ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಪಾಕ್ ವಿರುದ್ಧ ಬೃಹತ್ ಗೆಲುವು: ಮತ್ತೊಂದು ಅಗ್ನಿಪರೀಕ್ಷೆ ಗೆದ್ದ ಶ್ರೀಲಂಕಾ

SL vs Pak, 2nd test: Sri lanka won the decider match by 246 and level the series

ಪಾಕಿಸ್ತಾನ ಹಾಗೂ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಆತಿಥೆಯ ಶ್ರೀಲಂಕಾ ತಂಡ ಭರ್ಜರಿ ಗೆಲುವು ಸಾಧಿಸಿದೆ. ಮೊದಲ ಪಂದ್ಯ ಗೆದ್ದು ಸರಣಿಯ ಮೇಲೆ ಕಣ್ಣಿಟ್ಟಿದ್ದ ಪಾಕಿಸ್ತಾನ ತಂಡಕ್ಕೆ ಈ ಸೋಲಿನಿಂದಾಗಿ ಭಾರೀ ಆಘಾತವಾಗಿದ್ದು ಶ್ರೀಲಂಕಾ ತಂಡ ಸರಣಿಯನ್ನು ಸಮಬಲಗೊಳಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ತವರಿನಲ್ಲಿ ಸತತ ಎರಡನೇ ಬಾರಿಗೆ ಟೆಸ್ಟ್ ಸರಣಿಯನ್ನು ಸಮಬಲಗೊಳಿಸಿ ಸಮಾಧಾನಪಡೆದುಕೊಂಡಿದೆ ಶ್ರೀಲಂಕಾ.

ಸರಣಿಯನ್ನು ಸಮಬಲಗೊಳಿಸಲು ನಿರ್ಣಾಯಕವಾಗಿದ್ದ ಈ ಪಂದ್ಯವನ್ನು ಶ್ರೀಲಂಕಾ ಗೆಲ್ಲಲೇ ಬೇಕಾಗಿತ್ತು. ಇಲ್ಲವಾದಲ್ಲಿ ಸರಣಿ ಸೋಲು ಅನುಭವಿಸಬೇಕಿತ್ತು. ಈ ನಿಣಾಯಕ ಪಂದ್ಯದಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲಿಯೂ ಮೇಲುಗೈ ಸಾಧಿಸಿದ ಶ್ರೀಲಂಕಾ ಭರ್ಜರಿ 246 ರನ್‌ಗಳ ಅಂತರದಿಂದ ಗೆಲುವು ಸಾಧಿಸಿದೆ. ಈ ಮೂಲಕ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-1 ಅಂತರದಿಂದ ಸಮಬಲ ಸಾಧಿಸಲು ಯಶಸ್ವಿಯಾಗಿದೆ.

IND vs WI 3rd ODI: ಭಾರತಕ್ಕೆ ಭರ್ಜರಿ ಜಯ; ವೆಸ್ಟ್ ಇಂಡೀಸ್‌ನಲ್ಲಿ ಚೊಚ್ಚಲ ಕ್ಲೀನ್‌ಸ್ವೀಪ್ ಗರಿIND vs WI 3rd ODI: ಭಾರತಕ್ಕೆ ಭರ್ಜರಿ ಜಯ; ವೆಸ್ಟ್ ಇಂಡೀಸ್‌ನಲ್ಲಿ ಚೊಚ್ಚಲ ಕ್ಲೀನ್‌ಸ್ವೀಪ್ ಗರಿ

ಪಾಕ್‌ಗೆ ದೊಡ್ಡ ಗುರಿ ನೀಡಿದ ಶ್ರೀಲಂಕಾ

ಪಾಕ್‌ಗೆ ದೊಡ್ಡ ಗುರಿ ನೀಡಿದ ಶ್ರೀಲಂಕಾ

ಶ್ರೀಲಂಕಾ ಈ ಪಂದ್ಯದಲ್ಲಿ ಪ್ರವಾಸಿ ಪಾಕಿಸ್ತಾನಕ್ಕೆ ಬೃಹತ್ ಗುರಿಯನ್ನು ನಿಗದಿಪಡಿಸಿತ್ತು. ಎರಡು ಇನ್ನಿಂಗ್ಸ್‌ನಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ಶ್ರೀಲಂಕಾ ಪಂದ್ಯದಲ್ಲಿ ಸಂಪೂರ್ಣ ಹಿಡಿತ ಸಾಧಿಸಿತ್ತು. ಇನ್ನು ಮೊದಲ ಇನ್ನಿಂಗ್ಸ್‌ನ ಬೌಲಿಂಗ್‌ನಲ್ಲಿಯೂ ಮೇಲುಗೈ ಸಾಧಿಸಿದ ಶ್ರೀಲಂಕಾ ಪಾಕಿಸ್ತಾನ ತಂಡವನ್ನು 231 ರನ್‌ಗಳಿಗೆ ಆಲೌಟ್ ಮಾಡುವಲ್ಲಿಯೂ ಯಶಸ್ವಿಯಾಯಿತು. ಹೀಗಾಗಿ ಮೊದಲ ಇನ್ನಿಂಗ್ಸ್‌ನಲ್ಲಿ ದೊಡ್ಡ ಮೊತ್ತದ ಮುನ್ನಡೆ ಪಡೆದುಕೊಂಡಿತ್ತು. ಶ್ರೀಲಂಕಾ ಈ ಪಂದ್ಯದಲ್ಲಿ ಎರಡು ಇನ್ನಿಂಗ್ಸ್‌ನಲ್ಲಿಯೂ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ದಿನೇಶ್ ಚಾಂಡಿಮಲ್, ಒಶಾಡಾ ಫೆರ್ನಾಂಡೋ ಅರ್ಧ ಶತಕದ ನೆರವಿನಿಂದಾಗಿ 378 ರನ್‌ಗಳಿಸಿ ಲಂಕಾ ಆಲೌಟ್ ಆಗಿತ್ತು. ಇನ್ನು ಎರಡನೇ ಇನ್ನಿಂಗ್ಸ್‌ನಲ್ಲಿ ಲಂಕಾ ತಂಡಕ್ಕೆ ಆಸರೆಯಾಗಿದ್ದು ಧನಂಜಯ ಡಿಸಿಲ್ವ ಹಾಗೂ ನಾಯಕ ಕರುಣರತ್ನೆ. ಹೀಗಾಗಿ ಎರಡನೇ ಇನ್ನಿಂಗ್ಸ್‌ನಲ್ಲಿ 30 ರನ್‌ಗಳಿಗೆ 8 ವಿಕೆಟ್ ಕಳೆದುಕೊಂಡು ಡಿಕ್ಲೇರ್ ಮಾಡಿಕೊಂಡಿತು. ಈ ಮೂಲಕ 508 ರನ್‌ಗಳ ಬೃಹತ್ ಗುರಿ ನಿಗದಿಪಡಿಸಿತ್ತು.

ವ್ಯರ್ಥವಾಯ್ತು ಬಾಬರ್ ಹೋರಾಟ

ಶ್ರೀಲಂಕಾ ನೀಡಿದ 508 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿದ ಪಾಕಿಸ್ತಾನ ತಂಡಕ್ಕೆ ನಾಯಕ ಬಾಬರ್ ಅಜಂ ಮಾತ್ರವೇ ಏಕಾಂಗೊ ಹೋರಾಟ ನಡೆಸಿದರು. ಇಮಾಮ್ ಉಲ್ ಹಕ್ 49 ರನ್‌ಗಳಿಸಿದರೆ ರಿಜ್ವಾನ್ 37 ರನ್‌ಗಳ ಕೊಡುಗೆ ನೀಡಿದರು. ಉಳಿದಂತೆ ಯಾವುದೇ ಆಟಗಾರನಿಂದಲೂ ಪ್ರತಿರೋಧ ಬಾರಲಿಲ್ಲ. ಹೀಗಾಗಿ ಎರಡನೇ ಇನ್ನಿಂಗ್ಸ್‌ನಲ್ಲಿ ಪಾಕಿಸ್ತಾನ 21 ರನ್‌ಗಳಿಗೆ ಎಲ್ಲಾ ವಿಕೆಟ್ ಕಳೆದುಕೊಂಡು ಶರಣಾಯಿತು. ಈ ಮೂಲಕ ಸರಣಿ ಗೆಲ್ಲುವ ಕನಸು ಭಗ್ನಗೊಂಡಿತು.

ಲಂಕಾಗೆ ಅನಿವಾರ್ಯವಾಗಿತ್ತು ಗೆಲುವು

ಲಂಕಾಗೆ ಅನಿವಾರ್ಯವಾಗಿತ್ತು ಗೆಲುವು

ಶ್ರೀಲಂಕಾ ಈ ಸರಣಿಯ ಮೊದಲ ಪಂದ್ಯದಲ್ಲಿ ಹೀನಾಯವಾಗಿ ಸೋಲು ಅನುಭವಿಸಿತ್ತು. ಹೀಗಾಗಿ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಅಂತರದಿಂದ ಹಿನ್ನಡೆಯಲ್ಲಿತ್ತು. ಆದರೆ ಎರಡನೇ ಪಂದ್ಯದಲ್ಲಿ ತಿರುಗಿಬಿದ್ದು ಪ್ರವಾಸಿ ತಂಡಕ್ಕೆ ಆಘಾತ ನೀಡುವ ಮೂಲಕ ಸರಣಿಯಲ್ಲಿ ಸಮಬಲ ಸಾಧಿಸುವಲ್ಲಿ ಯಶಸ್ವುಯಾಗಿದೆ. ಆರಂಭದಿಂದಲೂ ಪಂದ್ಯದಲ್ಲಿ ಹಿಡಿತ ಸಾಧಿಸಿದ್ಧ ಲಂಕಾ ಗೆಲುವು ತನ್ನದಾಗಸಿಕೊಂಡಿದೆ. ಇದಕ್ಕೂ ಮುನ್ನ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿಯೂ ಮೊದಲ ಪಂದ್ಯದಲ್ಲಿ ಸೋಲು ಅನುಭವಿಸಿದ್ದ ಶ್ರೀಲಂಕಾ ಎರಡನೇ ಪಂದ್ಯದಲ್ಲಿ ತಿರುಗಿಬಿದ್ದು ಸರಣಿ ಸಮಬಲಗೊಳಿಸಿತ್ತು.

ಎರಡು ತಂಡಗಳ ಆಡುವ ಬಳಗ

ಎರಡು ತಂಡಗಳ ಆಡುವ ಬಳಗ

ಶ್ರೀಲಂಕಾ: ದಿಮುತ್ ಕರುಣಾರತ್ನೆ (ನಾಯಕ), ಓಶಾದ ಫೆರ್ನಾಂಡೊ, ಕುಸಾಲ್ ಮೆಂಡಿಸ್, ಏಂಜೆಲೊ ಮ್ಯಾಥ್ಯೂಸ್, ದಿನೇಶ್ ಚಾಂಡಿಮಾಲ್, ಧನಂಜಯ ಡಿ ಸಿಲ್ವಾ, ನಿರೋಶನ್ ಡಿಕ್ವೆಲ್ಲಾ (WK), ರಮೇಶ್ ಮೆಂಡಿಸ್, ಪ್ರಭಾತ್ ಜಯಸೂರ್ಯ, ದುನಿತ್ ವೆಲ್ಲಲಾಗೆ, ಅಸಿತ ಫೆರ್ನಾಂಡೋ
ಬೆಂಚ್: ಲಕ್ಷಿತಾ ಮಾನಸಿಂಗ್, ಕಸುನ್ ರಜಿತಾ, ವಿಶ್ವ ಫೆರ್ನಾಂಡೋ, ಜೆಫ್ರಿ ವಾಂಡರ್ಸೆ, ಕಮಿಂದು ಮೆಂಡಿಸ್, ಪಾತುಮ್ ನಿಸ್ಸಾಂಕ, ದಿಲ್ಶಾನ್ ಮಧುಶಂಕ

ಪಾಕಿಸ್ತಾನ: ಅಬ್ದುಲ್ಲಾ ಶಫೀಕ್, ಇಮಾಮ್-ಉಲ್-ಹಕ್, ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಫವಾದ್ ಆಲಂ, ಅಘಾ ಸಲ್ಮಾನ್, ಮೊಹಮ್ಮದ್ ನವಾಜ್, ನೌಮನ್ ಅಲಿ, ಯಾಸಿರ್ ಶಾ, ಹಸನ್ ಅಲಿ, ನಸೀಮ್ ಶಾ
ಬೆಂಚ್: ಅಜರ್ ಅಲಿ, ಫಹೀಂ ಅಶ್ರಫ್, ಸರ್ಫರಾಜ್ ಅಹ್ಮದ್, ಶಾನ್ ಮಸೂದ್, ಸೌದ್ ಶಕೀಲ್, ಹ್ಯಾರಿಸ್ ರೌಫ್

Story first published: Thursday, July 28, 2022, 14:59 [IST]
Other articles published on Jul 28, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X