Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

WTC 2025: ಟೀಮ್ ಇಂಡಿಯಾ ವೇಗಿ ಸಿರಾಜ್‌ ದಾಖಲೆ

ಭಾರತ ಹಾಗೂ ವೆಸ್ಟ್‌ ಇಂಡೀಸ್ ನಡುವಣ ಮೊದಲ ಟೆಸ್ಟ್‌ ಪಂದ್ಯ ಅಹಮದಾಬಾದ್‌ನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಬಿಗಿ ಹಿಡಿತ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ವೆಸ್ಟ್‌ ಇಂಡೀಸ್ ಮೊದಲು ಬ್ಯಾಟಿಂಗ್ ಮಾಡಿ 162 ರನ್‌ಗೆ ಆಲೌಟ್ ಆಯಿತು. ಈ ವೇಳೆ ಟೀಮ್ ಇಂಡಿಯಾದ ವೇಗದ ಬೌಲರ್‌ಗಳು ಅಬ್ಬರದ ಪ್ರದರ್ಶನ ನೀಡಿದರು. ಭರವಸೆಯ ಬೌಲರ್‌ ಮೊಹಮ್ಮದ್‌ ಸಿರಾಜ್‌ 4 ವಿಕೆಟ್‌ ಪಡೆದು ಸಾಧನೆ ಮಾಡಿದರು. ಈ ಮೂಲಕ ಸಿರಾಜ್‌ ದೊಡ್ಡ ದಾಖಲೆಯನ್ನು ನಿರ್ಮಿಸಿದರು.

ಟೀಮ್ ಇಂಡಿಯಾದ ವೇಗದ ಬೌಲರ್‌ ಮೊಹಮ್ಮದ್‌ ಸಿರಾಜ್‌, ಪ್ರಸಕ್ಯ ವರ್ಷದ ಡಬ್ಲ್ಯೂಟಿಸಿಯಲ್ಲಿ ಹೆಚ್ಚು ವಿಕೆಟ್‌ಗಳನ್ನು ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೆ ಏರಿದರು. ಈ ವರ್ಷ ಭಾಗವಹಿಸುವ ತಂಡಗಳಲ್ಲಿ ಅವರು ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದಾರೆ. ಸಿರಾಜ್ ಹಲವಾರು ಸ್ಟಾರ್ ಆಟಗಾರರನ್ನು ಹಿಂದಿಕ್ಕಿ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

Siraj Tops WTC Wicket-Takers Chart After Dominating West Indies Test

31 ವರ್ಷದ ಸ್ಟಾರ್ ವೇಗದ ಮೊಹಮ್ಮದ್‌ ಸಿರಾಜ್‌ ಪ್ರಸಕ್ತ ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ನಲ್ಲಿ ಆಡಿದ 7 ಪಂದ್ಯಗಳ 12 ಇನಿಂಗ್ಸ್‌ಗಳಲ್ಲಿ ಒಟ್ಟು 30 ವಿಕೆಟ್‌ ಪಡೆದು ಸಾಧನೆ ಮಾಡಿದ್ದಾರೆ. ವೆಸ್ಟ್‌ ಇಂಡೀಸ್ ವಿರುದ್ಧದ ಪಂದ್ಯದಲ್ಲಿ 3 ವಿಕೆಟ್‌ ಪಡೆಯುತ್ತಿದ್ದಂತೆ ಇವರು 30 ವಿಕೆಟ್‌ ಪಡೆದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮಿಚೆಲ್ ಸ್ಟಾರ್ಕ್‌ನಂತಹ ಸ್ಟಾರ್ ಆಟಗಾರರು ಅವರನ್ನು ಹಿಂದಿಕ್ಕಿದ್ದ ಸಿರಾಜ್‌ ಮುನ್ನಡೆ ಸಾಧಿಸಿದ್ದಾರೆ. ಮಿಚೆಲ್ ಸ್ಟಾರ್ಕ್ 14 ಇನ್ನಿಂಗ್ಸ್‌ಗಳಲ್ಲಿ 29 ವಿಕೆಟ್‌ಗಳನ್ನು ಹೊಂದಿದ್ದಾರೆ.

ಇಂಗ್ಲೆಂಡ್‌ನಲ್ಲಿ ಅಬ್ಬರ

ಇತ್ತೀಚಿಗೆ ಇಂಗ್ಲೆಂಡ್ ಪ್ರವಾಸದಲ್ಲಿ ಟೀಮ್ ಇಂಡಿಯಾ ಅಮೋಘ ಪ್ರದರ್ಶನ ನೀಡಿತ್ತು. ಈ ವೇಳೆ ಟೀಮ್ ಇಂಡಿಯಾದ ಸ್ಟಾರ್ ವೇಗದ ಬೌಲರ್ ಸಿರಾಜ್‌ ಅಬ್ಬರಿಸಿದ್ದರು. ಆಂಡರ್ಸನ್‌, ತೆಂಡೂಲ್ಕರ್ ಸರಣಿಯಲ್ಲಿ ಅತಿ ಹೆಚ್ಚು ವಿಕೆಟ್‌ ಪಡೆದ ಸಾಧನೆಯನ್ನು ಇವರು ತಮ್ಮದಾಗಿಸಿಕೊಂಡರು. ಈ ಸರಣಿಯಲ್ಲಿ ಸಿರಾಜ್‌ 27 ವಿಕೆಟ್‌ ಪಡೆದು ಬೀಗಿದ್ದಾರೆ. ಸದ್ಯ ಈ ಟೆಸ್ಟ್ ಚಾಂಪಿಯನ್‌ಶಿಪ್ ಸೈಕಲ್‌ನಲ್ಲಿ ಮೊಹಮ್ಮದ್ ಸಿರಾಜ್ ಅಗ್ರಸ್ಥಾನದಲ್ಲಿದ್ದಾರೆ. ಈ ಪಟ್ಟಿಯಲ್ಲಿ ವೆಸ್ಟ್‌ ಇಂಡೀಸ್ ತಂಡದ ಬೌಲರ್‌ ಶೋಮರ್ ಜೋಸೆಫ್‌ ಆಡಿದ 6 ಪಂದ್ಯಗಳಲ್ಲಿ 22 ವಿಕೆಟ್‌ ಕಬಳಿಸಿ ಎರಡನೇ ಸ್ಥಾನದಲ್ಲಿದ್ದಾರೆ.

Story first published: Thursday, October 2, 2025, 19:29 [IST]
Other articles published on Oct 2, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+