ತಂಡಕ್ಕೆ ಆಧಾರವಾಗುವಲ್ಲಿ ಲಂಕಾ ನಾಯಕ ವಿಫಲ
ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 1ರನ್‌ಗೆ ಔಟಾಗಿದ್ದ ಶ್ರೀಲಂಕಾ ನಾಯಕ ದಿಮುತ್ ಕರುಣರತ್ನೆ ಎರಡನೇ ಇನ್ನಿಂಗ್ಸ್‌ನಲ್ಲೂ ತಂಡಕ್ಕೆ ಆಧಾರವಾಗುವಲ್ಲಿ ವಿಫಲಾದರು. ದಿನದಾಟದಂತ್ಯದಲ್ಲಿ ನಾಯಕ ದಿಮುತ್ ಕರುಣರತ್ನೆ 16ರನ್‌ಗಳಿಸಿದ್ದಾಗ ಸ್ಪಿನ್ನರ್ ಮೊಹಮ್ಮದ್ ನವಾಜ್ ಎಲ್‌ಬಿಡಬ್ಲ್ಯೂ ಬಲೆಗೆ ಬಿದ್ರು. ಮತ್ತೊಂದೆಡೆ ಓಶಾದ ಫರ್ನಾಂಡೋ ಅಜೇಯ 17ರನ್ ಕಲೆಹಾಕಿ ಮೂರನೇ ದಿನದಾಟಕ್ಕೆ ಕ್ರೀಸ್ ಕಾಯ್ದುಕೊಂಡಿದ್ದು, ಆಟ ಮುಂದುವರಿಸಿದ್ದಾರೆ. ಜೊತೆಗೆ ಕುಸಾಲ್ ಮೆಂಡೀಸ್ ಸಾಥ್ ನೀಡಿದ್ದಾರೆ.
ಭಾರತ ವಿರುದ್ಧದ ಏಕದಿನ ಸರಣಿಗೆ ಬಲಿಷ್ಟ ತಂಡವನ್ನು ಘೋಷಿಸಿದ ವೆಸ್ಟ್ ಇಂಡೀಸ್

ಪಾಕಿಸ್ತಾನ ತಂಡಕ್ಕೆ ಆಧಾರವಾದ ನಾಯಕ ಬಾಬರ್
ಶ್ರೀಲಂಕಾ ತಂಡದ ನಾಯಕ ದಿಮುತ್ ಕರುಣರತ್ನೆ ಎರಡೂ ಇನ್ನಿಂಗ್ಸ್‌ನಲ್ಲಿ ವಿಫಲರಾದ್ರೆ, ಪಾಕಿಸ್ತಾನ ತಂಡದ ಪರ ನಾಯಕನೇ ತಂಡಕ್ಕೆ ಏಕೈಕ ಆಧಾರವಾಗುವ ಮೂಲಕ ತಂಡದ ಸ್ಕೋರನ್ನು 200ರ ಗಡಿದಾಟಿಸಿದ್ರು. ಒಂದೆಡೆ ವಿಕೆಟ್ ಉರುಳಿದ್ರೂ ಸಹ ಬೊಂಬಾಟ್ ಇನ್ನಿಂಗ್ಸ್ ಆಡಿದ ಬಾಬರ್ ಅಜಮ್ ಟೆಸ್ಟ್ ಕ್ರಿಕೆಟ್‌ನಲ್ಲಿ 6ನೇ ಶತಕ ಸಿಡಿಸುವ ಮೂಲಕ ತಂಡಕ್ಕೆ ಆಧಾರವಾದ್ರು. 244 ಎಸೆತಗಳಲ್ಲಿ 119ರನ್ ಕಲೆಹಾಕಿದ ಬಾಬರ್ ಕೊನೆಯದಾಗಿ ವಿಕೆಟ್ ಒಪ್ಪಿಸಿದ್ರು. ಇವರ ಇನ್ನಿಂಗ್ಸ್‌ನಲ್ಲಿ 11 ಬೌಂಡರಿ ಮತ್ತು 2 ಅಮೋಘ ಸಿಕ್ಸರ್‌ಗಳಿದ್ದವು.
6 ಸಿಕ್ಸರ್‌ಗಳನ್ನು ಬಾರಿಸಿದ್ರೂ ಪರವಾಗಿಲ್ಲ, ನನಗೆ ವಿಕೆಟ್ ಸಿಗುವುದೇ ಮುಖ್ಯ: ಹಾರ್ದಿಕ್ ಪಾಂಡ್ಯ

ಶ್ರೀಲಂಕಾ ಮತ್ತು ಪಾಕಿಸ್ತಾನ ತಂಡದ ಪ್ಲೇಯಿಂಗ್ ಇಲೆವೆನ್
ಶ್ರೀಲಂಕಾ:
ಓಷಾದ ಫೆರ್ನಾಂಡೋ, ದಿಮುತ್ ಕರುಣಾರತ್ನೆ(ನಾಯಕ), ಕುಸಾಲ್ ಮೆಂಡಿಸ್, ಏಂಜೆಲೊ ಮ್ಯಾಥ್ಯೂಸ್, ಧನಂಜಯ ಡಿ ಸಿಲ್ವಾ, ದಿನೇಶ್ ಚಾಂಡಿಮಲ್, ನಿರೋಶನ್ ಡಿಕ್ವೆಲ್ಲಾ(ವಿಕೆಟ್ ಕೀಪರ್), ರಮೇಶ್ ಮೆಂಡಿಸ್, ಮಹೀಶ್ ತೀಕ್ಷಣ, ಪ್ರಭಾತ್ ಜಯಸೂರ್ಯ, ಕಸುನ್ ರಜಿತಾ
ಬೆಂಚ್: ಪಾತುಮ್ ನಿಸ್ಸಾಂಕ, ಕಮಿಂದು ಮೆಂಡಿಸ್, ಅಸಿತ ಫೆರ್ನಾಂಡೋ, ವಿಶ್ವ ಫೆರ್ನಾಂಡೋ, ಜೆಫ್ರಿ ವಾಂಡರ್ಸೆ, ದುನಿತ್ ವೆಲ್ಲಲಾಗೆ, ದಿಲ್ಶಾನ್ ಮಧುಶಂಕ
ಪಾಕಿಸ್ತಾನ:
ಪಾಕಿಸ್ತಾನ ತಂಡವು ಬಾಬರ್ ಅಜಮ್ ನಾಯಕತ್ವದಲ್ಲಿ ಮುನ್ನಡೆಯುತ್ತಿದ್ದು, ಪ್ರಮುಖ ಸ್ಪಿನ್ನರ್ ಯಾಸಿರ್ ಶಾ ತಂಡಕ್ಕೆ ಕಂಬ್ಯಾಕ್ ಆಗಿರುವುದು ಬಲ ಹೆಚ್ಚಿಸಿದೆ. ತಂಡದ ಪ್ಲೇಯಿಂಗ್ ಇಲೆವೆನ್ ಈ ಕೆಳಗಿದೆ.
ಅಬ್ದುಲ್ಲಾ ಶಫೀಕ್, ಇಮಾಮ್-ಉಲ್-ಹಕ್, ಅಜರ್ ಅಲಿ, ಬಾಬರ್ ಅಜಮ್(ನಾಯಕ), ಅಘಾ ಸಲ್ಮಾನ್, ಮೊಹಮ್ಮದ್ ರಿಜ್ವಾನ್(ವಿಕೆಟ್ ಕೀಪರ್), ಮೊಹಮ್ಮದ್ ನವಾಜ್, ಯಾಸಿರ್ ಶಾ, ಹಸನ್ ಅಲಿ, ಶಾಹೀನ್ ಅಫ್ರಿದಿ, ನಸೀಮ್ ಶಾ
ಬೆಂಚ್: ಫವಾದ್ ಆಲಂ, ನೌಮನ್ ಅಲಿ, ಹಾರಿಸ್ ರೌಫ್, ಸರ್ಫರಾಜ್ ಅಹ್ಮದ್, ಶಾನ್ ಮಸೂದ್, ಸೌದ್ ಶಕೀಲ್, ಫಹೀಮ್ ಅಶ್ರಫ್


Click it and Unblock the Notifications












