ಆಸ್ಟ್ರೇಲಿಯಾ vs ಶ್ರೀಲಂಕಾ: ಗಾಯಗೊಂಡ ಆಸಿಸ್ ವೇಗದ ಅಸ್ತ್ರ: 2ನೇ ಪಂದ್ಯಕ್ಕೆ ಸ್ಟಾರ್ ಆಟಗಾರ ಅಲಭ್ಯ

ಆಸ್ಟ್ರೇಲಿಯಾ ಹಾಗೂ ಶ್ರೀಲಂಕಾ ವಿರುದ್ಧದ ಟಿ20 ಸರಣೀ ಆರಂಬವಾಗಿದ್ದು ಮೊದಲ ಪಂದ್ಯದಲ್ಲಿ ಪ್ರವಾಸಿ ಆಸ್ಟ್ರೇಲಿಯಾ ತಂಡ ಅದ್ಭುತ ಪ್ರದರ್ಶನ ನೀಡಿ 10 ವಿಕೆಟ್‌ಗಳ ಅಂತರದ ಗೆಲುವು ಸಾಧಿಸಿದೆ. ಈ ಗೆಲುವಿನ ಸಂಭ್ರಮದಲ್ಲಿರುವ ಆಸಿಸ್ ಪಡೆಗೆ ಸಣ್ಣ ಹಿನ್ನಡೆಯೊಂದು ಉಂಟಾಗಿದೆ. ತಂಡದ ಪ್ರಮುಖ ಬೌಲಿಂಗ್ ಅಸ್ತ್ರವಾಗಿರುವ ಮಿಚೆಲ್ ಸ್ಟಾರ್ಕ್‌ಗೆ ಗಾಯವಾಗಿದ್ದು ಎರಡನೇ ಪಂದ್ಯಕ್ಕೆ ಅಲಭ್ಯವಾಗಲಿದ್ದಾರೆ.
ಶ್ರೀಲಂಕಾ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿಯೇ ಆಸಿಸ್ ವೇಗಿ ಸ್ಟಾರ್ಕ್ ಗಾಯಗೊಂಡಿದ್ದಾರೆ. ಈ ಪಂದ್ಯದಲ್ಲಿ ಮೊದಲ ಓವರ್‌ನಲ್ಲಿ ಸ್ಟಾರ್ಕ್ ಅವರ ತೋರು ಬೆರಳಿಗೆ ಗಾಯವಾಗಿತ್ತು. ಅಂಗಳದಲ್ಲಿಯೇ ಚಿಕಿತ್ಸೆ ಪಡೆದ ಸ್ಟಾರ್ಕ್ ಬಳಿಕ ತಮ್ಮ ನಾಲ್ಕು ಓವರ್‌ಗಳ ಕೋಟಾವನ್ನು ಪೂರ್ಣಗೊಳಿಸಿದ್ದರು. ಈ ಪಂದ್ಯದಲ್ಲಿ ಸ್ಟಾರ್ಕ್ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ್ದು 26 ರನ್‌ಗಳಿಗೆ ಪ್ರಮುಖ 3 ವಿಕೆಟ್ ಕಬಳಿಸಿದರು.

ಸ್ಟಾರ್ಕ್ ಬದಲಿಗೆ ಕಣಕ್ಕಿಳಿಯುವ ಆಟಗಾರ
ಇನ್ನು ಸ್ಟಾರ್ಕ್ ಎರಡನೇ ಪಂದ್ಯಕ್ಕೆ ಅಲಭ್ಯವಾಗುವುದು ಖಚಿತವಾಗಿರುವುದರಿಂದ ಆ ಸ್ಥಾನದಲ್ಲಿ ಜೇ ರಿಚರ್ಡ್ಸನ್ ಅಥವಾ ಶಾನ್ ಅಬಾಟ್‌ಗೆ ಅವಕಾಶ ದೊರೆಯಬಹುದು. ಅಥವಾ ಪ್ರತಿಭಾನ್ವಿತ ಸ್ಪಿನ್ನರ್ ಮಿಚೆಲ್ ಸ್ವೆಪ್ಸನ್‌ಗೆ ಅವಕಾಶ ದೊರೆತರೂ ಅಚ್ಚರಿಯಿಲ್ಲ. ಬುಧವಾರ ಎರಡನೇ ಪಂದ್ಯ ನಡೆಯಲಿದೆ.

ಭಾರೀ ಕುಸಿತ ಕಂಡ ಶ್ರೀಲಂಕಾ
ಇನ್ನು ಈ ಸರಣಿಯ ಮೊದಲ ಪಂದ್ಯದಲ್ಲಿ ಶ್ರೀಲಂಕಾ ಮೊದಲಿಗೆ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿ ಅದ್ಭುತ ಆರಂಭವನ್ನು ಪಡೆದಿತ್ತು. 12ನೇ ಓವರ್‌ನಲ್ಲಿ 100 ರನ್‌ಗಳ ಗೆಇ ತಲುಪಿದ್ದ ಲಂಕಾ ಕೇವಲ ಒಂದು ವಿಕೆಟ್ ಕಳೆದುಕೊಂಡು ದೊಡ್ಡ ಮೊತ್ತವನ್ನು ಗಳಿಸುವ ನಿರೀಕ್ಷೆ ಮೂಡಿಸಿತ್ತು. ಆದರೆ ಅದಾದ ಬಳಿಕ ಯಾರೂ ನಿರೀಕ್ಷಿಸದಂತಾ ಕುಸಿತ ಕಂಡ ಶ್ರೀಲಂಕಾ ಮುಂದಿನ 28 ರನ್‌ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡಿತು.

ಸುಲಭ ಗೆಲುವು ಸಾಧಿಸಿದ ಆಸ್ಟ್ರೇಲಿಯಾ
ಇನ್ನು ಈ ಮೊತ್ತವನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡ ಯಾವುದೇ ವಿಕೆಟ್ ಕಳೆದುಕೊಳ್ಳದೆ ಲಂಕಾ ನೀಡಿದ್ದ ಈ ಗುರಿಯನ್ನು ತಲುಪಿ ಗೆದ್ದು ಬೀಗಿತು. ನಾಯಕ ಅರೋನ್ ಫಿಂಚ್ ಹಾಗೂ ಡೇವಿಡ್ ವಾರ್ನರ್ ಅಜೇಯವಾಗುಳಿದು ಈ ಸ್ಕೋರ್ ಬೆನ್ನಟ್ಟಿದರು. ಫಿಂಚ್ 61 ರನ್‌ಗಳಿಸಿದರೆ ವಾರ್ಡನ್ 70 ರನ್‌ಗಳನ್ನು ಗಳಿಸಿದರು. ಈ ಮೂಲಕ ಈ ಸರಣಿಯಲ್ಲಿ ಪ್ರವಾಸಿ ಆಸ್ಟ್ರೇಲಿಯಾ ತಂಡ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದೆ.

ಎರಡು ತಂಡಗಳ ಸ್ಕ್ವಾಡ್ ಹೀಗಿದೆ
ಶ್ರೀಲಂಕಾ ಸಂಪೂರ್ಣ ಸ್ಕ್ವಾಡ್: ದನುಷ್ಕ ಗುಣತಿಲಕ, ಪಾತುಂ ನಿಸ್ಸಾಂಕ, ಚರಿತ್ ಅಸಲಂಕ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಭಾನುಕ ರಾಜಪಕ್ಸೆ, ದಸುನ್ ಶನಕ (ನಾಯಕ), ವನಿಂದು ಹಸರಂಗ, ಚಾಮಿಕ ಕರುಣಾರತ್ನ, ದುಷ್ಮಂತ ಚಮೀರ, ಮಹೇಶ್ ತೀಕ್ಷಣ, ನುವಾನ್ ತುಷಾರ, ರಮೇಶ್ ಮೆಂಡಿಸ್, ಲಕ್ಷುನ್ ಮದುಶಂಕ, ಲಕ್ಷುಂದ ರಾಜಕಣ, ಪ್ರವೀಣ್ ಜಯವಿಕ್ರಮ, ನುವಾನಿಡು ಫೆರ್ನಾಂಡೋ, ಮಥೀಶ ಪತಿರಣ
ಆಸ್ಟ್ರೇಲಿಯಾ ಸಂಪೂರ್ಣ ಸ್ಕ್ವಾಡ್: ಆರನ್ ಫಿಂಚ್ (ನಾಯಕ), ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಸ್ಟೀವನ್ ಸ್ಮಿತ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಆಷ್ಟನ್ ಅಗರ್, ಮಿಚೆಲ್ ಸ್ಟಾರ್ಕ್, ಕೇನ್ ರಿಚರ್ಡ್‌ಸನ್, ಜೋಶ್ ಹ್ಯಾಜಲ್‌ವುಡ್, ಸೀನ್ ಅಬಾಟ್, ಜ್ಯೆ ರಿಚರ್ಡ್‌ಸನ್, ಮಿಚೆಲ್ ಸ್ವೆಪ್ಸನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications