ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

Aus vs SL 2ನೇ ಟೆಸ್ಟ್: ಶ್ರೀಲಂಕಾ ಪಡೆಗೆ ಕೋವಿಡ್ ಆಘಾತ: ಮೂವರು ಆಟಗಾರರಿಗೆ ಕೋವಿಡ್ ದೃಢ

SL vs AUS: 3 Sri Lankan cricketers test positive for Covid-19 ahead of 2nd Test match against Australia

ಆಸ್ಟ್ರೇಲಿಯಾ ಹಾಗೂ ಶ್ರೀಲಂಕಾ ತಂಡಗಳು ಟೆಸ್ಟ್ ಸರಣಿಯ ಅಂತಿಮ ಹಾಗೂ ಎರಡನೇ ಟೆಸ್ಟ್ ಪಂದ್ಯವನ್ನಾಡಲು ಸಜ್ಜಾಗುತ್ತಿದೆ. ಆದರೆ ಈ ಸಂದರ್ಭದಲ್ಲಿ ಶ್ರೀಲಂಕಾ ತಂಡಕ್ಕೆ ಕೊರೊನಾವೈರಸ್ ಆಘಾತ ನಿಡಿದೆ. ಶ್ರೀಲಂಕಾ ಸ್ಕ್ವಾಡ್‌ನಲ್ಲಿ ಕೊರೊನಾವೈರಸ್ ಕಾಣಿಸಿಕೊಂಡಿದ್ದು ಮೂವರು ಆಟಗಾರರಿಗೆ ದೃಢಪಟ್ಟಿದೆ. ಹೀಗಾಗಿ ಎರಡನೇ ಟೆಸ್ಟ್ ಪಂದ್ಯದ ಆರಂಭಕ್ಕೆ ಮುನ್ನವೇ ಶ್ರೀಲಂಕಾ ತಂಡ ಸಂಕಷ್ಟಕ್ಕೆ ಸಿಲುಕಿದಂತಾಗಿದೆ.

ಶ್ರೀಲಂಕಾದ ಕ್ರಿಕೆಟಿಗರಾದ ಧನಂಜಯ ಡಿಸಿಲ್ವ, ಜೆಫ್ರಿ ವಾಂಡರ್ಸೆ ಹಾಗೂ ಅಸಿತಾ ಫೆರ್ನಾಂಡೋ ಕೊರೊನಾವೈರಸ್ ದೃಢಪಟ್ಟಿರುವ ಶ್ರೀಲಂಕಾ ಆಟಗಾರರಾಗಿದ್ದಾರೆ. ಜುಲೈ 8 ಶುಕ್ರವಾರದಂದು ಆಸ್ಟ್ರೇಲಿಯಾ ಹಾಗೂ ಶ್ರೀಲಂಕಾ ತಂಡಗಳು ಎರಡನೇ ಟೆಸ್ಟ್ ಪಂದ್ಯದಲ್ಲಿ ಮುಖಾಮುಖಿಯಾಗಲಿದ್ದು ಗಾಲ್ಲೆ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ.

ಭಾರತ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್‌ ಪ್ರವೇಶಿಸಲು ಈ 2 ತಂಡಗಳು ಇಷ್ಟು ಪಂದ್ಯ ಸೋಲಲೇಬೇಕು!ಭಾರತ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್‌ ಪ್ರವೇಶಿಸಲು ಈ 2 ತಂಡಗಳು ಇಷ್ಟು ಪಂದ್ಯ ಸೋಲಲೇಬೇಕು!

