For Quick Alerts
ALLOW NOTIFICATIONS  
For Daily Alerts
 

ಟಿ20 ಕ್ರಿಕೆಟ್‌ನಲ್ಲಿ ವಿರಾಟ್‌ರ ದಾಖಲೆ ಮುರಿದ ಸೂರ್ಯ

ಟಿ20 ಕ್ರಿಕೆಟ್‌ನಲ್ಲಿ ಸೂರ್ಯಕುಮಾರ್ ಯಾದವ್ ಅವರ ಬ್ಯಾಟ್ ಅಬ್ಬರಿಸುತ್ತಿದೆ. ಸಿಕ್ಕ ಅವಕಾಶವನ್ನು ಬಳಸಿಕೊಳ್ಳುತ್ತಿರುವ ಸೂರ್ಯ ಟೀಮ್ ಇಂಡಿಯಾದ ಮಧ್ಯಮ ಕ್ರಮಾಂಕಕ್ಕೆ ಬಲ ತುಂಬಿರುವ ಪ್ಲೇಯರ್.. ಚುಟುಕು ಕ್ರಿಕೆಟ್‌ನಲ್ಲಿ ಹಲವು ದಾಖಲೆಗಳನ್ನು ಬರೆದಿರುವ ಸೂರ್ಯಕುಮಾರ್‌, ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಮತ್ತೊಂದು ದಾಖಲೆಗೆ ತಮ್ಮ ಹೆಸರನ್ನು ನಮೂದಿಸಿದ್ದಾರೆ.

ಟಿ20 ಕ್ರಿಕೆಟ್‌ನಲ್ಲಿ ಸೂರ್ಯ ಕಮಾಲ್‌ ಪ್ರದರ್ಶನ ನೀಡುತ್ತಿದ್ದಾರೆ. ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಮತ್ತೆ ಶತಕ ಬಾರಿಸಿದ್ದಾರೆ. ಅಲ್ಲದೆ, ಭಾರತ ಪರ ಟಿ20 ಮಾದರಿಯಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಸೂರ್ಯಕುಮಾರ್ ಯಾದವ್ ಎರಡನೇ ಸ್ಥಾನಕ್ಕೆ ತಲುಪಿದ್ದಾರೆ. ಸೂರ್ಯಕುಮಾರ್ ಯಾದವ್ ವಿರಾಟ್ ಕೊಹ್ಲಿಯನ್ನು ಹಿಂದಾಕಿದ್ದಾರೆ. ಸಿಕ್ಸರ್ ಬಾರಿಸುವ ಲೆಕ್ಕಾಚಾರದಲ್ಲಿ ರೋಹಿತ್ ಶರ್ಮಾ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ರೋಹಿತ್ ಶರ್ಮಾ ಟೀಂ ಇಂಡಿಯಾ ಪರ ಅತಿ ಹೆಚ್ಚು ಸಿಕ್ಸರ್ ಬಾರಿಸಿದ್ದಾರೆ.

SKY broke Virats record in T20 cricket

ಇದುವರೆಗೆ ಸೂರ್ಯಕುಮಾರ್ ಯಾದವ್ ಅಂತಾರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ 123 ಸಿಕ್ಸರ್ ಬಾರಿಸಿದ್ದಾರೆ. ಅದೇ ಸಮಯದಲ್ಲಿ, ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ವಿರಾಟ್ ಕೊಹ್ಲಿ ಅವರ ಹೆಸರಿನಲ್ಲಿ 117 ಸಿಕ್ಸರ್‌ಗಳಿವೆ. ರೋಹಿತ್ ಶರ್ಮಾ 182 ಸಿಕ್ಸರ್ ಬಾರಿಸಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಬಿರುಸಿನ ಶತಕ ಸಿಡಿಸಿದ್ದಾರೆ. ಸೂರ್ಯಕುಮಾರ್ ಯಾದವ್ 56 ಎಸೆತಗಳಲ್ಲಿ 100 ರನ್ ಗಳಿಸಿದರು. ಟೀಂ ಇಂಡಿಯಾದ ನಾಯಕ ಅವರ ಇನ್ನಿಂಗ್ಸ್‌ನಲ್ಲಿ 7 ಬೌಂಡರಿ ಮತ್ತು 8 ಸಿಕ್ಸರ್‌ ಸೇರಿವೆ. ಇದು ಸೂರ್ಯಕುಮಾರ್ ಯಾದವ್ ಅಂತಾರಾಷ್ಟ್ರೀಯ ಟಿ20 ವೃತ್ತಿ ಬದುಕಿನ ನಾಲ್ಕನೇ ಶತಕವಾಗಿದೆ.

ಸೂರ್ಯಕುಮಾರ್ ಯಾದವ್ ಹೊರತುಪಡಿಸಿ, ರೋಹಿತ್ ಶರ್ಮಾ ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್ ಅಂತರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ 4 ಬಾರಿ ಶತಕದ ಗಡಿ ದಾಟಿದ್ದಾರೆ.

SKY broke Virats record in T20 cricket

ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತ 20 ಓವರ್‌ಗಳಲ್ಲಿ 7 ವಿಕೆಟ್‌ಗೆ 201 ರನ್ ಗಳಿಸಿತು. ಈ ಮೂಲಕ ದಕ್ಷಿಣ ಆಫ್ರಿಕಾ ಗೆಲುವಿಗೆ 202 ರನ್‌ಗಳ ಗುರಿ ನೀಡಿತು. ದಕ್ಷಿಣ ಆಫ್ರಿಕಾ 95 ರನ್ ಗಳಿಗೆ ಆಲೌಟ್ ಆಯಿತು. ಈ ಮೂಲಕ ಟೀಮ್ ಇಂಡಿಯಾ 106 ರನ್ ಗಳ ಜಯ ದಾಖಲಿಸಿತು.

ಮೂರನೇ ಪಂದ್ಯದಲ್ಲಿ ಗೆಲುವು ದಾಖಲಿಸಿರುವ ಟೀಮ್ ಇಂಡಿಯಾ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಸಮಬಲ ಸಾಧಿಸಿದೆ. ಸರಣಿಯ ಮೊದಲ ಪಂದ್ಯ ಮಳೆಯಿಂದಾಗಿ ರದ್ಧಾಗಿತ್ತು. ಎರಡನೇ ಪಂದ್ಯವನ್ನು ದಕ್ಷಿಣ ಆಫ್ರಿಕಾ ಗೆದ್ದಿತ್ತು.

ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಸೂರ್ಯ ಆಡಿದ ಎರಡು ಇನಿಂಗ್ಸ್‌ಗಳಲ್ಲಿ 78ರ ಸರಾಸರಿಯಲ್ಲಿ 156 ರನ್ ಸಿಡಿಸಿದ್ದಾರೆ, ಈ ಮೂಲಕ ಗರಿಷ್ಠ ರನ್ ದಾಖಲಿಸಿದ ಆಟಗಾರ ಎನಿಸಿಕೊಂಡಿದ್ದಾರೆ.

Story first published: Friday, December 15, 2023, 16:55 [IST]
Other articles published on Dec 15, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+