Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Manchester Test: ಬುಮ್ರಾ ಆಡುವ ಬಗ್ಗೆ ಬಿಗ್ ಅಪ್‌ಡೇಟ್‌ ನೀಡಿದ ಸಿರಾಜ್‌

ಟೀಮ್ ಇಂಡಿಯಾ ಸ್ಟಾರ್ ವೇಗದ ಬೌಲರ್‌ ಮ್ಯಾಂಚೆಸ್ಟರ್‌ ಟೆಸ್ಟ್‌ಗೂ ಮುನ್ನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಈ ವೇಳೆ ನಾಲ್ಕನೇ ಟೆಸ್ಟ್‌ ಬಗ್ಗೆ ಸಿರಾಜ್‌ ಬಿಗ್‌ ಅಪ್‌ಡೇಟ್‌ ನೀಡಿದ್ದಾರೆ. ಜುಲೈ 23 ರಂದು ನಡೆಯಲಿರುವ ಮ್ಯಾಂಚೆಸ್ಟರ್‌ ಟೆಸ್ಟ್‌ ಪಂದ್ಯದಲ್ಲಿ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್‌ನಲ್ಲಿ ವೇಗದ ಬೌಲರ್‌ ತಂಡದಲ್ಲಿ ಆಡುವುದು ಕನ್ಫರ್ಮ್‌ ಎಂದು ತಿಳಿಸಿದ್ದಾರೆ.

ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಬೌಲರ್‌ ಪ್ಲೇಯಿಂಗ್ ಇಲೆವೆನ್‌ ಬಗ್ಗೆ ಕೊಂಚ ಮಾಹಿತಿಯನ್ನು ನೀಡಿದ್ದಾರೆ. ಅಲ್ಲದೆ ನನಗೆ ಅರಿವಿರುವ ವರೆಗೆ ಯಾರ್ಕರ್‌ ಸ್ಪೇಷಲಿಸ್ಟ್‌ ಜಸ್ಪ್ರಿತ್‌ ಬುಮ್ರಾ ಆಡುವುದು ಖಚಿತ ಎಂದು ತಿಳಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾದ ಕ್ಯಾಂಪ್‌ನಲ್ಲಿ ಎದ್ದಿದ್ದ ಪ್ರಶ್ನೆಗಳಿಗೆ ಉತ್ತರ ಸಿಕ್ಕಿದೆ. ಸಿರಾಜ್‌ ಈ ಮೂಲಕ ಜಸ್ಪ್ರೀತ್ ಬುಮ್ರಾ ನಾಲ್ಕನೇ ಟೆಸ್ಟ್‌ನಿಂದ ವಿಶ್ರಾಂತಿ ಪಡೆಯಲಿದ್ದಾರೆ ಎಂಬ ವದಂತಿಗಳಿಗೆ ತೆರೆ ಬಿದ್ದಿದೆ.

Siraj Confirms Bumrah s Inclusion in Manchester Test Playing XI Dispelling Rest Rumours

ಟೀಮ್ ಇಂಡಿಯಾ ಮಾಡಿಕೊಂಡ ಪ್ಲ್ಯಾನ್‌ಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಅಲ್ಲದೆ ಟೀಮ್ ಇಂಡಿಯಾದ ಬೌಲರ್‌ಗಳು ಸರಿಯಾದ ಸ್ಥಳದಲ್ಲಿ ಬೌಲಿಂಗ್ ಮಾಡಿ ವಿಕೆಟ್‌ ಪಡೆಯುವ ಯೋಜನೆ ನಮ್ಮದಾಗಿದೆ. ಅಲ್ಲದೆ ಇಂಗ್ಲೆಂಡ್‌ ತಂಡವನ್ನು ಕಟ್ಟಿ ಹಾಕುವುದೇ ನಮ್ಮ ಯೋಜನೆ ಆಗಿದೆ. ಇನ್ನು ಬೆನ್‌ ಸ್ಟೋಕ್ಸ್‌ ಮುಂದಾಳತ್ವದ ತಂಡ ಮ್ಯಾಂಚೆಸ್ಟರ್‌ನಲ್ಲಿ ಭರ್ಜರಿ ಪ್ರದರ್ಶನ ನೀಡುವ ಪ್ಲ್ಯಾನ್‌ ಹಾಕಿಕೊಂಡಿದ್ದಾರೆ. ಅದಕ್ಕೆ ಪ್ರತಿಯಾಗಿ ನಾವು ಸಹ ಯೋಜನೆಗಳನ್ನು ರೂಪಿಸುತ್ತಿದ್ದೇವೆ.

ಸಿರಾಜ್‌, ಬುಮ್ರಾ ಅವರೊಂದಿಗೆ ಹರಿಯಾಣದ ವೇಗದ ಬೌಲರ್‌ ಅಂಶುಲ್ ಕಂಬೋಜ್‌ ಅವರಿಗೆ ಸ್ಥಾನ ಸಿಗುವ ಸಾಧ್ಯತೆ ಇದೆ. ಇವರು ಹರಿಯಾಣ ಪರ ದೇಶೀಯ ಟುರ್ನಿಗಳಲ್ಲಿ ಭರ್ಜರಿ ಪ್ರದರ್ಶನ ನೀಡಿದ ಫಲವಾಗಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡುವ ಅವಕಾಶವನ್ನು ಪಡೆದರು. ಇವರನ್ನು ಇತ್ತೀಚಿಗೆ ಭಾರತ ತಂಡಕ್ಕೆ ಸೇರಿಸಲಾಗಿದೆ. ಇನ್ನು ನಿತೀಶ್‌ ಕುಮಾರ್‌ ರೆಡ್ಡಿ ಗಾಯಕ್ಕೆ ತುತ್ತಾಗಿದ್ದಾರಿಂದ, ಕಂಬೋಜ್‌ಗೆ ಆಡುವ ಅವಕಾಶ ಸಿಗುವ ಸಾಧ್ಯತೆ ಹೆಚ್ಚಿದೆ.

ಸಿರಾಜ್‌ ಈ ಬಾರಿಯ ಇಂಗ್ಲೆಂಡ್ ಪ್ರವಾಸದಲ್ಲಿ ಅಮೋಘ ಪ್ರದರ್ಶನ ನೀಡಿದ್ದಾರೆ. ಇವರು ಬೌಲಿಂಗ್ ಜೊತೆಗೆ ಈ ಬಾರಿ ಬ್ಯಾಟಿಂಗ್‌ನಲ್ಲೂ ಸ್ಥಿರ ಪ್ರದರ್ಶನ ನೀಡಿದ್ದಾರೆ. ಇವರು ಲಾರ್ಡ್ಸ್‌ನಲ್ಲಿ ಕೆಚ್ಚೆದೆಯ ಬ್ಯಾಟಿಂಗ್ ಪ್ರದರ್ಶನ ನೀಡಿ ಎಲ್ಲರ ಗಮನ ಸೆಳೆದಿದ್ದರು. ಜಡೇಜಾ ಅವರೊಂದಿಗೆ ಕೊನೆಯ ವಿಕೆಟ್‌ಗೆ ಸ್ಥಿರ ಪ್ರದರ್ಶನ ನೀಡಿರುವ ಸಿರಾಜ್‌ 29 ಎಸೆತಗಳನ್ನು ಎದುರಿಸಿ ಅಬ್ಬರಿಸಿದರು.

Story first published: Monday, July 21, 2025, 19:20 [IST]
Other articles published on Jul 21, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+