For Quick Alerts
ALLOW NOTIFICATIONS  
For Daily Alerts
 

Smriti Mandhana: ಐಸಿಸಿ ಶ್ರೇಯಾಂಕದಲ್ಲಿ ಬಡ್ತಿ ಪಡೆದ ಸ್ಮೃತಿ

ಇತ್ತೀಚಿಗೆ ಭಾರತ ಮಹಿಳಾ ತಂಡ ಆಸ್ಟ್ರೇಲಿಯಾ ಪ್ರವಾಸವನ್ನು ಬೆಳೆಸಿತ್ತು. ಈ ವೇಳೆ ಟೀಮ್ ಇಂಡಿಯಾದ ಸ್ಟಾರ್‌ ಆಟಗಾರ್ತಿ ಸ್ಮೃತಿ ಮಂಧನಾ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿ ತಂಡಕ್ಕೆ ನೆರವಾಗಿದ್ದರು. ಮೂರನೇ ಏಕದಿನ ಪಂದ್ಯದಲ್ಲಿ ಇವರು ಭರ್ಜರಿ ಬ್ಯಾಟಿಂಗ್ ನಡೆಸಿ ಶತಕ ಬಾರಿಸಿದರು. ಈ ಸರಣಿಯಲ್ಲಿ ಟೀಮ್ ಇಂಡಿಯಾ ಕ್ಲೀನ್ ಸ್ವೀಪ್ ಸೋಲು ಕಂಡಿತು. ಆದರೆ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧನಾ ಕ್ಲಾಸಿಕ್ ಆಟದ ಫಲವಾಗಿ ಇತ್ತೀಚಿಗೆ ಬಿಡುಗಡೆ ಆಗಿರುವ ನೂತನ ಐಸಿಸಿ ಶ್ರೇಯಾಂಕದಲ್ಲಿ ಬಡ್ತಿ ಪಡೆದಿದ್ದಾರೆ.

ಐಸಿಸಿ ಮಹಿಳಾ ಏಕದಿನ ಶ್ರೇಯಾಂಕ ಮಂಗಳವಾರ ಹೊರ ಬಿದ್ದಿದೆ. ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೀಮ್ ಇಂಡಿಯಾ ಒಂದೇ ಒಂದು ಪಂದ್ಯವನ್ನು ಗೆಲ್ಲುವಲ್ಲಿ ವಿಫಲರಾದರೂ, ಆರಂಭಿಕ ಆಟಗಾರ್ತಿ ಸ್ಮೃತಿ ಮಂಧನಾ ಮುಖದಲ್ಲಿ ಮಂದಹಾಸ ಮೂಡಿದೆ. ನೂತನವಾಗಿ ಬಿಡುಗಡೆಗೊಂಡಿರುವ ಐಸಿಸಿ ಶ್ರೇಯಾಂಕದಲ್ಲಿ ಸ್ಮೃತಿ ಭಾರೀ ಲಾಭ ಪಡೆದಿದ್ದಾರೆ. ಇನ್ನು ಭಾರತ ತಂಡದ ನಾಯಕಿ ಹರ್ಮನ್‌ ಪ್ರೀತ್ ಕೌರ್ ಕುಸಿತ ಕಂಡಿದ್ದಾರೆ.

Smriti Mandhana Climbs to 2nd Spot in ICC ODI Rankings Despite India s 3-0 Loss to Australia

ಎರಡನೇ ಸ್ಥಾನಕ್ಕೆ ಸ್ಮೃತಿ ಬಡ್ತಿ

ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ನಡೆಸಿ ಶತಕ ಬಾರಿಸಿದ ಫಲವಾಗಿ ಶ್ರೇಯಾಂಕದಲ್ಲಿ ಇವರು ಎರಡನೇ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ. ಇವರು ಇದಕ್ಕೂ ಮೊದಲು ಐದನೇ ಸ್ಥಾನದಲ್ಲಿದ್ದರು. ಸ್ಮೃತಿ ಅವರ ಶಕತದ ಇನಿಂಗ್ಸ್ ಫಲವಾಗಿ 734 ರೇಟಿಂಗ್ ಅಂಕಗಳೊಂದಿಗೆ ಎರಡನೇ ಸ್ಥಾನಕ್ಕೆ ತಲುಪಿದ್ದಾರೆ. ಒಟ್ಟಿಗೆ, ಅವರು ಶ್ರೀಲಂಕಾದ ಚಾಮರಿ ಅಟಪಟ್ಟು, ಇಂಗ್ಲೆಂಡ್‌ನ ನಟಾಲಿ ಸ್ಕಿವರ್-ಬ್ರಂಟ್, ಆಸ್ಟ್ರೇಲಿಯಾದ ಎಲ್ಲಿಸ್ ಪೆರ್ರಿ ಮತ್ತು ಬೆತ್ ಮೂನಿ ಅವರನ್ನು ಹಿಂದಿಕ್ಕಿದರು.

ದಕ್ಷಿಣ ಆಫ್ರಿಕಾದ ಸ್ಟಾರ್ ಆಟಗಾರ್ತಿ ಲಾರಾ ವೊಲ್ವಾರ್ಡ್ಸ್ ಏಕದಿನ ಶ್ರೇಯಾಂಕದಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಇವರು 773 ರೇಟಿಂಗ್‌ ಪಾಯಿಂಟ್‌ ಹೊಂದಿದ್ದಾರೆ. ಭಾರತದ ನಾಯಕಿ ಹರ್ಮನ್‌ ಪ್ರೀತ್ ಕೌರ್‌ ಈನ ಮೊದಲು 11ನೇ ಸ್ಥಾನದಲ್ಲಿದ್ದರು. ಆದರೆ ನೂತನ ಶ್ರೇಯಾಂಕದಲ್ಲಿ 13ನೇ ಸ್ಥಾನಕ್ಕೆ ಕುಸಿದಿದ್ದಾರೆ. ಇವರ ರೇಟಿಂಗ್ ಪಾಯಿಂಟ್ 629 ಆಗಿದೆ.

Smriti Mandhana Climbs to 2nd Spot in ICC ODI Rankings Despite India s 3-0 Loss to Australia

ಸ್ಮೃತಿ ಅಬ್ಬರ

ಸ್ಮೃತಿ ಮಂಧನಾ ಅವರು ಭರ್ಜರಿ ಲಯದಲ್ಲಿದ್ದಾರೆ. ಇವರು ಆಸ್ಟ್ರೇಲಿಯಾ ವಿರುದ್ಧ ಮೂರನೇ ಟೆಸ್ಟ್‌ ಪಂದ್ಯದಲ್ಲಿ 105 ರನ್‌ಗಳ ಇನಿಂಗ್ಸ್‌ ಕಟ್ಟಿದ್ದರು. ಈಗ ಟೀಮ್ ಇಂಡಿಯಾ ಹಾಗೂ ವೆಸ್ಟ್‌ ಇಂಡೀಸ್‌ ವಿರುದ್ಧ ಟಿ20 ಸರಣಿ ಆಡುತ್ತಿದೆ. ಈ ಸರಣಿಯಲ್ಲಿ ಈಗ ಎರಡು ಪಂದ್ಯಗಳು ಮುಗಿದಿವೆ. ಮೊದಲ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಜಯ ಸಾಧಿಸಿದರೆ, ಎರಡನೇ ಪಂದ್ಯದಲ್ಲಿ ವಿಂಡೀಸ್ 9 ವಿಕೆಟ್‌ಗಳ ಜಯ ಸಾಧಿಸಿತು. ಸ್ಮೃತಿ ಮಂಧನಾ ತವರಿನಲ್ಲಿ ನಡೆಯುತ್ತಿರುವ ಟಿ20 ಸರಣಿಯಲ್ಲಿ ಕ್ಲಾಸಿಕ್ ಆಟದ ಪ್ರದರ್ಶನ ನೀಡಿದ್ದಾರೆ. ಇವರು ಮೊದಲ ಪಂದ್ಯದಲ್ಲಿ 54 ಹಾಗೂ ಎರಡನೇ ಪಂದ್ಯದಲ್ಲಿ 62 ರನ್‌ ಸಿಡಿಸಿ ತಂಡಕ್ಕೆ ಆಧಾರವಾದರು.

Story first published: Tuesday, December 17, 2024, 22:33 [IST]
Other articles published on Dec 17, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+