1992 ಬಳಿಕ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಕ್ರಿಕೆಟ್‌ನಲ್ಲಿ ವಿಶೇಷ ಸಾಧನೆ ಮಾಡಿದ ಶ್ರೀಲಂಕಾ

ಆಸ್ಟ್ರೇಲಿಯಾ ಹಾಗೂ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಶ್ರೀಲಂಕಾ ಅದ್ಭುತ ಪ್ರದರ್ಶನ ನೀಡುತ್ತಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ತಂಡ 364 ರನ್‌ಗಳಿಸಿ ಆಲವಟ್ ಆದ ಬಳಿಕ ಬ್ಯಾಟಿಂಗ್ ನಡೆಸಿದ ಶ್ರೀಲಂಕಾ ಬೃಹತ್ ಮೊತ್ತವನ್ನು ಕಲೆ ಹಾಕಿದೆ. 554 ರನ್‌ಗಳಿಸಿ ಮೊದಲ ಇನ್ನಿಂಗ್ಸ್ ಅಂತ್ಯಗೊಳಿಸಿದೆ. ಈ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ಶ್ರೀಲಂಕಾ ತಂಡ 30 ವರ್ಷಗಳ ಬಳಿಕ ವಿಶೇಷ ಸಾಧನೆ ಮಾಡಿದೆ.
ಈ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಶ್ರೀಲಂಕಾ ತಂಡ ಅತ್ಯಂತ ಹೀನಾಯವಾಗಿ ಸೋಲು ಅನುಭವಿಸಿತ್ತು. ಹೀಗಾಗಿ ಎರಡು ಪಂದ್ಯಗಳ ಸರಣಿಯಲ್ಲಿ ಸಮಬಲದ ಸಾಧನೆ ಮಾಡಬೇಕಾದರೆ ಶ್ರೀಲಂಕಾ ತಮಡ ಈ ಪಂದ್ಯದಲ್ಲಿ ಗೆಲುವು ಸಾಧಿಸಲೇಬೇಕಿದೆ. ಅದಕ್ಕೆ ಪೂರಕವಾಗಿ ಶ್ರೀಲಂಕಾ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದೆ.

1992ರ ಬಳಿಕ ಶ್ರೀಲಂಕಾ ವಿಶೇಷ ಸಾಧನೆ
ಈ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡುವ ಮೂಲಕ ಶ್ರೀಲಂಕಾ ತಂಡ ವಿಶೆಷ ಸಾಧನೆಯೊಂದನ್ನು ಮಾಡಿದೆ. 1992ರ ಬಳಿಕ ಟೆಸ್ಟ್ ಕ್ರಿಕೆಟ್ ಮಾದರಿಯಲ್ಲಿ ಆಸ್ಟ್ರೇಲಿಯಾ ತಂಡದ ವಿರುದ್ಧ 500ಕ್ಕೂ ಅಧಿಕ ರನ್‌ಗಳನ್ನು ಇದೇ ಮೊದಲ ಬಾರಿಗೆ ಗಳಿಸಿದೆ. ಈ ಮೂಲಕ ಶ್ರೀಲಂಕಾ ಕ್ರಿಕೆಟ್ ತಂಡ ಇತಿಹಾಸ ಬರೆದಿದೆ. ಪಂದ್ಯದ ನಾಲ್ಕನೇ ದಿನಾಟದಲ್ಲಿ ಶ್ರೀಲಂಕಾ ಈ ಮೈಲಿಗಲ್ಲು ದಾಟಿತು.

ದಿನೇಶ್ ಚಾಂಡಿಮಲ್ ದ್ವಿಶತಕ
ಇನ್ನು ಶ್ರೀಲಂಕಾ ತಂಡ ಈ ಅದ್ಭುತ ಪ್ರದರ್ಶನದಲ್ಲಿ ಮಹತ್ವದ ಪಾತ್ರವಹಿಸಿದ್ದು ದಿನೇಶ್ ಚಾಂಡಿಮಲ್. ಉತ್ತಮ ಫಾರ್ಮ್‌ನಲ್ಲಿರುವ ಚಾಂಡಿಮಲ್ ಅಮೋಘ ದ್ವಿಶತಕವನ್ನು ಈ ಪಂದ್ಯದಲ್ಲಿ ಸಿಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಜೇಯ 206 ರನ್‌ಗಳಿಸಿದ ಚಾಂಡಿಮಲ್ ಶ್ರೀಲಂಕಾ ತಮಡ ಮೊದಲ ಇನ್ನಿಂಗ್ಸ್‌ನಲ್ಲಿ 554 ರನ್‌ಗಳಿಸಲು ಕಾರಣವಾದರು. ಇನ್ನು ನಾಯಕ ಕರುಣರತ್ನೆ ಹಾಗೂ ಕುಸಾಲ್ ಮೆಂಡಿಸ್ ಕೂಡ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದು ಕ್ರಮವಾಗಿ 86 ಹಾಗೂ 85 ರನ್‌ಗಳ ಕೊಡುಗೆ ನೀಡಿದ್ದಾರೆ. ಈ ಇಬ್ಬರು ಕೂಡ ಶತಕದಂಚಿನಲ್ಲಿ ಎಡವಿದ್ದಾರೆ.

