ಕಪಿಲ್ ದೇವ್ ದಾಖಲೆ ಹಿಂದಿಕ್ಕಿಂದ ಮೊಹಮ್ಮದ್ ಸಿರಾಜ್
ಭಾರತ ಹಾಗೂ ಇಂಗ್ಲೆಂಡ್ ನಡುವಣ ಐದನೇ ಟೆಸ್ಟ್ ಪಂದ್ಯ ಓವಲ್‌ನಲ್ಲಿ ನಡೆಯಿತು. ಈ ಪಂದ್ಯದಲ್ಲಿ ಟೀಮ್ ಇಂಡಿಯಾ 6 ರನ್‌ಗಳಿಂದ ಜಯ ಸಾಧಿಸಿ ಟೆಸ್ಟ್ ಸರಣಿಯಲ್ಲಿ ಸಮಬಲ ಸಾಧಿಸಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ದಾಖಲಿಸಿರುವಲ್ಲಿ ಭಾರತದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಅವರ ಕೊಡುಗೆ ಮಹತ್ವದಾಗಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಪರ ಹೈದರಾಬಾದ್ ಹುಡುಗ ಸಿರಾಜ್ ಐದು ವಿಕೆಟ್ ಪಡೆದು ಮಿಂಚಿದರು. ಈ ಮೂಲಕ ಸಿರಾಜ್ ದಾಖಲೆ ಬರೆದಿದ್ದಾರೆ.
ಐದನೇ ಪಂದ್ಯದ ಎರಡನೇ ಇನಿಂಗ್ಸ್‌ನಲ್ಲಿ ಸಿರಾಜ್ ನೀಡಿದ ಅಮೋಘ ಪ್ರದರ್ಶನಕ್ಕೆ ಇವರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಟೀಮ್ ಇಂಡಿಯಾದ ನಾಯಕ ಶುಭಮನ್ ಗಿಲ್ ಸಹ ಸಿರಾಜ್ ಅವರ ಸಾಧನೆಯನ್ನು ಕೊಂಡಾಡಿದ್ದಾರೆ. ಸಿರಾಜ್ ಈ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿದ್ದು ಹಲವು ದಾಖಲೆಗಳಿಗೆ ತಮ್ಮ ಹೆಸರನ್ನು ನಮೂದಿಸಿದ್ದಾರೆ.

ಓವಲ್ ಟೆಸ್ಟ್ ಪಂದ್ಯದಲ್ಲಿ ಸಿರಾಜ್ ಒಟ್ಟಾರೆಯಾಗಿ 9 ವಿಕೆಟ್‌ಗಳನ್ನು ಪಡೆದರು. ಇದರಲ್ಲಿ ಮೊದಲ ಇನಿಂಗ್ಸ್‌ನ 4 ಹಾಗೂ ಎರಡನೇ ಇನಿಂಗ್ಸ್‌ನ 5 ವಿಕೆಟ್‌ಗಳು ಸೇರಿವೆ. ಈ ಅಮೊಘ ಪ್ರದರ್ಶನದ ಮೂಲಕ ಸಿರಾಜ್ ಮತ್ತೊಂದು ದಾಖಲೆ ಬರೆದಿದ್ದಾರೆ. ಟೀಮ್ ಇಂಡಿಯಾದ ದಿಗ್ಗಜ ಆಲ್‌ರೌಂಡರ್ ಕಪಿಲ್ ದೇವ್ ಅವರ ದಾಖಲೆಯನ್ನು ಸಿರಾಜ್ ಹಿಂದಿಕ್ಕಿದ್ದಾರೆ. ಇಂಗ್ಲೆಂಡ್ ನೆಲದಲ್ಲಿ ಮಾಜಿ ನಾಯಕ ಕಪಿಲ್ ದೇವ್ 42 ವಿಕೆಟ್‌ಗಳನ್ನು ಪಡೆದ ಸಾಧನೆಯನ್ನು ಮಾಡಿದ್ದರು. ಈಗ ಸಿರಾಜ್ ಈ ವಿಕೆಟ್‌ಗಳ ಸಂಖ್ಯೆಯನ್ನು ಮೀರಿ ನಿಂತಿದ್ದಾರೆ.
ಇಂಗ್ಲೆಂಡ್‌ನಲ್ಲಿ ಅತಿ ಹೆಚ್ಚು ಟೆಸ್ಟ್ ವಿಕೆಟ್ ಪಡೆದ ಭಾರತೀಯ ಬೌಲರ್ಸ್
ಜಸ್ಪ್ರೀತ್ ಬುಮ್ರಾ, 51 ವಿಕೆಟ್
ಇಶಾಂತ್ ಶರ್ಮಾ, 51 ವಿಕೆಟ್
ಮೊಹಮ್ಮದ್ ಸಿರಾಜ್, 46 ವಿಕೆಟ್
ಕಪಿಲ್ ದೇವ್, 43 ವಿಕೆಟ್
ಮೊಹಮ್ಮದ್ ಶಮಿ, 42 ವಿಕೆಟ್
ಬುಮ್ರಾ, ಇಶಾಂತ್‌ಗೆ ಜಂಟಿ ಅಗ್ರ ಸ್ಥಾನ
ಇಂಗ್ಲೆಂಡ್ ನೆಲದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಸಿರಾಜ್ ಮೂರನೇ ಸ್ಥಾನದಲ್ಲಿದ್ದಾರೆ. ಇವರಿಗಿಂತಲೂ ಮೊದಲು ಈ ಪಟ್ಟಿಯಲ್ಲಿ ಯಾರ್ಕರ್ ಸ್ಪೆಷಲಿಸ್ಟ್ ಜಸ್ಪ್ರೀತ್ ಬುಮ್ರಾ ಹಾಗೂ ಅನುಭವಿ ವೇಗದ ಬೌಲರ್ ಇಶಾಂತ್ ಶರ್ಮಾ ಇದ್ದು ಇವರಿಬ್ಬರ ಬುಟ್ಟಿಯಲ್ಲಿ 51 ವಿಕೆಟ್‌ಗಳಿವೆ. ಈ ಸರಣಿಯಲ್ಲಿ ಬುಮ್ರಾ 5 ಟೆಸ್ಟ್ ಪಂದ್ಯಗಳಲ್ಲಿ ಕೇವಲ 3 ಟೆಸ್ಟ್ ಪಂದ್ಯಗಳನ್ನು ಆಡುವಲ್ಲಿ ಮಾತ್ರ ಸಫಲರಾಗಿದ್ದರು.

ಸಿರಾಜ್ ಸಾಧನೆ
ಟೀಮ್ ಇಂಡಿಯಾದ ಭರವಸೆಯ ವೇಗದ ಬೌಲರ್ ಮೊಹಮ್ಮದ್ ಸಿರಾಜ್ 2020ರಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದರು. ಅಂದಿನಿಂದ ಇವರು ತಂಡದ ಅವಿಭಾಜ್ಯ ಅಂಗವಾಗಿದ್ದಾರೆ. ಇವರು ಆಡಿದ 41 ಟೆಸ್ಟ್ ಪಂದ್ಯಗಳಲ್ಲಿ 123 ವಿಕೆಟ್, ಏಕದಿನ ಕ್ರಿಕೆಟ್‌ನಲ್ಲಿ 71 ಹಾಗೂ ಟಿ20 ಕ್ರಿಕೆಟ್‌ನಲ್ಲಿ 14 ವಿಕೆಟ್ ಪಡೆದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications