Shubman Gill: ಮೆಲ್ಬೋರ್ನ್ ಟೆಸ್ಟ್‌ನಲ್ಲಿ ಮೈದಾನಕ್ಕಿಳಿಯುತ್ತಿದ್ದಂತೆ ಶುಭಮನ್ ಗಿಲ್ ಶತಕ: ಏನಿದು?
ಟೀಮ್ ಇಂಡಿಯಾ ಸದ್ಯ ಆಸ್ಟ್ರೇಲಿಯಾ ಪ್ರವಾಸದಲ್ಲಿದೆ. ಈ ವೇಳೆ ಭಾರತ, ಆಸ್ಟ್ರೇಲಿಯಾ ತಂಡಗಳ ನಡುವೆ ಬಾರ್ಡರ್ ಗವಾಸ್ಕರ್ ಸರಣಿ ನಡೆಯುತ್ತಿದೆ. ಈ ಟೆಸ್ಟ್ ಪಂದ್ಯದಲ್ಲಿ ಗೆಲುವು ಸಾಧಿಸಲು ಟೀಮ್ ಇಂಡಿಯಾ ಪ್ಲ್ಯಾನ್ ಮಾಡಿಕೊಂಡಿದೆ. ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವನ್ನು ಕಣ್ಣು ತುಂಬಿಕೊಳ್ಳಲು ಅಭಿಮಾನಿಗಳು ಸಹ ಕಾತುರರಾಗಿದ್ದಾರೆ. ಈ ವೇಳೆ ಹಲವು ಆಟಗಾರರು ದಾಖಲೆಯ ಮೇಲೆ ಕಣ್ಣು ನೆಟ್ಟಿದ್ದಾರೆ. ಅಲ್ಲದೆ ಟೀಮ್ ಇಂಡಿಯಾದ ಯುವ ಭರಸೆಯ ಆಟಗಾರ ಸಹ ದೊಡ್ಡ ದಾಖಲೆಯ ಮೇಲೆ ಕಣ್ಣು ನೆಟ್ಟಿದ್ದಾರೆ. ಹಾಗಿದ್ದರೆ ಆ ದಾಖಲೆ ಏನು ಎಂಬ ಬಗ್ಗೆ ಮಾಹಿತಿ ಇಲ್ಲಿದೆ.
ಬಾರ್ಡರ್ ಗವಾಸ್ಕರ್ ಸರಣಿಯಲ್ಲಿ ಟೀಮ್ ಇಂಡಿಯಾದ ಶುಭಮನ್ ಗಿಲ್ ನಿರೀಕ್ಷಿತ ಪ್ರದರ್ಶನ ನೀಡುತ್ತಿಲ್ಲ. ಇವರ ಬ್ಯಾಟ್ ಮೌನಕ್ಕೆ ಶರಣಾಗಿದೆ. ಇವರು ಯಾವುದೇ ದೊಡ್ಡ ಇನಿಂಗ್ಸ್ ಕಟ್ಟಿಲ್ಲ. ಇನ್ನು ಏಷ್ಯಾದ ಹೊರಗೆ ಶುಭಮನ್ ಗಿಲ್ ಬ್ಯಾಟ್‌ನಿಂದ ದೊಡ್ಡ ಇನಿಂಗ್ಸ್ ಮೂಡಿ ಬಂದಿಲ್ಲ. ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಭಾರತದ ಈ ಯುವ ಆಟಗಾರ ಮೈದಾನಕ್ಕೆ ಇಳಿಯುತ್ತಿದ್ದಂತೆ ದಾಖಲೆಯ ಪುಟಕ್ಕೆ ಎಂಟ್ರಿ ನೀಡಲಿದ್ದಾರೆ. ಈ ಪಂದ್ಯದಲ್ಲಿ ಗಿಲ್ ಅಬ್ಬರಿಸಿ ಸ್ಮರಣೀಯವಾಗಿಸಲು ಸಿದ್ಧತೆ ನಡೆಸಿದ್ದಾರೆ.

ಶತಕದ ಹೊಸ್ತಿಲಲ್ಲಿ ಗಿಲ್
ಮೆಲ್ಬೋರ್ನ್ ಅಂಗಳದಲ್ಲಿ ಶುಭಮನ್ ಗಿಲ್ ಆಡಲು ಮೈದಾನಕ್ಕೆ ಇಳಿಯುತ್ತಿದ್ದಂತೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ನೂರು ಪಂದ್ಯಗಳನ್ನು ಆಡಿದ ಹಿರಿಮೆ ತಮ್ಮದಾಗಿಸಿಕೊಳ್ಳಲಿದ್ದಾರೆ. ಈಗಾಗಲೇ ಇವರು 99 ಪಂದ್ಯಗಳನ್ನು ಆಡಿದ್ದಾರೆ. ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಗಿಲ್ ಅವರನ್ನು ಟೀಂ ಇಂಡಿಯಾದ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ನೀಡಿದರೆ, ವೃತ್ತಿಜೀವನದ 100 ನೇ ಅಂತರಾಷ್ಟ್ರೀಯ ಪಂದ್ಯ ಆಡಲಿದ್ದಾರೆ. ಬಾರ್ಡರ್-ಗವಾಸ್ಕರ್ ಟ್ರೋಫಿಯ ನಾಲ್ಕನೇ ಟೆಸ್ಟ್ ಡಿಸೆಂಬರ್ 26 ರ ಗುರುವಾರದಿಂದ ಪ್ರಾರಂಭವಾಗಲಿದೆ.
ಆಸೀಸ್ ಪ್ರವಾಸದಲ್ಲಿ ಗಿಲ್ ಸಾಧನೆ
ಬಾರ್ಡರ್-ಗವಾಸ್ಕರ್ ಟ್ರೋಫಿಯ ಮೂರು ಪಂದ್ಯಗಳನ್ನು ಆಡಲಾಗಿದೆ. ಪರ್ತ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸ್ಥಿರ ಪ್ರದರ್ಶನ ನೀಡಿ ಗೆಲುವು ದಾಖಲಿಸಿದರೆ, ಆಡಿಲೇಡ್‌ನಲ್ಲಿ ಆಸ್ಟ್ರೇಲಿಯಾ ಗೆಲುವಿನ ನಗೆ ಬೀರಿದೆ. ಈ ಮೂಲಕ ಆಸ್ಟ್ರೇಲಿಯಾ ಪಿಂಕ್ ಬಾಲ್ ಟೆಸ್ಟ್‌ನಲ್ಲಿ ತನ್ನ ಖದರ್ ಮುಂದುವರೆಸಿದೆ. ಎರಡನೇ ಟೆಸ್ಟ್ ಪಂದ್ಯದಲ್ಲಿ ಗಿಲ್ 31 ಮತ್ತು 28 ರನ್ ಗಳಿಸಿದರು. ನಂತರ, ಬ್ರಿಸ್ಬೇನ್‌ನಲ್ಲಿ ನಡೆದ ಸರಣಿಯ ಮೂರನೇ ಟೆಸ್ಟ್‌ನಲ್ಲಿ, ಗಿಲ್ ಕೇವಲ 1 ರನ್ ಗಳಿಸಿ ಔಟಾದರು. ಈ ಪಂದ್ಯ ಡ್ರಾದಲ್ಲಿನ ಅಂತ್ಯವಾಗಿತ್ತು.

ಅಂತಾರಾಷ್ಟ್ರೀಯ ವೃತ್ತಿಜೀವನ
ಶುಭಮನ್ ಗಿಲ್ ಟೀಮ್ ಇಂಡಿಯಾದ ಭರವಸೆಯ ಆಟಗಾರ. ಇವರು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಒಟ್ಟು 99 ಪಂದ್ಯಗಳನ್ನು ಆಡಿದ್ದಾರೆ. 125 ಇನಿಂಗ್ಸ್‌ಗಳಲ್ಲಿ ಬ್ಯಾಟ್ ಮಾಡಿರುವ ಗಿಲ್ 42.93ರ ಸರಾಸರಿಯಲ್ಲಿ 4766 ರನ್ ಸಿಡಿಸಿದ್ದಾರೆ. ಈ ವೇಳೆ 12 ಶತಕ, 23 ಅರ್ಧಶತಕಗಳು ಸೇರಿವೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications