Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Ashes Test: ಎರಡನೇ ಟೆಸ್ಟ್‌ಗೂ ಪ್ಯಾಟ್‌ ಕಮಿನ್ಸ್‌, RCB ವೇಗಿ ಅಲಭ್ಯ

ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್‌ ನಡುವಣ ಆಶಸ್‌ ಸರಣಿ ನಡೆಯುತ್ತಿದೆ. ಈ ಸರಣಿ ಬಹುನಿರೀಕ್ಷಿತವಾಗಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಆಸೀಸ್‌, ಎರಡನೇ ಟೆಸ್ಟ್‌ಗೆ ಸಿದ್ಧತೆ ನಡೆಸಿದೆ. ಇದೇ ಸರಣಿಯ ಎರಡನೇ ಟೆಸ್ಟ್‌ ಪಂದ್ಯ ಬ್ರಿಸ್ಬೇನ್‌ನಲ್ಲಿ ಡಿಸೆಂಬರ್‌ 4 ರಂದು ನಡೆಯಲಿದೆ. ಈ ಟೆಸ್ಟ್‌ ಪಂದ್ಯಕ್ಕಾಗಿ ಆಸ್ಟ್ರೇಲಿಯಾ ತನ್ನ ತಂಡವನ್ನು ಪ್ರಕಟಿಸಿದೆ. ಈ ಪದ್ಯಕ್ಕೂ ಆಸ್ಟ್ರೇಲಿಯಾದ ಸ್ಟಾರ್ ಪ್ಲೇಯರ್‌ಗಳು ತಂಡಕ್ಕೆ ಅಲಭ್ಯರಾಗಿದ್ದಾರೆ.

ಅಶಸ್‌ ಟೆಸ್ಟ್‌ ಸರಣಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ಕ್ಯಾಪ್ಟನ್‌ ಪ್ಯಾಟ್‌ ಕಮಿನ್ಸ್‌ ಹಾಗೂ ವೇಗದ ಬೌಲರ್‌ ಜೋಶ್‌ ಹ್ಯಾಜಲ್‌ವುಡ್ ಮೈದಾನಕ್ಕೆ ಪ್ರವೇಶಿಸರಲಿಲ್ಲ. ಆದರೂ ತಂಡ ಮೊದಲ ಟೆಸ್ಟ್‌ ಪಂದ್ಯವನ್ನು 8 ವಿಕೆಟ್‌ಗಳಿಂದ ಗೆದ್ದು ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತ್ತು. ಈ ಇಬ್ಬರೂ ಸ್ಟಾರ್ ಆಟಗಾರರ 2ನೇ ಟೆಸ್ಟ್‌ಗೂ ಅಲಭ್ಯಾರಾಗಿದ್ದಾರೆ. ಇವರಿಬ್ಬರೂ ಎರಡನೇ ಟೆಸ್ಟ್‌ಗೆ ತಂಡವನ್ನು ಸೇರಿಕೊಳ್ಳುವ ನಿರೀಕ್ಷೆ ಇತ್ತು. ಆದರೆ, ಈ ಇಬ್ಬರೂ ಸ್ಟಾರ್‌ಗಳು ಇನ್ನು ಸಂಪೂರ್ಣವಾಗಿ ಫಿಟ್ ಆಗಿರದ ಕಾರಣ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ.

Smith to Captain Australia in Second Ashes Test Cummins Hazlewood Ruled Out Due to Injury

ಬ್ರಿಸ್ಬೇನ್‌ನಲ್ಲಿ ಇಂಗ್ಲೆಂಡ್‌ ವಿರುದ್ಧ ಆಸ್ಟ್ರೇಲಿಯಾ ಪಿಂಕ್ ಬಾಲ್‌ ಟೆಸ್ಟ್‌ ಆಡಲಿದೆ. ಈ ಟೆಸ್ಟ್‌ ಪಂದ್ಯಕ್ಕೆ ತಂಡದಲ್ಲಿ ಯಾವುದೇ ಬದಲಾವಣೆ ಮಾಡದಿರಲು ನಿರ್ಧರಿಸಿದೆ. ಪ್ಯಾಟ್‌ ಕಮಿನ್ಸ್‌ ಇನ್ನು ಫಿಟ್ ಆಗಿರದ ಕಾರಣ ತಂಡವನ್ನು ಎರಡನೇ ಟೆಸ್ಟ್‌ ಪಂದ್ಯದಲ್ಲಿ ಸ್ಟೀವನ್ ಸ್ಮಿತ್ ಮುನ್ನಡೆಸಲಿದ್ದಾರೆ. ಮೊದಲ ಟೆಸ್ಟ್‌ ಪಂದ್ಯದ ವೇಳೆ ಬೆನ್ನು ನೋವಿಗೆ ಒಳಗಾಗಿದ್ದ ಉಸ್ಮಾನ್ ಖವಾಜ ಅವರನ್ನು ತಂಡದಲ್ಲಿ ಉಳಿಸಿಕೊಳ್ಳಲಾಗಿದೆ. ಪ್ಯಾಟ್ ಕಮ್ಮಿನ್ಸ್ ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಇನ್ನೂ ಎರಡು ವಾರಗಳ ಕಾಲಾವಕಾಶ ನೀಡಲಾಗಿದೆ. ಟೆಸ್ಟ್‌ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿ 5 ವಿಕೆಟ್‌ ಪಡೆದ ಬ್ರೆಂಡನ್ ಡಾಗೆಟ್ ಅವರನ್ನು ಸಹ ತಂಡದಲ್ಲಿ ಉಳಿಸಿಕೊಳ್ಳಲಾಗಿದೆ.

ಆಡಿಲೇಡ್‌ ಟೆಸ್ಟ್‌ ಆಡಲಿರುವ ಕಮಿನ್ಸ್‌

ಆಶಸ್‌ ಸರಣಿಯ ಮೂರನೇ ಟೆಸ್ಟ್‌ ಪಂದ್ಯ ಆಡಿಲೇಡ್‌ನಲ್ಲಿ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಪ್ಯಾಟ್ ಕಮಿನ್ಸ್‌ ತಮ್ಮ ಫಿಟ್ನೆಸ್‌ ಮರಳಿ ಸಾಧಿಸಿ ತಂಡಕ್ಕೆ ನೆರವಾಗಬಲ್ಲರು. ಇವರು ಚೇತರಿಸಿಕೊಳ್ಳಲು ಕಾಲವಕಾಶವನ್ನು ನೀಡಲಾಗಿದೆ. ಎರಡನೇ ಟೆಸ್ಟ್‌ ಪಂದ್ಯದಲ್ಲೂ ಆಸ್ಟ್ರೇಲಿಯಾ ತಂಡದ ವೇಗದ ಬೌಲಿಂಗ್ ನೊಗವನ್ನು ಮಿಚೆಲ್ ಸ್ಟಾರ್ಕ್‌ ಮುನ್ನಡೆಸಲಿದ್ದಾರೆ. ಮೂರನೇ ಟೆಸ್ಟ್‌ ಪಂದ್ಯದ ವೇಳೆ ಜೋಶ್‌ ಹ್ಯಾಜಲ್‌ವುಡ್‌ ಸಹ ಫಿಟ್ ಆಗುವ ನಿರೀಕ್ಷೆ ಇದೆ.

ಬ್ರಿಸ್ಬೇನ್‌ ಟೆಸ್ಟ್‌ಗೆ ಆಸ್ಟ್ರೇಲಿಯಾ ತಂಡ:

ಸ್ಟೀವ್ ಸ್ಮಿತ್ (ನಾಯಕ), ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಬ್ರೆಂಡನ್ ಡಾಗೆಟ್, ಕ್ಯಾಮರೂನ್ ಗ್ರೀನ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಷ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್ಚಾಗ್ನೆ, ನಾಥನ್ ಲಿಯಾನ್, ಮೈಕೆಲ್ ನೇಸರ್, ಮಿಚೆಲ್ ಸ್ಟಾರ್ಕ್, ಜೇಕ್ ವೆದರಾಲ್ಡ್, ಬ್ಯೂ ವೆಬ್‌ಸ್ಟರ್.

Story first published: Friday, November 28, 2025, 12:41 [IST]
Other articles published on Nov 28, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+