ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ವಿಶ್ವಕಪ್‌ ಎದುರಾಳಿಗೆಳಿಗೆ ಎಚ್ಚರಿಕೆ ರವಾನಿಸಿದ ಸ್ಟೀವ್‌ ಸ್ಮಿತ್‌!

Smith sounds warning bell, stars in World Cup warm-up

ಸೌತ್‌ಹ್ಯಾಂಪ್ಟನ್‌, ಮೇ 23: ಬಹುನಿರೀಕ್ಷಿತ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿ ಆರಂಭಕ್ಕೆ ಇನ್ನು ಒಂದು ವಾರವಷ್ಟೇ ಬಾಕಿ ಇದೆ. ಈ ಸಂದರ್ಭದಲ್ಲಿ ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಸ್ಟೀವ್‌ ಸ್ಮಿತ್‌ ಎದುರಾಳಿ ತಂಡಗಳಿಗೆ ಎಚ್ಚರಿಕೆ ರವಾನಿಸಿದ್ದಾರೆ.

ಒಡಿಐ ವಿಶ್ವಕಪ್‌ನಲ್ಲಿ ಅಬ್ಬರಿಸಿದ 5 ಅಗ್ರಮಾನ್ಯ ಬೌಲರ್‌ಗಳಿವರು!ಒಡಿಐ ವಿಶ್ವಕಪ್‌ನಲ್ಲಿ ಅಬ್ಬರಿಸಿದ 5 ಅಗ್ರಮಾನ್ಯ ಬೌಲರ್‌ಗಳಿವರು!

ಕಳೆದ ವರ್ಷ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್‌ ಸರಣಿಯಲ್ಲಿ ಬಾಲ್‌ ಟ್ಯಾಂಪರಿಂಗ್‌ (ಚೆಂಡನ್ನು ವಿರೂಪಗೊಳಿಸಿದ್ದನ್ನು) ಒಪ್ಪಿಕೊಂಡು ಕ್ರಿಕೆಟ್‌ ಆಸ್ಟ್ರೇಲಿಯಾದಿಂದ 13 ತಿಂಗಳ ನಿಷೇಧ ಶಿಕ್ಷೆಗೆ ಗುರಿಯಾಗಿದ್ದ ಸ್ಟೀವ್‌ ಸ್ಮಿತ್‌, ಆಸ್ಟ್ರೇಲಿಯಾ ತಂಡಕ್ಕೆ ಮರಳಿ ಆಡಿದ ಮೊದಲ ಪಂದ್ಯದಲ್ಲೇ ಅರ್ಧಶತಕ ದಾಖಲಿಸಿದ್ದಾರೆ. ಈ ಮೂಲಕ ತಮ್ಮ ಬ್ಯಾಟಿಂಗ್‌ನಲ್ಲಿ ಕಿಂಚಿತ್ತೂ ಕೊರತೆ ಇಲ್ಲ ಎಂಬ ಸಂದೇಶ ಸಾರಿದ್ದಾರೆ.

ಈ ಬಾರಿಯ ವಿಶ್ವಕಪ್‌ನಲ್ಲಿ ಮಿಂಚಬಲ್ಲ ಟಾಪ್‌ 5 ಫೀಲ್ಡರ್ಸ್‌ ಇವರು!ಈ ಬಾರಿಯ ವಿಶ್ವಕಪ್‌ನಲ್ಲಿ ಮಿಂಚಬಲ್ಲ ಟಾಪ್‌ 5 ಫೀಲ್ಡರ್ಸ್‌ ಇವರು!

ಇಲ್ಲಿನ ರೋಸ್‌ ಬೌಲ್‌ ಕ್ರೀಡಾಂಗಣದಲ್ಲಿ ಬುಧವವಾರ ನಡೆದ ವೆಸ್ಟ್‌ ಇಂಡೀಸ್‌ ವಿರುದ್ಧದ ವಿಶ್ವಕಪ್‌ ಅಭ್ಯಾಸ ಪಂದ್ಯದಲ್ಲಿ ಮಿಂಚಿದ ಸ್ಮಿತ್‌ 82 ಎಸೆತಗಳಲ್ಲಿ 76 ರನ್‌ಗಳನ್ನು ದಾಖಲಿಸಿ ಜಯದ ರೂವಾರಿ ಎನಿಸಿದರು. ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ವಿಂಡೀಸ್‌ 46.2 ಓವರ್‌ಗಳಲ್ಲಿ 229 ರನ್‌ಗಳಿಗೆ ಆಲ್‌ಔಟ್‌ ಆದರೆ, ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ 38.3 ಓವರ್‌ಗಳಲ್ಲಿ 3 ವಿಕೆಟ್‌ಗೆ 231 ರನ್‌ಗಳನ್ನು ಚಚ್ಚಿ ಜಯ ದಾಖಲಿಸಿತು.

ವಿಶ್ವಕಪ್‌ನಲ್ಲಿ ಅತಿ ಹೆಚ್ಚು ಅರ್ಧಶತಕಗಳನ್ನು ಸಿಡಿಸಿದ ಬ್ಯಾಟ್ಸ್‌ಮನ್‌ಗಳುವಿಶ್ವಕಪ್‌ನಲ್ಲಿ ಅತಿ ಹೆಚ್ಚು ಅರ್ಧಶತಕಗಳನ್ನು ಸಿಡಿಸಿದ ಬ್ಯಾಟ್ಸ್‌ಮನ್‌ಗಳು

ಗೆಲುವಿಗೆ ಇನ್ನು 21 ರನ್‌ಗಳು ಬಾಕಿದ್ದ ಸಂದರ್ಭದಲ್ಲಿ ಸ್ಮಿತ್‌, ವೇಗದ ಬೌಲರ್‌ ಕಾರ್ಲೋಸ್‌ ಬ್ರಾತ್‌ವೇಟ್‌ಗೆ ವಿಕೆಟ್‌ ಒಪ್ಪಿಸಿದರು. ಸ್ಮಿತ್‌ ಹೊರತಾಗಿ ಶಾನ್‌ ಮಾರ್ಷ್‌ (59 ಎಸೆತಗಳಲ್ಲಿ 55 ರನ್‌) ಮತ್ತು ಗ್ಲೆನ್‌ ಮ್ಯಾಕ್ಸ್‌ವೆಲ್‌ (12 ಎಸೆತಗಳಲ್ಲಿ 18) ಉತ್ತಮ ಕಾಣಿಕೆ ನೀಡಿದರು.

World Cupನಲ್ಲಿ ಅಬ್ಬರಿಸಬಲ್ಲ Top 10 ಬ್ಯಾಟ್ಸ್‌ಮನ್‌ಗಳಿವರು! World Cupನಲ್ಲಿ ಅಬ್ಬರಿಸಬಲ್ಲ Top 10 ಬ್ಯಾಟ್ಸ್‌ಮನ್‌ಗಳಿವರು!

ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ಆರಂಭಿಕ ಬ್ಯಾಟ್ಸ್‌ಮನ್‌ ಉಸ್ಮಾನ್‌ ಖವಾಜ, ವೇಗಿ ಆಂಡ್ರೆ ರಸೆಲ್‌ ಬೌಲಿಂಗ್‌ನಲ್ಲಿ ತಲೆಗೆ ಪೆಟ್ಟುತಿಂದ ಆಟ ಮುಂದುವರಿಸಲಾಗದೆ ನಿವೃತ್ತಿ ಹೊಂದಿದ್ದರು. ಬಳಿಕ ತಪಾಸಣೆಗೆ ಒಳಪಟ್ಟ ಖವಾಜಗೆ ವಿಶ್ವಕಪ್‌ ಟೂರ್ನಿಯಲ್ಲಿ ಮುಂದುವರಿಯುವಂತೆ ಗ್ರೀನ್‌ ಸಿಗ್ನಲ್‌ ನೀಡಲಾಗಿದೆ.

ಈ ಬಾರಿ ವಿಶ್ವಕಪ್‌ನಲ್ಲಿ ಮೋಡಿ ಮಾಡಬಲ್ಲ Top 5 ಸ್ಪಿನ್ನರ್‌ಗಳು! ಈ ಬಾರಿ ವಿಶ್ವಕಪ್‌ನಲ್ಲಿ ಮೋಡಿ ಮಾಡಬಲ್ಲ Top 5 ಸ್ಪಿನ್ನರ್‌ಗಳು!

ವಿಶ್ವಕಪ್‌ ಟೂರ್ನಿಯಲ್ಲಿ ಆಸ್ಟ್ರೇಲಿಯಾ ತಂಡ ಕ್ರಿಕೆಟ್ ಕೂಸು ಅಫಘಾನಿಸ್ತಾನ ವಿರುದ್ಧ ಜೂನ್‌ 1ರಂದು ಬ್ರಿಸ್ಟೋಲ್‌ನಲ್ಲಿ ತನ್ನ ಅಭಿಯಾನ ಆರಂಭಿಸಲಿದೆ.

Story first published: Thursday, May 23, 2019, 14:38 [IST]
Other articles published on May 23, 2019
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X