Smriti Mandhana: ಎಲೈಟ್ ಕ್ಲಬ್‌ಗೆ ಎಂಟ್ರಿ ಪಡೆದ ಸ್ಮೃತಿ ಮಂಧನಾ
ಟೀಮ ಇಂಡಿಯಾ ವನಿತೆಯರು ಸದ್ಯ ಇಂಗ್ಲೆಂಡ್ ವಿರುದ್ಧ ಟಿ20 ಸರಣಿಯನ್ನು ಆಡುತ್ತಿದೆ. ದಿ ಓವಲ್‌ನಲ್ಲಿ ನಡೆದ ಮೂರನೇ ಪಂದ್ಯದಲ್ಲಿ ಭಾರತ 5 ರನ್‌ಗಳಿಂದ ಇಂಗ್ಲೆಂಡ್ ವಿರುದ್ಧ ಸೋಲು ಕಂಡಿತು. ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ಸ್ಮೃತಿ ಮಂಧನಾ ತಮ್ಮ ಅಮೋಘ ಬ್ಯಾಟಿಂಗ್ ಪ್ರದರ್ಶನ ಮುಂದುವರೆಸಿದ್ದಾರೆ. ಈ ಮೂಲಕ ಆರಂಭಿಕ ಆಟಗಾರ್ತಿ ಸ್ಮೃತಿ ದಾಖಲೆ ಬರೆದಿದ್ದಾರೆ.
ಶುಕ್ರವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ 20 ಓವರ್‌ಗಳಲ್ಲಿ 9 ವಿಕೆಟ್‌ಗೆ 171 ರನ್ ಸೇರಿಸಿತು. ಇದಕ್ಕೆ ಉತ್ತರವಾಗಿ ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 166 ರನ್ ಸೇರಿಸಿ ಸೋಲು ಕಂಡಿತು. ಈ ಮೂಲಕ ಟೀಮ್ ಇಂಡಿಯಾ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಮೊದಲ ಸೋಲು ಕಂಡಿತು. ಆದರೆ ಈ ಪಂದ್ಯದಲ್ಲಿ ಸ್ಮೃತಿ ಮಂಧನಾ ಅಮೋಘ ಬ್ಯಾಟಿಂಗ್ ನಡೆಸಿದರು.

172 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಸ್ಮೃತಿ ಮಂಧನಾ ಕ್ಲಾಸಿಕ್ ಬ್ಯಾಟಿಂಗ್ ನಡೆಸಿದರು. ಇವರು ಶೆಫಾಲಿ ವರ್ಮಾ ಅವರಿಗೆ ಮೊದಲ ವಿಕೆಟ್‌ಗೆ ಭರ್ಜರಿ ಜೊತೆಯಾಟದ ಕಾಣಿಕೆ ನೀಡಿದರು. ಸ್ಮೃತಿ 49 ಎಸೆತಗಳಲ್ಲಿ 10 ಬೌಂಡರಿ ನೆರವಿನಿಂದ 56 ರನ್ ಬಾರಿಸಿದರು. ಈ ಮೂಲಕ ಸ್ಮೃತಿ ಮಂಧನಾ ದೊಡ್ಡ ದಾಖಲೆಯನ್ನು ಬರೆದರು.
ಮಿಥಾಲಿಗೆ ಅಗ್ರ ಸ್ಥಾನ
ಟೀಮ್ ಇಂಡಿಯಾದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧನಾ 56 ರನ್‌ಗಳ ನೆರವಿನಿಂದ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ದೊಡ್ಡ ದಾಖಲೆ ಬರೆದಿದ್ದಾರೆ. ಸ್ಮೃತಿ ಮೂರು ಸ್ವರೂಪಗಳಲ್ಲಿ 9 ಸಾವಿರ ರನ್ ದಾಖಲೆಯನ್ನು ಪೂರ್ಣಗೊಳಿಸಿದ ದಾಖಲೆಯನ್ನು ಬರೆದರು. ಈ ಮೂಲಕ ಈ ಸಾಧನೆಯನ್ನು ಮಾಡಿದ ವಿಶ್ವದ ಐದನೇ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಟಗಾರ್ತಿ ಮಿಥಾಲಿ ರಾಜ್ ಮೊದಲ ಸ್ಥಾನದಲ್ಲಿದ್ದಾರೆ.

ಮಿಥಾಲಿ ರಾಜ್ ಮೂರು ಸ್ವರೂಪಗಳಲ್ಲಿ ಒಟ್ಟು 10868 ರನ್ ಸಿಡಿಸಿದ್ದಾರೆ. ಇನ್ನು ಮೂರು ಫಾರ್ಮೆಟ್‌ಗಳಲ್ಲಿ 9 ಸಾವಿರ ರನ್ ಪೂರ್ಣಗೊಳಿಸಿದ ಎರಡನೇ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಸ್ಮೃತಿ ಪಾತ್ರರಾಗಿದ್ದಾರೆ. ಸ್ಮೃತಿ ಟೆಸ್ಟ್‌ನಲ್ಲಿ 987 ರನ್, ಏಕದಿನ ಕ್ರಿಕೆಟ್‌ನಲ್ಲಿ 4473 ರನ್ ಮತ್ತು ಟಿ20 ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 3942 ರನ್ ಸಿಡಿಸಿದ್ದಾರೆ.
ಒಟ್ಟಾರೆ ಮಹಿಳಾ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಕಲೆ ಹಾಕಿದ ಆಟಗಾರರ ಪಟ್ಟಿಯಲ್ಲಿ ನ್ಯೂಜಿಲೆಂಡ್ ತಂಡದ ಆಟಗಾರ್ತಿ ಸೂಜಿ ಬೇಟ್ಸ್ ಎರಡನೇ ಸ್ಥಾನದಲ್ಲಿದ್ದಾರೆ. ಇವರ ಬುಟ್ಟಿಯಲ್ಲಿ 10612 ರನ್‌ಗಳಿವೆ. ಇನ್ನು ಇಂಗ್ಲೆಂಡ್ ತಂಡದ ಚಾರ್ಲೊಟ್ ಎಡ್ವರ್ಡ್ಸ್ ತಂಡದ 10273 ರನ್ ಕಲೆ ಹಾಕಿದ್ದು, ಮೂರನೇ ಸ್ಥಾನದಲ್ಲಿದ್ದಾರೆ. ವೆಸ್ಟ್ ಇಂಡೀಸ್ ತಂಡದ ಬೌಲರ್ ಸ್ಟಫಾನಿ ಟೇಲರ್ 9299 ರನ್ ಬಾರಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications