ICC Women's T20 World Cup: ಸ್ಮೃತಿ, ಹರ್ಮನ್ ಅರ್ಧಶತಕದ ಸೊಬಗು
ದುಬೈ: ಭರವಸೆಯ ಆಟಗಾರ್ತಿ ಸ್ಮೃತಿ ಮಂಧನಾ ಹಾಗೂ ನಾಯಕಿ ಹರ್ಮನ್ ಪ್ರೀತ್ ಕೌರ್ ಅವರು ಸಿಡಿಸಿದ ಅರ್ಧಶತಕದ ಬಲದಿಂದ ಟೀಮ್ ಇಂಡಿಯಾ ಮಹಿಳಾ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ 173 ರನ್‌ಗಳ ಸ್ಪರ್ಧಾತ್ಮಕ ಗುರಿಯನ್ನು ಶ್ರೀಲಂಕಾ ತಂಡಕ್ಕೆ ನೀಡಿದೆ.
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾದ ಆರಂಭ ಭರ್ಜರಿಯಾಗಿತ್ತು. ಭಾರತದ ಪರ ಇನಿಂಗ್ಸ್ ಆರಂಭಿಸಿದ ಶಫಾಲಿ ವರ್ಮಾ ಹಾಗೂ ಸ್ಮೃತಿ ಮಂದನಾ ಜೊತೆಗೂಡಿ ಶ್ರೀಲಂಕಾ ಬೌಲರ್‌ಗಳನ್ನು ಕಾಡಿದರು. ಇವರನ್ನು ಕಟ್ಟಿ ಹಾಕಲು ಲಂಕಾ ಬೌಲರ್‌ಗಳು ವಿಫಲರಾದರು. ಫಾರ್ಮ್ ಇಲ್ಲದೆ ಪರದಾಡುತ್ತಿದ್ದ ಸ್ಮೃತಿ ಮಹತ್ವದ ಪಂದ್ಯದಲ್ಲಿ ಕ್ಲಾಸಿಕ್ ಆಟದ ಪ್ರದರ್ಶನ ನೀಡಿ ಲಯಕ್ಕೆ ಮರಳಿದರು. ಅಲ್ಲದೆ ತಂಡಕ್ಕೆ ಅಗತ್ಯವಿದ್ದ ಜೊತೆಯಾಟದ ಕಾಣಿಕೆ ನೀಡಿದರು.

ಮೊದಲ ವಿಕೆಟ್‌ಗೆ 98 ರನ್ ಜೊತೆಯಾಟ
ಟೀಮ್ ಇಂಡಿಯಾದ ಸ್ಟಾರ್ ಓಪನರ್ಸ್ ಭರ್ಜರಿ ಆರಂಭ ನೀಡಿದರು. ಶಫಾಲಿ ಹಾಗೂ ಸ್ಮೃತಿ ತಮ್ಮ ನೈಜ ಆಟವನ್ನು ಮುಂದುವರಿಸಿದರು. ಈ ಜೋಡಿ 12.4 ಓವರ್‌ಗಳ ವರೆಗೆ ವಿಕೆಟ್ ಬೀಳದಂತೆ ಕಾಯ್ದುಕೊಂಡು 98 ರನ್‌ಗಳನ್ನು ಕಲೆ ಹಾಕಿತು.
ಸ್ಮೃತಿ ಅರ್ಧಶತಕ
ಟೂರ್ನಿಯಲ್ಲಿ ರನ್ ಕಲೆ ಹಾಕುವಲ್ಲಿ ವಿಫಲರಾಗಿದ್ದ ಟೀಮ್ ಇಂಡಿಯಾದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧನಾ, ಶ್ರೀಲಂಕಾ ವಿರುದ್ಧ ಲಯ ಕಂಡು ಕೊಂಡರು. ಇವರು 38 ಎಸೆತಗಳಲ್ಲಿ 4 ಬೌಂಡರಿ, 1 ಸಿಕ್ಸರ್ ಸಹಾಯದಿಂದ 50 ರನ್ ಬಾರಿಸಿ ಔಟ್ ಆದರು. ಇನ್ನೋರ್ವ ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ 4 ಬೌಂಡರಿ ನೆರವಿನಿಂದ 43 ರನ್ ಸಿಡಿಸಿ ಇಲ್ಲದ ಹೊಡೆತಕ್ಕೆ ಮುಂದಾಗಿ ಔಟ್ ಆದರು. ಜೆಮಿಮಾ ರೊಡಿಗ್ರಸ್ ಅವರ ಆಟ 16 ರನ್ ಗಳಿಗೆ ಕೊನೆಯಾಯಿತು.
ಇನ್ನು ಟೀಮ್ ಇಂಡಿಯಾದ ನಾಯಕಿ ಹರ್ಮನ್ ಪ್ರೀತ್ ಕೌರ್ ತಮ್ಮ ನೈಜ ಆಟವನ್ನು ಮುಂದುವರಿಸಿದರು. ಈ ಪಂದ್ಯದಲ್ಲಿ ತಮ್ಮ ಅನುಭವದ ಸಂಪೂರ್ಣ ಉಪಯೋಗ ಪಡೆದು ಬ್ಯಾಟ್ ಮಾಡಿದ ಹರ್ಮನ್ ತಮ್ಮ ವೃತ್ತಿ ಜೀವನದ ವೇಗದ ಅರ್ಧಶತಕ ದಾಖಲಿಸಿದರು. ಇವರು ಕೇವಲ 27 ಎಸೆತಗಳಲ್ಲಿ 8 ಬೌಂಡರಿ, 1 ಸಿಕ್ಸರ್ ಸಹಾಯದಿಂದ ಅಜೇಯ 52 ರನ್ ಸಿಡಿಸಿ ತಂಡಕ್ಕೆ ನೆರವಾದರು.
ಶ್ರೀಲಂಕಾ ಪರ ಚಾಮರಿ ಅಟ್ಟಪಟ್ಟು ಹಾಗೂ ಅಮ ಕಾಂಚನಾ ತಲಾ ಒಂದು ವಿಕೆಟ್ ಪಡೆದರು.
ಸ್ಮೃತಿ ದಾಖಲೆ
ಟೀಮ್ ಇಂಡಿಯಾದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧನಾ ಈ ಪಂದ್ಯದಲ್ಲಿ ದಾಖಲೆ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ ಅರ್ಧಶತಕ ಬಾರಿಸುವ ಮೂಲಕ ಇವರು ಟೀಮ್ ಇಂಡಿಯಾ ಪರ ಟಿ20 ವಿಶ್ವಕಪ್ ಟೂರ್ನಿಯಲ್ಲಿ 500ಕ್ಕೂ ಹೆಚ್ಚು ರನ್ ಬಾರಿಸಿದ ಎಡಗೈ ಆಟಗಾರ್ತಿ ಎಂಬ ಹೆಗ್ಗಳಿಕೆ ತಮ್ಮದಾಗಿಸಿಕೊಂಡರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications