For Quick Alerts
ALLOW NOTIFICATIONS  
For Daily Alerts
 

Mohammed Siraj: ಇಂಗ್ಲೆಂಡ್ ಪ್ರವಾಸದಲ್ಲಿ ಮತ್ತೊಂದು ದಾಖಲೆ ಬರೆದ ಭಾರತದ ವೇಗಿ

ಭಾರತ ಹಾಗೂ ಇಂಗ್ಲೆಂಡ್ ನಡುವಣ ಐದನೇ ಟೆಸ್ಟ್‌ ಪಂದ್ಯ ಓವಲ್‌ನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಕೊನೆಯ ಅವಧಿಯಲ್ಲಿ ಸ್ಥಿರ ಪ್ರದರ್ಶನ ನೀಡಿದೆ. ಆಂಡರ್ಸನ್ ತೆಂಡುಲ್ಕರ್ ಸರಣಿಯಲ್ಲಿ ಟೀಮ್ ಇಂಡಿಯಾದ ಅನುಭವಿ ವೇಗದ ಬೌಲರ್‌ ಮೊಹಮ್ಮದ್ ಸಿರಾಜ್‌ ಬಿಗುವಿನ ದಾಳಿ ನಡೆಸಿ ಎಲ್ಲರ ಗಮನ ಸೆಳೆದಿದ್ದಾರೆ. ಇವರು ಈ ಸರಣಿಯಲ್ಲಿ ಅತಿ ಹೆಚ್ಚು ವಿಕೆಟ್‌ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿ ಇದ್ದಾರೆ.

ಇಂಗ್ಲೆಂಡ್ ಪ್ರವಾಸದಲ್ಲಿ ಟೀಮ್ ಇಂಡಿಯಾದ ಪರ ಎಲ್ಲ ಐದೂ ಟೆಸ್ಟ್‌ ಪಂದ್ಯಗಳನ್ನು ಆಡಿದ ಬೌಲರ್‌ಗಳಲ್ಲಿ ಮೊಹಮ್ಮದ್ ಸಿರಾಜ್‌ ಅವರಿಗೆ ಸ್ಥಾನ. ಅಲ್ಲದೆ ಸಿರಾಜ್‌ ಈ ಸರಣಿಯಲ್ಲಿ 1 ಸಾವಿರಕ್ಕೂ ಹೆಚ್ಚು ಎಸೆತಗಳನ್ನು ಎಸೆದಿದ್ದಾರೆ. ಈ ಮೂಲಕ ಈ ಸರಣಿಯಲ್ಲಿ ಈ ಸಾಧನೆ ಮಾಡಿದ ಭಾರತದ ಮೊದಲ ಹಾಗೂ ಒಟ್ಟಾರೆ ಎರಡನೇ ಬೌಲರ್‌ ಎಂಬ ಖ್ಯಾತಿ ಪಡೆದಿದ್ದಾರೆ. ಇಂಗ್ಲೆಂಡ್ ತಂಡದ ಕ್ರಿಸ್ ವೋಕ್ಸ್ ಐದು ಪಂದ್ಯಗಳ ಸರಣಿಯಲ್ಲಿ 1 ಸಾವಿರಕ್ಕೂ ಹೆಚ್ಚು ಬೌಲ್ ಮಾಡಿದ ಹಿರಿಮೆ ಹೊಂದಿದ್ದಾರೆ.

Siraj Shines India s Workhorse Bowler Leads Attack in England Test Series

ಟೀಮ್ ಇಂಡಿಯಾದ ವೇಗದ ಬೌಲಿಂಗ್ ವಿಭಾಗದ ಮುಂದಾಳು ಮೊಹಮ್ಮದ್ ಸಿರಾಜ್‌, ಇಂಗ್ಲೆಂಡ್ ಪ್ರವಾಸದಲ್ಲಿ ಆಡಿದ 5 ಟೆಸ್ಟ್‌ ಪಂದ್ಯಗಳಲ್ಲಿ 1088 ಎಸೆತಗಳನ್ನು ಬೌಲ್ ಮಾಡಿದ್ದಾರೆ. ಈ ಅವಧಿಯಲ್ಲಿ ಅವರು 36.85ರ ಸರಾಸರಿಯಲ್ಲಿ 20 ವಿಕೆಟ್‌ ಪಡೆದಿದ್ದಾರೆ. ಅಲ್ಲದೆ ಇವರು 737 ರನ್‌ಗಳನ್ನು ಸಹ ನೀಡಿದ್ದಾರೆ. ಇನ್ನು ಟೆಸ್ಟ್‌ ಕ್ರಿಕೆಟ್‌ನಲ್ಲಿ 1 ಸಾವಿರಕ್ಕೂ ಹೆಚ್ಚು ಎಸೆತಗಳನ್ನು ಒಂದೇ ಸರಣಿಯಲ್ಲಿ ಮಾಡಿದ 28ನೇ ಭಾರತೀಯ ಬೌಲರ್‌ ಎಂಬ ಖ್ಯಾತಿಯನ್ನು ಸಿರಾಜ್‌ ಪಡೆದಿದ್ದಾರೆ. ಈ ಮೊದಲು ಜಸ್ಪ್ರೀತ್ ಬುಮ್ರಾ 4 ವರ್ಷಗಳ ಹಿಂದೆ ಈ ಸಾಧನೆ ಮಾಡಿದ್ದರು.

ಸಿರಾಜ್ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌

ಮೊಹಮ್ಮದ್‌ ಸಿರಾಜ್‌ ಇಂಗ್ಲೆಂಡ್ ಪ್ರವಾಸದಲ್ಲಿ ಎಲ್ಲ ಐದು ಪಂದ್ಯಗಳನ್ನು ಆಡಿರುವ ಬೌಲರ್‌. ಇವರು ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲೂ ಮೊದಲ ಸ್ಥಾನದಲ್ಲಿದ್ದಾರೆ. ಇವರ ನಂತರದ ಸ್ಥಾನದಲ್ಲಿ ಜೋಶ್ ಟಂಗ್ ಇದ್ದು, ಇವರು 19 ವಿಕೆಟ್‌ ಕಬಳಿಸಿದ್ದಾರೆ. ಯಾರ್ಕರ್‌ ಸ್ಪೆಷಲಿಸ್ಟ್‌ ಜಸ್ಪ್ರೀತ್ ಬುಮ್ರಾ ಆಡಿದ 3 ಪಂದ್ಯಗಳಲ್ಲಿ 14 ವಿಕೆಟ್‌ ಪಡೆದಿದ್ದಾರೆ.

ಪಂದ್ಯದ ಫಲಿತಾಂಶ

ಟೆಸ್ಟ್‌ ಸರಣಿಯ ಕೊನೆಯ ಪಂದ್ಯದ ಕೊನೆಯ ದಿನದಾಟ ಇಂದು ನಡೆಯಲಿದೆ. ಇಂದು ಸಹ ಭಾರತ ಈ ಪಂದ್ಯದಲ್ಲಿ ಸ್ಥಿರ ಪ್ರದರ್ಶನ ನೀಡಬೇಕಿದೆ. ಭಾರತ ಈ ಪಂದ್ಯದಲ್ಲಿ ಉತ್ತಮ ಫಲಿತಾಂಶ ನೋಡುವ ಅವಶ್ಯಕತೆ ಇದ್ದು ಈ ವೇಳೆ ಮೊಹಮ್ಮದ್ ಸಿರಾಜ್‌ ಐದನೇ ದಿನದಾಟದಲ್ಲಿ ಬಿಗುವಿನ ದಾಳಿ ನಡೆಸುವುದು ಅನಿವಾರ್ಯವಾಗಿದೆ. ಅಂದಾಗ ಮಾತ್ರ ಟೀಮ್ ಇಂಡಿಯಾ ಗೆಲುವಿನ ನಗೆ ಬೀರಬಹುದಾಗಿದೆ. ಸೋಮವಾರ ಸಿರಾಜ್‌ ಮೊದಲಾವಧಿಯಲ್ಲಿ ಮೊನಚಾದ ದಾಳಿ ಸಂಘಟಿಸಿ ಜಯದಲ್ಲಿ ಮಿಂಚಬೇಕಿದೆ.

Story first published: Monday, August 4, 2025, 13:17 [IST]
Other articles published on Aug 4, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+