Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಶ್ರೀಲಂಕಾಗೆ ತವರಿನಲ್ಲಿಯೇ ಆಘಾತ ನೀಡಿದ ಅಫ್ಘಾನಿಸ್ತಾನ: ಮೊದಲ ಪಂದ್ಯದಲ್ಲಿ ಅಮೋಘ ಗೆಲುವು

ಶ್ರೀಲಂಕಾ ಹಾಗೂ ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಪ್ರವಾಸಿ ಅಫ್ಘಾನಿಸ್ತಾನ ಭರ್ಜರಿಯಾಗಿ ಗೆಲುವು ಸಾಧಿಸಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡು ವಿಭಾಗದಲ್ಲಿಯೂ ಶ್ರೀಲಂಕಾ ವಿರುದ್ಧ ಸಂಪೂರ್ಣ ಮೇಲುಗೈ ಸಾಧಿಸಿದ ಅಫ್ಘನ್ ಪಡೆ ಭರ್ಜರಿ 6 ವಿಕೆಟ್‌ಗಳ ಅಂತರದ ಗೆಲುವು ಸಾಧಿಸಿದ್ದು ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲಿಗೆ ಬೌಲಿಂಗ್ ಆಯ್ಲೆ ಮಾಡಿಕೊಂಡ ಅಫ್ಘಾನಿಸ್ತಾನ ತಂಡ ಆರಂಭದಲ್ಲಿಯೇ ಯಶಸ್ಸು ಸಾಧಿಸಿತು. ಅಗ್ರ ಕ್ರಮಾಂಕದ ಆಟಗಾರರಿಂದ ದೊಡ್ಡ ಜೊತೆಯಾಟ ಬಾರದಂತೆ ನೋಡಿಕೊಳ್ಳುವಲ್ಲಿ ಅಫ್ಘನ್ ಬೌಲಿಂಗ್ ವಿಭಾಗ ಯಶಸ್ವಿಯಾಯಿತು. ಅಗ್ರ ಕ್ರಮಾಂಕದಲ್ಲಿ ಫಾತುಮ್ ನಿಸ್ಸಂಕ 38 ರನ್‌ಗಳಿಸಿದ್ದು ಹೊರತುಪಡಿಸಿದರೆ ಕರುಣರತ್ನೆ, ಕುಸಲ್ ಮೆಂಡಿಸ್ ಹಾಗೂ ಮ್ಯಾಥ್ಯೂಸ್ ಅಲ್ಪ ಮೊತ್ತಕ್ಕೆ ವಿಕೆಟ್ ಕಳೆದುಕೊಂಡರು. ಹೀಗಾಗಿ ಶ್ರೀಲಂಕಾ ತಂಡವನ್ನು ಅಲ್ಪ ಮೊತ್ತಕ್ಕೆ ಕಟ್ಟಿ ಹಾಕುವ ಆತ್ಮವಿಶ್ವಾಸ ಅಫ್ಘನ್ ಬೌಲರ್‌ಗಳಲ್ಲಿ ಕಂಡಿತ್ತು.

SL vs AFG, 1st ODI: Afghanistan won 1st ODI against Sri Lanka by 6 wickets

ಆದರೆ ಮಧ್ಯಮ ಕ್ರಮಾಂಕದ ಆಟಗಾರರಾದ ಅಸಲಂಕ ಹಾಗೂ ಧನಂಜಯ ಡಿಸಿಲ್ವ ಭರ್ಜರಿ 99 ರನ್‌ಗಳ ಜೊತೆಯಾಟ ನೀಡುವ ಮೂಲಕ ಲಂಕಾ ಪಡೆಗೆ ಚೇತರಿಕೆ ನೀಡಿದರು. ತಂಡದ ಮೊತ್ತ 183 ರನ್‌ಗಳಾಗಿದ್ದಾಗ ಧನಂಜಯ 51 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. ಅಸಲಂಕಾ ಕೊನೆಯ ಓವರ್‌ವರೆಗೂ ಹೋರಾಟ ನಡೆಸಿದ್ದು 95 ಎಸೆತಗಳಲ್ಲಿ 91 ರನ್‌ಗಳಿಸಿ ರನೌಟ್ ಆಗುವ ಮೂಲಕ ವಿಕೆಟ್ ಕಳೆದುಕೊಂಡರು. ಹೀಗಾಗಿ ಶ್ರೀಲಂಕಾ ತಂಡ ಈ ಪಂದ್ಯದಲ್ಲಿ 268 ರನ್‌ಗಳ ಉತ್ತಮ ಮೊತ್ತವನ್ನು ಗಳಿಸಲು ಸಾಧ್ಯವಾಯಿತು.

ಇನ್ನು ಈ ಮೊತ್ತವನ್ನು ಬೆನ್ನಟ್ಟಿದ ಅಫ್ಘಾನಿಸ್ಥಾನ ತಂಡ ಕೂಡ ಮೊದಲ ವಿಕೆಟನ್ನು 25 ರನ್‌ಗಳಾಗಿದ್ದಾಗ ಕಳೆದುಕೊಂಡಿತು. ಆದರೆ ಎರಡನೇ ವಿಕೆಟ್‌ಗೆ ಇಬ್ರಾಹಿಮ್ ಜದ್ರಾನ್ ಹಾಗೂ ರಹ್ಮತ್ ಶಾ ಅವರ ಅದ್ಭುತ ಜೊತೆಯಾಟ ಲಂಕಾಗೆ ಆಘಾತ ನೀಡಿತು. ಈ ಜೋಡಿ ಎರಡನೇ ವಿಕೆಟ್ಗೆ ಭರ್ಜರಿ 146 ರನ್‌ಗಳ ಜೊತೆಯಾಟ ನೀಡಿದರು. ಈ ಸಂದರ್ಭದಲ್ಲಿ 98 ಎಸೆತಗಳಲ್ಲಿ 98 ರನ್‌ಗಳಿಸಿದ್ದ ಜದ್ರಾನ್ ಕೇವಲ 2 ರನ್‌ಗಳಿಂದ ಶತಕ ವಂಚಿತವಾದರು. ರಹ್ಮತ್ ಶಾ 55 ನ್‌ಗಳಿಸಿ ಔಟಾದರೆ ನಾಯಕ ಹಶ್ಮತುಲ್ಲಾ 38 ರನ್‌ಗಳಿಸಿದರು. ಅಂತಿಮವಾಗಿ ಮೊಹಮ್ಮದ್ ನಬಿ ಹಾಗೂ ನಜಿಬುಲ್ಲಾ ಜದ್ರಾನ್ ಗೆಲುವಿನ ದಡ ಸೇರಿಸಿದರು.

ಇನ್ನೂ 19 ಎಸೆತಗಳು ಬಾಕಿಯಿರುವಂತೆಯೇ ಅಫ್ಘಾನಿಸ್ತಾನ ತಂಡ 6 ವಿಕೆಟ್‌ಗಳ ಅಂತರದ ಅಮೋಘ ಗೆಲುವು ಸಾಧಿಸಿದೆ. ಇನ್ನು ಶ್ರೀಲಂಕಾ ತಮಡ ತವರಿನಲ್ಲಿಯೇ ಅಫ್ಘಾನಿಸ್ತಾನದ ವಿರುದ್ಧ ಆಘಾತಕಾರಿ ಸೋಲು ಅನುಭವಿಸಿದ್ದು ಮೂರು ಪಂದ್ಯಗಳ ಸರಣಿಯಲ್ಲಿ ಈಗ ಒತ್ತಡಕ್ಕೆ ಸಿಲುಕಿದೆ.

ಶ್ರೀಲಂಕಾ ಆಡುವ ಬಳಗ: ಪಾತುಮ್ ನಿಸ್ಸಾಂಕ, ದಿಮುತ್ ಕರುಣಾರತ್ನೆ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಏಂಜೆಲೊ ಮ್ಯಾಥ್ಯೂಸ್, ದಸುನ್ ಶನಕ (ನಾಯಕ), ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವಾ, ದುಶನ್ ಹೇಮಂತ, ಕಸುನ್ ರಜಿತ, ಮಥೀಶ ಪತಿರಣ, ಲಹಿರು ಕುಮಾರ
ಬೆಂಚ್: ಚಾಮಿಕ ಕರುಣಾರತ್ನ, ವನಿಂದು ಹಸರಂಗ, ದುಷ್ಮಂತ ಚಮೀರ, ಸದೀರ ಸಮರವಿಕ್ರಮ, ಮಹೇಶ್ ತೀಕ್ಷಣ

ಅಫ್ಘಾನಿಸ್ತಾನ ಆಡುವ ಬಳಗ: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಝದ್ರಾನ್, ರಹಮತ್ ಷಾ, ಹಶ್ಮತುಲ್ಲಾ ಶಾಹಿದಿ (ನಾಯಕ), ನಜೀಬುಲ್ಲಾ ಜದ್ರಾನ್, ಮೊಹಮ್ಮದ್ ನಬಿ, ಅಜ್ಮತುಲ್ಲಾ ಒಮರ್ಜಾಯ್, ಮುಜೀಬ್ ಉರ್ ರಹಮಾನ್, ನೂರ್ ಅಹ್ಮದ್, ಫಜಲ್ಹಕ್ ಫಾರೂಕಿ, ಫರೀದ್ ಅಹ್ಮದ್ ಮಲಿಕ್
ಬೆಂಚ್: ಇಕ್ರಂ ಅಲಿಖಿಲ್, ಅಬ್ದುಲ್ ರೆಹಮಾನ್, ರಿಯಾಜ್ ಹಸನ್

Story first published: Friday, June 2, 2023, 18:23 [IST]
Other articles published on Jun 2, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+