ಅಧಿಕೃತ ಮಾಹಿತಿ ನೀಡಿದ ಲಂಕಾ

ಅಧಿಕೃತ ಮಾಹಿತಿ ನೀಡಿದ ಲಂಕಾ

ಇನ್ನು ಶ್ರೀಲಂಕಾ ಕ್ರಿಕೆಟ್ ತಂಡದ ಮೂವರು ಆಟಗಾರರು ಕೋವಿಡ್‌ಗೆ ತುತ್ತಾಗಿರುವ ವಿಚಾರವನ್ನು ಶ್ರೀಲಂಕಾ ಕ್ರಿಕೆಟ್ ಮಂಡಳಿ ದೃಢಪಡಿಸಿದೆ. "ನಿನ್ನೆ ನಡೆಸಿದ ರ್ಯಾಪಿಡ್ ಆಂಟಿಜೆನ್ ಟೆಸ್ಟ್‌ನಲ್ಲಿ ಶ್ರೀಲಂಕಾದ ಮೂವರು ಆಟಗಾರರು ಪಾಸಿಟಿವ್ ವರದಿ ಪಡೆದುಕೊಂಡಿದ್ದಾರೆ" ಎಂದಿ ಶ್ರೀಲಂಕಾ ಕ್ರಿಕೆಟ್ ಗುರುವಾರದಂದು ಮಾಹಿತಿ ನೀಡಿದೆ. ಹೀಗಾಗಿ ಶುಕ್ರವಾರ ನಡೆಯಲಿರುವ ಪಂದ್ಯಕ್ಕೆ ಈ ಮೂವರು ಆಟಗಾರರು ಅಲಭ್ಯವಾಗಲಿದ್ದಾರೆ.

ಮೊದಲ ಪಂದ್ಯದಲ್ಲಿ ಸುಲಭವಾಗಿ ಸೋಲು ಕಂಡಿದ್ದ ಲಂಕಾ

ಮೊದಲ ಪಂದ್ಯದಲ್ಲಿ ಸುಲಭವಾಗಿ ಸೋಲು ಕಂಡಿದ್ದ ಲಂಕಾ

ಇನ್ನು ಆಸ್ಟ್ರೇಲಿಯಾ ವಿರುದ್ಧ ತವರಿನಲ್ಲಿ ನಡೆಯುತ್ತಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ಶ್ರೀಲಂಕಾ ತಂಡವನ್ನು ಸುಲಭವಾಗಿ ಮಣಿಸಿದೆ. ಶ್ರೀಲಂಕಾದ ಸ್ಪಿನ್ ಸ್ನೇಹಿ ಪಿಚ್‌ಅನ್ನು ಆಸ್ಟ್ರೇಲಿಯಾದ ಅನುಭವಿ ಬೌಲರ್ ನಾಥನ್ ಲಿಯಾನ್ ಅದ್ಭುತವಾಗಿ ಬಳಸಿಕೊಂಡು ಲಂಕಾ ದಾಂಡಿಗರ ವಿರುದ್ಧ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾಗಿದ್ದರು. ಶ್ರೀಲಂಕಾದ ದಾಂಡಿಗರು ಈ ಪಂದ್ಯದಲ್ಲಿ ಸಂಪೂರ್ಣವಾಗಿ ವಿಫಲವಾಗುವ ಮೂಲಕ ಆಸಿಸ್ ಪಡೆಗೆ ಸುಲಭ ಸವಾಲಾದರು.

ಎರಡನೇ ಪಂದ್ಯದಲ್ಲಿ ತಿರುಗಿ ಬೀಳುವ ವಿಶ್ವಾಸದಲ್ಲಿ ಲಂಕಾ

ಎರಡನೇ ಪಂದ್ಯದಲ್ಲಿ ತಿರುಗಿ ಬೀಳುವ ವಿಶ್ವಾಸದಲ್ಲಿ ಲಂಕಾ

ಇನ್ನು ಮೊದಲ ಪಂದ್ಯದಲ್ಲಿ ಸೋಲು ಅನುಭವಿಸಿರುವ ಶ್ರೀಲಂಕಾ ತಂಡ ಎರಡನೇ ಪಂದ್ಯದಲ್ಲಿ ತಿರುಗಿ ಬೀಳುವ ವಿಶ್ವಾಸದಲ್ಲಿದೆ. ಆತಿಥೆಯ ತಂಡ ತನ್ನ ಸ್ಪಿನ್ನರ್‌ಗಳ ಮೇಲೆ ಹೆಚ್ಚು ಅವಲಂಬಿತವಾಗಿದ್ದು ಅವರಿಂದ ಅದ್ಭುತ ಪ್ರದರ್ಶನದ ನಿರೀಕ್ಷೆಯಲ್ಲಿದೆ. ಮೊದಲ ಪಂದ್ಯದಲ್ಲಿ ಪಿಚ್ ಸಂಪೂರ್ಣವಾಗಿ ಸ್ಪಿನ್ನರ್‌ಗಳಿಗೆ ನೆರವಾಗಿದ್ದು ಎರಡನೇ ಪಂದ್ಯದಲ್ಲಿಯೂ ಇದು ಮುಂದುವರಿಯುವ ನಿರೀಕ್ಷೆಯಿದೆ. ಇನ್ನು ಡಿಸಿಲ್ವ, ಫೆರ್ನಾಂಡೋ ಹಾಗೂ ವಂಡರ್ಸೆ ಎರಡನೇ ಪಂದ್ಯಕ್ಕೆ ಅಲಭ್ಯವಾಗಲಿರುವ ಕಾರಣ ಯುವ ಸ್ಪಿನ್ ಜೋಡಿಯಾದ ಮಹೀಶ ತೀಕ್ಷಣ ಹಾಗೂ ದುನಿತ್ ವೆಲ್ಲಲಗೆ ಟೆಸ್ಟ್ ಮಾದರಿಗೆ ಪದಾರ್ಪಣೆ ಮಾಡುವ ಸಾಧ್ಯತೆಯಿದೆ,

MS Dhoni turns 41 ಬ್ರಿಟನ್ ನಲ್ಲಿ ಧೋನಿ ಹುಟ್ಟು ಹಬ್ಬ !! | *Cricket | Oneindia Kannada
ಸ್ಕ್ವಾಡ್‌ಗಳು ಹೀಗಿದೆ

ಸ್ಕ್ವಾಡ್‌ಗಳು ಹೀಗಿದೆ

ಶ್ರೀಲಂಕಾ: ಪಾತುಮ್ ನಿಸ್ಸಾಂಕ, ದಿಮುತ್ ಕರುಣಾರತ್ನೆ (ನಾಯಕ), ಕುಸಾಲ್ ಮೆಂಡಿಸ್, ಓಷಾದ ಫೆರ್ನಾಂಡೋ, ಧನಂಜಯ ಡಿ ಸಿಲ್ವಾ, ದಿನೇಶ್ ಚಾಂಡಿಮಾಲ್, ನಿರೋಶನ್ ಡಿಕ್ವೆಲ್ಲಾ (ವಿಕೆಟ್ ಕೀಪರ್), ರಮೇಶ್ ಮೆಂಡಿಸ್, ಜೆಫ್ರಿ ವಾಂಡರ್ಸೆ, ಲಸಿತ್ ಎಂಬುಲ್ಡೆನಿಯಾ, ಅಸಿತ ಫೆರ್ನಾಂಡೋ, ಏಂಜೆಲೊ ಮ್ಯಾಥೆರ್ನಾನ್, ವಿಶ್ವಾ ಮ್ಯಾಥ್ಯೂಸ್ ರಜಿತಾ, ಕಮಿಂದು ಮೆಂಡಿಸ್, ಪ್ರವೀಣ್ ಜಯವಿಕ್ರಮ, ದಿಲ್ಶನ್ ಮಧುಶಂಕ

ಆಸ್ಟ್ರೇಲಿಯಾ ಸ್ಕ್ವಾಡ್: ಉಸ್ಮಾನ್ ಖವಾಜಾ, ಡೇವಿಡ್ ವಾರ್ನರ್, ಮಾರ್ನಸ್ ಲ್ಯಾಬುಶೈನ್, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮ್ಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಮಿಚೆಲ್ ಸ್ವೆಪ್ಸನ್ ಬೆಂಚ್, ಮಿಚೆಲ್ ಮಾರ್ಷ್, ಜೋಶ್ ಹ್ಯಾಜಲ್ವುಡ್, ಗ್ಲೆನ್ ಮ್ಯಾಕ್ಸ್‌ವೆಲ್, ಆಶ್ಟನ್ ಅಗರ್ , ಸ್ಕಾಟ್ ಬೋಲ್ಯಾಂಡ್, ಜೋಶ್ ಇಂಗ್ಲಿಸ್

Story first published: Thursday, July 7, 2022, 15:29 [IST]
Other articles published on Jul 7, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X