ಆಸಿಸ್ ಪರ ಲ್ಯಾಬುಶೈನ್, ಸ್ಮಿತ್ ಶತಕ
ಇನ್ನು ಇದಕ್ಕೂ ಮುನ್ನ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ನಡೆಸಿದಾಗ ಆಸಿಸ್ ತಂಡದ ಪ್ರಮುಖ ಆಟಗಾರರಾದ ಸ್ಟೀವ್ ಸ್ಮಿತ್ ಹಾಗೂ ಮಾರ್ನಾಸ್ ಲ್ಯಾಬುಶೈನ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಆದರೆ ಇತರ ಆಟಗಾರರಿಂದ ಉತ್ತಮ ಪ್ರದರ್ಶನ ಬಾರದ ಕಾರಣದಿಂದಾಗಿ ಆಸ್ಟ್ರೇಲಿಯಾ 364 ರನ್‌ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿದೆ. ಇನ್ನು ಇದೀಗ ಆಸ್ಟ್ರೇಲಿಯಾ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದು ಆರಂಭಿಕ ಹಿನ್ನಡೆ ಅನುಭವಿಸಿದೆ. ಲಂಕಾ ಬೌಲರ್‌ಗಳು ಮೇಲುಗೈ ಸಾಧಿಸುವ ಸೂಚನೆ ನೀಡಿದ್ದಾರೆ.

ಇತ್ತಂಡಗಳ ಆಡುವ ಬಳಗ
ಶ್ರೀಲಂಕಾ: ಪಾತುಮ್ ನಿಸ್ಸಾಂಕ, ದಿಮುತ್ ಕರುಣಾರತ್ನೆ (ನಾಯಕ), ಕುಸಾಲ್ ಮೆಂಡಿಸ್, ಏಂಜೆಲೊ ಮ್ಯಾಥ್ಯೂಸ್, ದಿನೇಶ್ ಚಾಂಡಿಮಾಲ್, ಕಮಿಂದು ಮೆಂಡಿಸ್, ನಿರೋಶನ್ ಡಿಕ್ವೆಲ್ಲಾ (ವಿಕೆಟ್ ಕೀಪರ್), ರಮೇಶ್ ಮೆಂಡಿಸ್, ಮಹೀಶ್ ತೀಕ್ಷಣ, ಪ್ರಭಾತ್ ಜಯಸೂರ್ಯ, ಕಸುನ್ ರಜಿತ, ಓಷಾದ ಫೆರ್ನಾಂಡೋ
ಚೆಂಚ್: ದುನಿತ್ ವೆಲ್ಲಲಾಗೆ, ಚಾಮಿಕ ಕರುಣಾರತ್ನ, ವಿಶ್ವ ಫೆರ್ನಾಂಡೋ, ಪ್ರವೀಣ್ ಜಯವಿಕ್ರಮ, ಲಕ್ಷಿತ ಮಾನಸಿಂಗ, ದಿಲ್ಶಾನ್ ಮಧುಶಂಕ
ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಮಿಚೆಲ್ ಸ್ವೆಪ್ಸನ್
ಬೆಂಚ್: ಗ್ಲೆನ್ ಮ್ಯಾಕ್ಸ್ವೆಲ್, ಸ್ಕಾಟ್ ಬೋಲ್ಯಾಂಡ್, ಜೋಶ್ ಇಂಗ್ಲಿಸ್, ಜೋಶ್ ಹ್ಯಾಜಲ್ವುಡ್, ಮಿಚೆಲ್ ಮಾರ್ಷ್, ಜಾನ್ ಹಾಲೆಂಡ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications