Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Boxing Day Test: ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯಕ್ಕೆ ಮೂರು ದೇಶಗಳಲ್ಲಿ 6 ತಂಡಗಳು ಸಜ್ಜು; ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ

ಕ್ರಿಸ್‌ಮಸ್ ಹಬ್ಬದ ಮರುದಿನ ಪ್ರಾರಂಭವಾಗುವ ಟೆಸ್ಟ್ ಪಂದ್ಯವನ್ನು ಬಾಕ್ಸಿಂಗ್ ಡೇ ಟೆಸ್ಟ್ ಎಂದು ಕರೆಯಲಾಗುತ್ತದೆ. ಈ ಬಾರಿ, ಭಾರತ ಮತ್ತು ಆಸ್ಟ್ರೇಲಿಯಾವನ್ನು ಹೊರತುಪಡಿಸಿ, ಪಾಕಿಸ್ತಾನ ತಂಡವು ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ. ಇದರೊಂದಿಗೆ ಮೊದಲ ಬಾರಿಗೆ ಬಾಕ್ಸಿಂಗ್ ಡೇ ಟೆಸ್ಟ್ ಆಡುವ ತಂಡವೂ ಇದೆ. ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೂರು ದೇಶಗಳಲ್ಲಿ 6 ತಂಡಗಳು ನಡುವೆ ನಡಯಲಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಭಾರತ ತಂಡ ಆಸ್ಟ್ರೇಲಿಯಾ ಪ್ರವಾಸಲ್ಲಿದರೆ, ಪಾಕಿಸ್ತಾನ ತಂಡಕ್ಕೆ ದಕ್ಷಿಣ ಆಫ್ರಿಕಾ ಆತಿಥ್ಯವಹಿಸಿದೆ. ಮತ್ತೊಂದೆಡೆ 28 ವರ್ಷಗಳ ನಂತರ ಮೊದಲ ಬಾರಿಗೆ ಜಿಂಬಾಬ್ವೆ ತಂಡ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವನ್ನು ಆಡಲು ಸಜ್ಜಾಗಿದೆ. ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ತವರಿನಲ್ಲಿ ಜಿಂಬಾಬ್ವೆ ತಂಡ ಅಫ್ಘಾನಿಸ್ತಾನ ಎದುರಿಸಲಿದೆ.

Six teams from three countries set for Boxing Day Test

ಭಾರತ vs ಆಸ್ಟ್ರೇಲಿಯಾ

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿಯ ನಾಲ್ಕನೇ ಪಂದ್ಯವು ಡಿಸೆಂಬರ್ 26 ರಿಂದ 30 ರವರೆಗೆ ನಡೆಯಲಿದೆ. ಮೆಲ್ಬೋರ್ನ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯ ಅಭಿಮಾನಿಗಳಿಗೆ ಕುತೂಹಲ ಮೂಡಿಸಿದೆ. ಈ ಪಂದ್ಯದಲ್ಲಿ ಕ್ರಿಕೆಟ್ ಅಭಿಮಾನಿಗಳು ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರಂತಹ ಸೂಪರ್‌ಸ್ಟಾರ್‌ಗಳ ಪ್ರದರ್ಶನದ ಮೇಲೆ ಕಣ್ಣಿಟ್ಟಿದ್ದಾರೆ. ಭಾರತ ತಂಡ ಹಲವು ವರ್ಷಗಳಿಂದ ನಿರಂತರವಾಗಿ ಬಾಕ್ಸಿಂಗ್ ಡೇ ಟೆಸ್ಟ್ ಆಡುತ್ತಿರುವುದು ಕಂಡು ಬರುತ್ತಿದೆ. ಇದೀಗ ಮತ್ತೊಮ್ಮೆ ಭಾರತ ತಂಡ ಆಸ್ಟ್ರೇಲಿಯಾ ಜೊತೆಗೆ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯಲಿದೆ.

ದಕ್ಷಿಣ ಆಫ್ರಿಕಾ vs ಪಾಕಿಸ್ತಾನ

ಪಾಕಿಸ್ತಾನ ಕ್ರಿಕೆಟ್ ತಂಡ ಪ್ರಸ್ತುತ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿದೆ. ಈಗಾಗಲೇ ಉಭಯ ತಂಡಗಳು ಟಿ20 ಹಾಗೂ ಏಕದಿನ ಸರಣಿಗಳನ್ನು ಆಡಿವೆ. ಇದೀಗ ಟೆಸ್ಟ್ ಸರಣಿಯ ಸರದಿಯಾಗಿದ್ದು, ಉಭಯ ತಂಡಗಳ ನಡುವೆ 2 ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಈ ಸರಣಿಯ ಮೊದಲ ಪಂದ್ಯ ಡಿಸೆಂಬರ್ 26 ರಿಂದ ಸೆಂಚುರಿಯನ್‌ನಲ್ಲಿ ನಡೆಯಲಿದ್ದು, ಇದು ಬಾಕ್ಸಿಂಗ್ ಡೇ ಟೆಸ್ಟ್ ಆಗಿದೆ. ಈ ಸರಣಿಯ ಎರಡನೇ ಟೆಸ್ಟ್ ಪಂದ್ಯವು 3 ಜನವರಿ 2025 ರಿಂದ ಕೇಪ್ ಟೌನ್‌ನಲ್ಲಿ ನಡೆಯಲಿದೆ.

ಜಿಂಬಾಬ್ವೆ vs ಅಫ್ಘಾನಿಸ್ತಾನ

ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ಹೊರತುಪಡಿಸಿ, ಈ ಬಾರಿ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯಕ್ಕೆ ಜಿಂಬಾಬ್ವೆ ಕೂಡ ಅತಿಥ್ಯ ವಹಿಸಿದೆ. ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಜಿಂಬಾಬ್ವೆ ತಂಡವನ್ನು ಅಫ್ಘಾನಿಸ್ತಾನ ಎದುರಿಸಲಿದೆ. ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅಫ್ಘಾನಿಸ್ತಾನ ತಂಡ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವನ್ನು ಆಡುತ್ತಿರುವುದು ಇದೇ ಮೊದಲು. ಈ ಟೆಸ್ಟ್ ಪಂದ್ಯವು ಬುಲವಾಯೊದ ಕ್ವೀನ್ಸ್ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಡಿಸೆಂಬರ್ 26 ರಿಂದ 30 ರವರೆಗೆ ನಡೆಯಲಿದೆ.

ಜಿಂಬಾಬ್ವೆ 1996 ರಲ್ಲಿ ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಕೊನೆಯ ಬಾರಿಗೆ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವನ್ನು ಆಡಿತ್ತು. ಮಳೆಯಿಂದಾಗಿ ಈ ಪಂದ್ಯ ಡ್ರಾ ಆಗಿತ್ತು. ಅಂದಿನಿಂದ ಜಿಂಬಾಬ್ವೆ ತವರಿನಲ್ಲಿ ಒಂದೇ ಒಂದು ಬಾಕ್ಸಿಂಗ್ ಡೇ ಟೆಸ್ಟ್ ಆಡಿಲ್ಲ.

Story first published: Wednesday, December 25, 2024, 18:53 [IST]
Other articles published on Dec 25, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+