Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Siddharth Kaul Retirement: ಮೆಗಾ ಹರಾಜಿನಲ್ಲಿ ಅನ್‌ಸೋಲ್ಡ್‌; ವೃತ್ತಿ ಬದುಕಿಗೆ ಗುಡ್ ಬೈ ಹೇಳಿದ ಟೀಮ್ ಇಂಡಿಯಾ ವೇಗಿ

ಐಪಿಎಲ್ 2025ರ ಮೆಗಾ ಹರಾಜಿನಲ್ಲಿ ಅನೇಕ ಸ್ಟಾರ್ ಆಟಗಾರರಿಗೆ ಫ್ರಾಂಚೈಸಿಗಳು ಮಣೆ ಹಾಕಿಲ್ಲ. ಅದರಲ್ಲಿ ಒಬ್ಬರ ಟೀಮ್ ಇಂಡಿಯಾದ ವೇಗದ ಬೌಲರ್ ಸಿದ್ಧಾರ್ಥ್ ಕೌಲ್. ಈಗ ಮೆಗಾ ಹರಾಜಿನಲ್ಲಿ ಅನ್‌ಸೋಲ್ಡ್ ಆದ ಕೇವಲ 3 ದಿನಗಳ ನಂತರ ಸಿದ್ಧಾರ್ಥ್ ಕೌಲ್ ಅವರು ತಮ್ಮ ಕ್ರಿಕೆಟ್‌ ವೃತ್ತಿಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಒಂದು ಕಾಲದಲ್ಲಿ ಐಪಿಎಲ್‌ನಲ್ಲಿ ಮಿಂಚಿದ ಬೌಲರ್ ಸಿದ್ಧಾರ್ಥ್ ಕೌಲ್ ಈ ಬಾರಿ ಮೆಗಾ ಹರಾಜಿನಲ್ಲಿ ಮಾರಾಟವಾಗದೆ ಉಳಿದಿದ್ದರು. ಇದೀಗ ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘ ಭಾವನಾತ್ಮಕ ಪೋಸ್ಟ್ ಹಂಚಿಕೊಳ್ಳುವ ಮೂಲಕ ತಮ್ಮ ಕ್ರಿಕೆಟ್ ವೃತ್ತ ಬದುಕಿಗೆ ತೆರೆ ಎಳೆದಿದ್ದಾರೆ.

ಸಿದ್ಧಾರ್ಥ ಕೌಲ್ ಅವರು ಟೀಮ್ ಇಂಡಿಯಾ ಪರ 2018 ಮತ್ತು 2019ರ ನಡುವೆ 3 ಏಕದಿನ ಮತ್ತು 3 ಟಿ 20 ಪಂದ್ಯಗಳನ್ನು ಆಡಿದ್ದಾರೆ. ಆದರೆ ಟೀಮ್ ಇಂಡಿಯಾ ಪರ ಆಡಿದ ಮೂರು ಏಕದಿನ ಪಂದ್ಯಗಳಲ್ಲಿ ಒಂದು ವಿಕೆಟ್ ಪಡೆಯಲು ಸಾಧ್ಯವಾಗಿಲ್ಲ. ಆದರೆ, ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಒಟ್ಟು 4 ವಿಕೆಟ್​​ ಪಡೆದಿದ್ದಾರೆ.

Siddhart Koul announces retirement from cricket career

ಐಪಿಎಲ್‌ನಲ್ಲಿಯೂ ಹಲವು ತಂಡಗಳ ಪರ ಕಣಕ್ಕೀಳಿದಿರುವ ಸಿದ್ಧಾರ್ಥ ಕೌಲ್ ಉತ್ತಮ ಪ್ರದರ್ಶನ ನೀಡಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ), ಡೆಲ್ಲಿ ಡೇರ್ ಡೆವಿಲ್ಸ್ (ಈಗ ಡೆಲ್ಲಿ ಕ್ಯಾಪಿಟಲ್ಸ್), ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ಮತ್ತು ಸನ್ ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಹೆಚ್‌) ಪರ ಸಿದ್ಧಾರ್ಥ್ ಕೌಲ್ ಆಡಿರುವ 54 ಪಂದ್ಯಗಳಲ್ಲಿ 58 ವಿಕೆಟ್ ಕಬಳಿಸಿದ್ದಾರೆ.

ಇದಲ್ಲದೆ ಅವರ ದೇಶೀಯ ಕ್ರಿಕೆಟ್ ವೃತ್ತಿಜೀವನವೂ ಅದ್ಭುತವಾಗಿದೆ. ಪಂಜಾಬ್ ತಂಡವನ್ನು ಪ್ರತಿನಿಧಿಸಿರುವ ಅವರು 88 ಪ್ರಥಮ ದರ್ಜೆ ಪಂದ್ಯಗಳಲ್ಲಿ 297 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. 111 ಲಿಸ್ಟ್ ಎ ಪಂದ್ಯಗಳಲ್ಲಿ 199 ವಿಕೆಟ್, 145 ಟಿ20 ಪಂದ್ಯಗಳಲ್ಲಿ 182 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.

2008ರಲ್ಲಿ ಅಂಡರ್-19 ವಿಶ್ವಕಪ್ ಗೆದ್ದ ಭಾರತ ತಂಡದಲ್ಲಿ ಸಿದ್ಧಾರ್ಥ್ ಕೌಲ್ ಸ್ಥಾನ ಪಡೆದಿದ್ದರು. ಈ ತಂಡದಲ್ಲಿ ನಾಯಕರಾಗಿ ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ ಕೂಡ ಇದ್ದರು. ಈಗ ನಿವೃತ್ತಿಯಾಗಿರುವುದರಿಂದ ಅವರ ವಿದೇಶಗಳ ಕ್ರಿಕೆಟ್‌ ಲೀಗ್‌ಗಳನ್ನು ಆಡಬಹುದಾಗಿದೆ. ಈಗಾಗಲೇ ಅವರು ಇಂಗ್ಲೆಂಡ್‌ನ ನಾರ್ಥಾಂಪ್ಟನ್​ಶೈರ್ ತಂಡದ ಪರ ಕೌಂಟಿ ಕ್ರಿಕೆಟ್ ಆಡಿದ್ದಾರೆ.

Story first published: Friday, November 29, 2024, 11:28 [IST]
Other articles published on Nov 29, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+