದಿಗೆ 596 ರನ್ ಗಳಿಸಿರುವ ಶುಭಮನ್ ಗಿಲ್ ಮೊದಲ ಸ್ಥಾನದಲ್ಲಿದ್ದಾರೆ. ಐಪಿಎಲ್‌ನಲ್ಲಿ ಗುಜರಾತ್ ಟೈಟಾನ್ಸ್ ನಾಯಕತ್ವದ ಹೊರತಾಗಿ, ಇತ್ತೀಚೆಗೆ ಮುಕ್ತಾಯಗೊಂಡ ಜಿಂಬಾಬ್ಬೆ ಸರಣಿಯಲ್ಲಿ ಭಾರತವನ್ನು ಮುನ್ನಡೆಸಿದರು. ಈ ಸರಣಿಯಲ್ಲಿ ಟೀಮ್ ಇಂಡಿಯಾ 4-1 ಅಂತರದಿದ ಸರಣಿ ಗೆದ್ದಿದೆ.
ಮತ್ತೊಂದೆಡೆ 142 ಸ್ಟ್ರೈಕ್ ರೇಟ್‌ನಲ್ಲಿ 583 ರನ್ ಗಳಿಸಿರುವ ಚೆನ್ನೈ ಸೂಪರ್ ಕಿಂಗ್ಸ್‌ನ ಯುವ ನಾಯಕ ಋತುರಾಜ್ ಗಾಯಕ್ವಾಡ್ ಎರಡನೇ ಸ್ಥಾನದಲ್ಲಿದ್ದಾರೆ. ಋತುರಾಜ್ ಗಾಯಕ್ವಾಡ್, ಯಾವುದೇ ಕ್ರಮಾಂಕದಲ್ಲಾದರೂ ಬ್ಯಾಟಿಂಗ್ ಮಾಡಬಲ್ಲರು. ಜೊತೆಗೆ ಸ್ಪೋಟಕ ಬ್ಯಾಟಿಂಗ್ ಹೆಸರುವಾಸಿಯಾಗಿದ್ದಾರೆ.
ಸಂಜು ಸ್ಯಾಮ್ಸನ್ ಅವರು ರಾಜಸ್ಥಾನ್ ರಾಯಲ್ಸ್ ತಂಡದ ನಾಯಕರಾಗಿದ್ದು, ತಂಡವನ್ನು ಉತ್ತಮ ರೀತಿಯಲ್ಲಿ ಮುನ್ನಡೆಸಿದ್ದಾರೆ. 153ರ ವೇಗದ ಸ್ಟ್ರೈಕ್ ರೇಟ್‌ನಲ್ಲಿ 531 ರನ್ ಗಳಿಸಿರುವ ಸಂಜು 2024ರಲ್ಲಿ ನಾಯಕನಾಗಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಆಟಗಾರನಾಗಿದ್ದಾರೆ. ಈ ಮೂಲಕ ಸಂಜು ಸ್ಯಾಮ್ಸನ್ ಮೂರನೇ ಸ್ಥಾನದಲ್ಲಿದ್ದಾರೆ.
ಇದರೊಂದಿಗೆ ಈ ಪಟ್ಟಿಯಲ್ಲಿ ಭಾರತದ ಸ್ಟಾರ್ ವಿಕೆಟ್ ಕೀಪರ್ ಮತ್ತು ಬ್ಯಾಟರ್ ಕೆಎಲ್ ರಾಹುಲ್ 505 ರನ್ ಗಳಿಸಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ರಾಹುಲ್ ಸ್ಟ್ರೈಕ್ ಕೇವಲ 136 ಆಗಿದ್ದರೂ, ಟೀಮ್ ಇಂಡಿಯಾಕ್ಕೆ ನೆರವಾಗದ್ದಾರೆ.
ಅಪಘಾತದ ನಂತರ ಭಾರತದ ವಿಕೆಟ್ ಕೀಪರ್- ಬ್ಯಾಟರ್ ರಿಷಬ್ ಪಂತ್ ಅದ್ಭುತ ಪುನರಾಗಮನ ಮಾಡಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ನಾಯಕನಾಗಿ ಪಂತ್ ಅದ್ಭುತ ಪ್ರದರ್ಶನ ನೀಡಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ಪಂತ್ 446 ರನ್ ಗಳಿಸಿದ್ದಾರೆ, ಇದರಲ್ಲಿ ಅವರ ಸರಾಸರಿ 155 ಆಗಿದೆ.
ಅಚ್ಚರಿ ವಿಷಯವೆನೆಂದರೆ 2024ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಗೆಲುವಿಗೆ ಶ್ರಮಿಸಿದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಈ ಪಟ್ಟಿಯಲ್ಲಿ ಇಲ್ಲ. ಇಂತಹ ಪರಿಸ್ಥಿತಿಯಲ್ಲಿ ಟೀಮ್ ಇಂಡಿಯಾದ ಮುಂದಿನ ಸಂಭಾವ್ಯ ಟಿ20 ನಾಯಕರಾಗಿ ಹಾರ್ದಿಕ್ ಪಾಂಡ್ಯ ಹೆಸರು ಕೇಳಿ ಬರುತ್ತಿದೆ.
ಹಾರ್ದಿಕ್ 2024ರ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್‌ಗೆ ನಾಯಕರಾಗಿದ್ದರು. ಆದರೆ, ಐಪಿಎಲ್‌ನಲ್ಲಿ ಹಾರ್ದಿಕ್ ಹೇಳಿಕೊಳ್ಳವಂತ ಪ್ರದರ್ಶನ ನೀಡಲಿಲ್ಲ. ಇದರಿಂದಾಗಿ ಮುಂಬೈ ತಂಡ ಟೂರ್ನಿಯಿಂದ ಹೊರುಗುಳಿದಿತ್ತು.
ಇತ್ತೀಚೆಗೆ ಹಾರ್ದಿಕ್ ಪಾಂಡ್ಯ ನೀಡಿದ ಪ್ರದರ್ಶನ, ಈ ಹಿಂದೆ ಭಾರತ ತಂಡದ ನಾಯಕತ್ವದ ಅನುಭವ ಹಾಗ ಆಲ್‌ರೌಂಡರ್ ಸಾಮರ್ಥ್ಯ ಹೊಂದಿರುವ ಕಾರಣ ಮತ್ತೊಮ್ಮೆ ಟೀಮ್ ಇಂಡಿಯಾದ ನಾಯಕತ್ವಕ್ಕೆ ಸ್ಪರ್ಧಿಯಾಗಿದ್ದಾರೆ.