ದಾಖಲೆಯ ಮೇಲೆ ಸ್ಮೃತಿ ಮಂಧಾನ ಕಣ್ಣು
ಭಾರತದಲ್ಲಿ ಮಹಿಳಾ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿ ನಡೆಯುತ್ತಿದೆ. ಈ ಟೂರ್ನಿಯಲ್ಲಿ ಟೀಮ್ ಇಂಡಿಯಾ ಸ್ಥಿರ ಪ್ರದರ್ಶನ ನೀಡುತ್ತಿದ್ದು, ಅಭಿಮಾನಿಗಳ ಚಿತ್ತ ಕದ್ದಿದೆ. ಟೀಮ್ ಇಂಡಿಯಾದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ ಈ ಟೂರ್ನಿಯಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿದ್ದಾರೆ. ಈ ವೇಳೆ ಸ್ಮೃತಿ ಬ್ಯಾಕ್ ಟು ಬ್ಯಾಕ್ ಸ್ಥಿರ ಪ್ರದರ್ಶನ ನೀಡುತ್ತಿದ್ದು, ತಂಡದ ಮನೋಬಲ ಹೆಚ್ಚಿದೆ. ಇನ್ನು ಭಾನುವಾರ ನಡೆಯಲಿರುವ ಪಂದ್ಯದಲ್ಲಿ ಸ್ಮೃತಿ ಮಂಧಾನ ಬಿಗ್ ಇನಿಂಗ್ಸ್ ಕಟ್ಟಿ ದಾಖಲೆ ಬರೆಯುವ ಕನಸಿನಲ್ಲಿದ್ದಾರೆ.
ಆರಂಭಿಕ ಪಂದ್ಯಗಳಲ್ಲಿ ರನ್ ಕಲೆ ಹಾಕುವಲ್ಲಿ ವಿಫಲರಾಗಿದ್ದ ಸ್ಮೃತಿ ಮಂಧಾನ, ಕಳೆದ ಮೂರು ಪಂದ್ಯಗಳಲ್ಲಿ ರನ್ ಬಾರಿಸಿ ತಂಡಕ್ಕೆ ಆಧಾರವಾಗಿದ್ದರು. ಲೀಗ್ ಹಂತದಲ್ಲಿ ಆಸ್ಟ್ರೇಲಿಯಾ ವಿರುದ್ಧ, ಇಂಗ್ಲೆಂಡ್ ವಿರುದ್ಧ ಅರ್ಧಶತಕ ಬಾರಿಸಿ ಮಿಂಚಿದ್ದರು. ಇನ್ನು ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಶತಕ ಬಾರಿಸಿ ಅಬ್ಬರಿಸಿದ್ದರು. ಇದೇ ಬ್ಯಾಟಿಂಗ್ ಲಯವನ್ನು ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಮುನ್ನಡೆಸುವ ಕನಸಿನಲ್ಲಿದ್ದಾರೆ.

ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಸ್ಮೃತಿ ಮಂಧಾನ ಈ ವರೆಗೆ ಒಟ್ಟು ಮುರು ಶತಕಗಳನ್ನು ಬಾರಿಸಿದ್ದಾರೆ. ಇನ್ನು ಈ ಟೂರ್ನಿಯಲ್ಲಿ ಒಂದು ಶತಕ ಬಾರಿಸಿದ್ದೇ ಆದಲ್ಲಿ, ಭಾರತದ ಪರ ಸ್ಮೃತಿ ಮಹಿಳಾ ವಿಶ್ವಕಪ್‌ನಲ್ಲಿ ಭಾರತಕ್ಕಾಗಿ ಅತಿ ಹೆಚ್ಚು ಶತಕ ಸಿಡಿಸಿದ ಆಟಗಾರ್ತಿ ಎಂಬ ಹಿರಿಮೆಗೆ ಪಾತ್ರರಾಗಲಿದ್ದಾರೆ. ಈ ಮೂಲಕ ಸ್ಮೃತಿ ಎಲ್ಲಾ ಭಾರತೀಯ ಆಟಗಾರ್ತಿಯರನ್ನು ಹಿಂದಿಕ್ಕುತ್ತಾರೆ. ಮಂಧಾನ ಈ ವರೆಗೆ ವಿಶ್ವಕಪ್‌ನಲ್ಲಿ ಒಟ್ಟು 22 ಪಂದ್ಯ ಆಡಿದ್ದು, 890 ರನ್ ಗಳಿಸಿದ್ದಾರೆ. ಈ ವೇಳೆ ಮೂರು ಶತಕ ಬಾರಿಸಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ಸ್ಮೃತಿ ಅವರ ಬ್ಯಾಟಿಂಗ್ ಧಾಟಿಯನ್ನು ನೋಡಿದರೆ, ಬಾಂಗ್ಲಾ ವಿರುದ್ಧವೂ ಈ ಸಾಧನೆ ಮಾಡಬಹುದು ಎಂಬ ಲೆಕ್ಕಾಚಾರವನ್ನು ಹಾಕಿಕೊಳ್ಳಲಾಗಿದೆ. ಅಲ್ಲದೆ ಪ್ರಸಕ್ತ ಕ್ಯಾಲೆಂಡರ್ ವರ್ಷದಲ್ಲಿ ಸತತ 5 ಶತಕ ಬಾರಿಸಿ ದಾಖಲೆ ಬರೆದಿದ್ದಾರೆ. ಇವರು ಈ ಫಾರ್ಮ್ ನಿಜಕ್ಕೂ ಎದುರಾಳಿಗಳಿಗೆ ನಡುಕ ಹುಟ್ಟಿಸಿದೆ. ಭಾರತ ಈಗಾಗಲೇ ಟೂರ್ನಿಯ ಸೆಮಿಫೈನಲ್ ಹಂತ ತಲುಪಿದ್ದು, ಈ ಪಂದ್ಯ ಅನೌಪಚಾರಿಕವಾಗಿದೆ.
ಅಂಕ ಪಟ್ಟಿಯಲ್ಲಿ ಭಾರತಕ್ಕೆ 4ನೇ ಸ್ಥಾನ
ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ತಂಡ ಆಡಿರುವ 7 ಪಂದ್ಯಗಳಲ್ಲಿ, 6 ಜಯ ದಾಖಲಿಸಿದೆ. ಇನ್ನು ಒಂದು ಪಂದ್ಯ ರದ್ದಾಗಿದೆ. ಹೀಗಾಗಿ ಆಸೀಸ್ ಅಜೇಯ ಓಟವನ್ನು ಮುಂದುವರೆಸಿದ್ದು, 13 ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಇನ್ನು ದಕ್ಷಿಣ ಆಫ್ರಿಕಾ ಆಡಿದ 7 ಪಂದ್ಯಗಳಲ್ಲಿ 5 ಜಯ ಸಾಧಿಸಿದ್ದು, 10 ಅಂಕ ಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಇಂಗ್ಲೆಂಡ್ ತಂಡ ಆಡಿದ 6 ಪಂದ್ಯಗಳಲ್ಲಿ, 4 ಜಯ ದಾಖಲಿಸಿದ್ದು, 9 ಅಂಕ ಸೇರಿಸಿ ಮೂರನೇ ಸ್ಥಾನದಲ್ಲಿದೆ. ಇನ್ನು ಭಾರತ 6 ಪಂದ್ಯಗಳಲ್ಲಿ 3 ಜಯ ಸಾಧಿಸಿದ್ದು, ನಾಲ್ಕನೇ ಸ್ಥಾನದೊಂದಿಗೆ ಉಪಾಂತ್ಯ ಪ್ರವೇಶಿಸಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications