ಶ್ರೀಲಂಕಾ ವಿರುದ್ಧ 80 ರನ್ ಬಾರಿಸಿದ ಸ್ಮೃತಿ ಮಂಧಾನ ಬರೆದ ದಾಖಲೆಗಳ ಪಟ್ಟಿ
ಭಾರತ ಹಾಗೂ ಶ್ರೀಲಂಕಾ ಮಹಿಳಾ ತಂಡಗಳ ನಡುವೆ 5 ಟಿ20 ಪಂದ್ಯಗಳ ಸರಣಿ ನಡೆಯತ್ತಿದೆ. ಈ ಸರಣಿಯಲ್ಲ ಸ್ಮೃತಿ ಮಂಧಾನ ಆರಂಭದ ಮೂರು ಪಂದ್ಯಗಳಲ್ಲಿ ರನ್ ಕಲೆ ಹಾಕುವಲ್ಲಿ ವಿಫಲರಾಗಿದ್ದರು. ಆದರೆ ನಾಲ್ಕನೇ ಟಿ20 ಪಂದ್ಯದಲ್ಲಿ ಸ್ಮೃತಿ ತಮ್ಮ ನೈಜ ಆಟವನ್ನು ಆಡಿ ಅಬ್ಬರಿಸಿದರು. ಅಲ್ಲದೆ ಟಿ20 ಕ್ರಿಕೆಟ್‌ನಲ್ಲಿ ಮತ್ತೊಂದು ಅರ್ಧಶತಕ ಬಾರಿಸಿ ಮಿಂಚಿದರು. ಇವರ ಆಟಕ್ಕೆ ಬ್ರೇಕ್ ಹಾಕಲು ಲಂಕಾ ಬೌಲರ್‌ಗಳ ವಿಫಲರಾದರು. ಇವರ ಸೊಗಸಾದ ಆಟಕ್ಕೆ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ತಿರುವನಂತಪುರಂನಲ್ಲಿ ನಡೆದ ನಾಲ್ಕನೇ ಟಿ20 ಪಂದ್ಯದಲ್ಲಿ ಸ್ಮೃತಿ ಕ್ಲಾಸಿಕ ಬ್ಯಾಟಿಂಗ್ ನಡೆಸಿ ಗಮನ ಸೆಳೆದರು. ಮೊದಲ ಮೂರು ಪಂದ್ಯದಲ್ಲಿ ರನ್ ಕಲೆ ಹಾಕುವಲ್ಲಿ ವಿಫಲರಾಗಿದ್ದ ಸ್ಮೃತಿ ನಾಲ್ಕನೇ ಪಂದ್ಯದಲ್ಲಿ 80 ರನ್‌ಗಳ ಇನಿಂಗ್ಸ್ ಕಟ್ಟಿ ಅಬ್ಬರಿಸಿದರು. ಇವರ ಈ ಇನಿಂಗ್ಸ್‌ನಲ್ಲಿ 11 ಬೌಂಡರಿ, 3 ಸಿಕ್ಸರ್‌ಗಳಳು ಸೇರಿವೆ. ಈ ಮೂಲಕ ಸ್ಮೃತಿ ಒಂದೇ ಕ್ಯಾಲೆಂಡರ್ ವರ್ಷದಲ್ಲಿ ಅತಿ ಹೆಚ್ಚು ರನ್‌ಗಳನ್ನು ಬಾರಿಸಿದ ತಮ್ಮದೇ ದಾಖಲೆಯನ್ನು ಮೀರಿ ನಿಂತರು. ಮಂಧಾನಾ 2025 ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 1703 ರನ್ ಗಳಿಸಿದ್ದಾರೆ. ಸ್ಮೃತಿ 2025 ರಲ್ಲಿ 23 ಏಕದಿನ ಪಂದ್ಯಗಳಲ್ಲಿ 2025 ರಲ್ಲಿ 23 ಏಕದಿನ ಪಂದ್ಯಗಳಲ್ಲಿ ಐದು ಶತಕಗಳು ಮತ್ತು ಐದು ಅರ್ಧಶತಕಗಳು ಸೇರಿದಂತೆ ಒಟ್ಟು 1,362 ರನ್ ಗಳಿಸಿದ್ದಾರೆ. ಇದಲ್ಲದೆ, ಅವರು 2025 ರಲ್ಲಿ ಒಂಬತ್ತು ಟಿ 20 ಐ ಪಂದ್ಯಗಳಲ್ಲಿ ಒಟ್ಟು 341 ರನ್ ಸಿಡಿಸಿದ್ದಾರೆ.

ಸ್ಮೃತಿ ಈ ಪಂದ್ಯದಲ್ಲಿ ಮತ್ತೊಂದು ದಾಖಲೆ ಬರೆದಿದ್ದಾರೆ. ಇವರು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 10 ಸಾವಿರ ರನ್ ಪುರೈಸಿಸಿದ ಎಲೈಟ್ ಕ್ಲಬ್‌ಗೆ ಸೇರಿಕೊಂಡಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ವಿಶ್ವದ ನಾಲ್ಕನೇ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ವಿಶ್ವ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಬಾರಿಸಿದ ಕೀರ್ತಿ ಟೀಮ್ ಇಂಡಿಯಾದ ದಿಗ್ಗಜ ಆಟಗಾರ್ತಿ ಮಿಥಾಲಿ ರಾಜ್ ಹೆಸರಿನಲ್ಲಿದೆ. ಇವರು ಒಟ್ಟು 10868 ರನ್ ಕಲೆ ಹಾಕಿದ್ದಾರೆ. ನ್ಯೂಜಿಲೆಂಡ್ ತಂಡದ ಸೂಜಿ ಬೇಟ್ಸ್, ಇಂಗ್ಲೆಂಡ್ ತಂಡದ ಚಾರ್ಲಟ್ ಎಡವರ್ಡ್ ಈ ಮೊದಲು ಈ ಸಾಧನೆ ಮಾಡಿದ್ದರು.
ಸಿಕ್ಸರ್ ಲೆಕ್ಕಾಚಾರದಲ್ಲೂ ಇವರೇ ಕ್ವೀನ್
ನಾಲ್ಕನೇ ಟಿ20 ಪಂದ್ಯದಲ್ಲಿ ಸ್ಮೃತಿ ಮಂಧಾನ 3 ಸಿಕ್ಸರ್ ಬಾರಿಸುತ್ತಲೇ ಮತ್ತೊಂದು ದಾಖಲೆ ಬರೆದಿದ್ದಾರೆ. ಟಿ20 ಕ್ರಿಕೆಟ್ ಇತಿಹಾಸದಲ್ಲಿ ಭಾರತದ ಪರ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಬ್ಯಾಟರ್ ಎಂಬ ಶ್ರೇಯ ತಮ್ಮದಾಗಿಸಿಕೊಂಡರು. ಈ ಮೂಲಕ ಸ್ಮೃತಿ ಮಂಧಾನ ಹರ್ಮನ್ ಪ್ರೀತ್ ಕೌರ್ ದಾಖಲೆಯನ್ನು ಅಳಿಸಿ ಹಾಕಿದರು. ಹರ್ಮನ್ ಪ್ರೀತ್ ಕೌರ್ ಟಿ20 ಕ್ರಿಕೆಟ್‌ನಲ್ಲಿ ಒಟ್ಟು 78 ಸಿಕ್ಸರ್ ಬಾರಿಸಿದ್ದ ದಾಖಲೆ ಹೊಂದಿದ್ದರು. ಈಗ ಈ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ಸ್ಮೃತಿ ಬಡ್ತಿ ಪಡೆದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications