Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಆರಂಭಿಕನಾಗಿ ಸಚಿನ್‌ಗಿಂತ ರೋಹಿತ್ ಬೆಸ್ಟ್ ಎಂದ ನ್ಯೂಜಿಲೆಂಡ್ ಮಾಜಿ ವೇಗಿ

Simon Doull On Why He Rates Sharma Higher Than Tendulkar In Odis

ವಿಶ್ವ ಕ್ರಿಕೆಟ್‌ನಲ್ಲಿ ಸದ್ಯ ಟೀಮ್ ಇಂಡಿಯಾ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಮಿಂಚುಹರಿಸುತ್ತಿದ್ದಾರೆ. ತಮ್ಮ ಅದ್ಭುತ ಆಟದಿಂದ ಅದೆಷ್ಟೋ ದಾಖಲೆಗಳನ್ನು ತಮ್ಮ ಹೆಸರಿಗೆ ಈ ಇಬ್ಬರೂ ಆಟಗಾರರು ಬರೆದುಕೊಳ್ಳುತ್ತಿದ್ದಾರೆ. ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯಂತೂ ಸಚಿನ್ ತೆಂಡೂಲ್ಕರ್ ಬರೆದು ದೊಡ್ಡ ದೊಡ್ಡ ದಾಖಲೆಗಳನ್ನು ಮುರಿಯುವತ್ತ ಚಿತ್ತ ನೆಟ್ಟಿದ್ದಾರೆ.

ಈ ಮಧ್ಯೆ ಸಚಿನ್ ತೆಂಡೂಲ್ಕರ್‌ಗಿಂತಲೂ ರೋಹಿತ್ ಶರ್ಮಾ ಬೆಸ್ಟ್ ಎಂದು ನ್ಯೂಜಿಲೆಂಡ್‌ನ ಮಾಜಿ ವೇಗಿ ಮತ್ತು ವೀಕ್ಷಕ ವಿವರಣೆಕಾರ ಸೈಮನ್ ಡೌಲ್ ಹೇಳದ್ದಾರೆ. ಸೈಮನ್ ಸಚಿನ್‌ ಜೊತೆಗೆ ರೋಹಿತ್ ಹೋಲಿಕೆ ಮಾಡಿದ್ದು ಆರಂಭಿಕ ಆಟಗಾರನ ಸ್ಥಾನಕ್ಕೆ. ಆರಂಭಿಕನಾಗಿ ರೋಹಿತ್ ಶರ್ಮಾ ಸಚಿನ್ ತೆಂಡೂಲ್ಕರ್‌ಗಿಂತ ಬೆಸ್ಟ್ ಎಂದು ಹೇಳಿದ್ದಾರೆ.

ಈ ಹಿಂದೆ ಮಾತನಾಡಿದ್ದ ಸೈಮನ್ ಡೌಲ್ ಭಾರತದ ಏಕದಿನ ಸಾರ್ವಕಾಲಿಕ ಶ್ರೇಷ್ಠ ತಂಡದಲ್ಲಿ ರೋಹಿತ್ ಶರ್ಮಾ ಮೊದಲಿಗರಾಗಿರುತ್ತಾರೆ ಎಂದು ಹೇಳಿದ್ದರು. ಈಗ ಇನ್ನೂ ಮುಂದುವರಿದು ಮಾತನಾಡಿದ ಅವರು ಇನ್ನಿಂಗ್ಸ್‌ನ ಉದ್ದಕ್ಕೂ ರೋಹಿತ್ ಶರ್ಮಾ ತಮ್ಮ ಬ್ಯಾಟಿಂಗ್ ವೇಗವನ್ನು ಒಂದೇ ರೀತಿಯಾಗಿ ಮುಂದುವರಿಸಿಕೊಂಡು ಹೋಗುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಆದರೆ ಸಚಿನ್ ತೆಂಡೂಲ್ಕರ್ ಅವರಲ್ಲಿ ಹೀಗೆ ಇರಲಿಲ್ಲ ಎಂದು ಹೇಳಿದ್ದಾರೆ.

ರೋಹಿತ್ ಶರ್ಮಾ ಬ್ಯಾಟಿಂಗ್ ಮಾಡುವ ವೇಳೆ ಅವರು 60, 70, 80 ರನ್‌ಗಳಿಸುತ್ತಿದ್ದಂತೆಯೇ ಬ್ಯಾಟಿಂಗ್ ಸ್ಟ್ರೈಕ್‌ ರೇಟ್ ಹೆಚ್ಚಿಸಿಕೊಳ್ಳುತ್ತಲೇ ಹೋಗುತ್ತಾರೆ. ಮತ್ತೆ ಅದು 90 ಗಳಿಸಿದ ನಂತರ ಕುಂಠಿತವಾಗುವುದಿಲ್ಲ, ಬಳಿಕವೂ ಹಾಗೇಯೇ ಮುಂದುವರಿಯುತ್ತದೆ ಎಂದು ಹೇಳಿದ ಸೈಮನ್ ಡೌಲ್ ರೋಹಿತ್ ಶರ್ಮಾ ಓರ್ವ ಅದ್ಭುತ ಆಟಗಾರ ಎಂದು ಬಣ್ಣಿಸಿದರು.

ಇದೇ ಸಂದರ್ಭದಲ್ಲಿ ಸಚಿನ್ ತೆಂಡೂಲ್ಕರ್ ಬ್ಯಾಟಿಂಗ್ ನಡೆಸುತ್ತಿದ್ದ ರೀತಿಯನ್ನು ತೀಕ್ಷ್ಣವಾಗಿ ವಿಮರ್ಶಿಸಿದ ಡೌಲ್ ಸಚಿನ್ ತೆಂಡೂಲ್ಕರ್ ಶತಕದ ಸಮೀಪ ಬಂದಾಗ ಯಾವ ರೀತಿ ಎಡವುತ್ತಿದ್ದರು ಎಂಬುದನ್ನು ಹೇಳಿದ್ದಾರೆ. ಸ್ಟ್ರೈಕ್ ರೇಟ್ ಮತ್ತು ಸರಾಸರಿ ವಿಷಯದಲ್ಲೂ ಸಚಿನ್ ತೆಂಡೂಲ್ಕರ್ ಗಿಂತ ರೋಹಿತ್ ಶರ್ಮಾ ಮುಂದಿದ್ದಾರೆ ಎಂದು ನ್ಯೂಜಿಲೆಂಡ್‌ನ ಮಾಜಿ ಆಟಗಾರ ಹಾಲಿ ವೀಕ್ಷಕ ವಿವರಣೆಗಾರ ಸೈಮನ್ ಡೌಲ್ ಹೇಳಿದ್ದಾರೆ.

Story first published: Thursday, May 7, 2020, 22:59 [IST]
Other articles published on May 7, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+