ICC Women's World Cup: ಸ್ಮೃತಿ, ಪ್ರತಿಕಾ ಅರ್ಧಶತಕದ ಆಟ: ಬೃಹತ್ ಮೊತ್ತ ಕಲೆ ಹಾಕಿದ ಭಾರತ ದಾಖಲೆ
ಸಂಘಟಿತ ಆಟದ ಪ್ರದರ್ಶನ ನೀಡಿದ ಟೀಮ್ ಇಂಡಿಯಾ ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸವಾಲಿನ ಮೊತ್ತವನ್ನು ಕಲೆ ಹಾಕಿದೆ. ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾದ ಆರಂಭ ಭರ್ಜರಿಯಾಗಿತ್ತು. ಆರಂಭಿಕರಾದ ಸ್ಮೃತಿ ಮಂಧಾನ, ಪ್ರತಿಕಾ ರಾವಲ್ ಜೋಡಿ ಅಮೋಘ ಜೊತೆಯಾಟದ ಕಾಣಿಕೆ ನೀಡಿದರು. ಈ ಜೋಡಿಯನ್ನು ಕಟ್ಟಿ ಹಾಕುವಲ್ಲಿ ಆಸ್ಟ್ರೇಲಿಯಾ ಬೌಲರ್‌ಗಳು ವಿಫಲರಾದರು. ಈ ಜೋಡಿ ಮೊದಲ ಪವರ್‌ಪ್ಲೇನಲ್ಲಿ ವಿಕೆಟ್ ನಷ್ಟವಿಲ್ಲದೆ 58 ರನ್ ಕಲೆ ಹಾಕಿತು.
ಮೊದಲ ವಿಕೆಟ್‌ಗೆ ಸ್ಮೃತಿ ಹಾಗೂ ಪ್ರತಿಕಾ ಜೋಡಿ 24.3 ಓವರ್‌ಗಳಲ್ಲಿ 155 ರನ್‌ಗಳ ಜೊತೆಯಾಟದ ಕಾಣಿಕೆ ನೀಡಿದರು. ಈ ವೇಳೆ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ 66 ಎಸೆತಗಳಲ್ಲಿ 9 ಬೌಂಡರಿ, 3 ಸಿಕ್ಸರ್ ಸಹಾಯದಿಂದ 80 ರನ್ ಸಿಡಿಸಿದರು. ಪ್ರತಿಕಾ ರಾವಲ್ 96 ಎಸೆತಗಳಲ್ಲಿ 10 ಬೌಂಡರಿ, 1 ಸಿಕ್ಸರ್ ನೆರವಿನಿಂದ 75 ರನ್ ಬಾರಿಸಿ ಔಟ್ ಆದರು.

ಮಧ್ಯಮ ಕ್ರಮಾಂಕದಲ್ಲಿ ಹರ್ಲಿನ್ ಡಿಯೋಲ್ 42 ಎಸೆತಗಳಲ್ಲಿ 38 ರನ್ ಸಿಡಿಸಿದರು. ನಾಯಕಿ ಹರ್ಮನ್ ಪ್ರೀತ್ ಕೌರ್ ಬಿರುಸಿನ ಬ್ಯಾಟಿಂಗ್ ಪ್ರದರ್ಶನ ನೀಡಿ 17 ಎಸೆತಗಳಲ್ಲಿ 22 ರನ್ ಬಾರಿಸಿ ಇಲ್ಲದ ಹೊಡೆತಕ್ಕೆ ಮುಂದಾಗಿ ಔಟ್ ಆದರು. ಮಧ್ಯಮ ಕ್ರಮಾಂಕದಲ್ಲಿ ಜೆಮಿಮಾ ರೊಡ್ರಿಗಸ್ ಅವರು ತಂಡದ ಮೊತ್ತವನ್ನು ಹಿಗ್ಗಿಸುವಲ್ಲಿ ಸಫಲರಾದರು. ಇವರು 21 ಎಸೆತಗಳಲ್ಲಿ 5 ಬೌಂಡರಿ ನೆರವಿನಿಂದ 33 ರನ್ ಬಾರಿಸಿ ಔಟ್ ಆದರು.
ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ರಿಚಾ ಘೋಷ್, ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಬಿಗ್ ಇನಿಂಗ್ಸ್ ಕಟ್ಟುವಲ್ಲಿ ಎಡವಿದರು. ಇವರು 3 ಬೌಂಡರಿ, 2 ಸಿಕ್ಸರ್ ಸಹಾಯದಿಂದ 32 ರನ್ ಬಾರಿಸಿ ಔಟ್ ಆದರು.ಅಮನ್‌ಜೋತ್ ಕೌರ್ 16 ರನ್ ಬಾರಿಸಿದರೆ, ಉಳಿದ ಬ್ಯಾಟರ್‌ಗಳು ರನ್ ಕಲೆ ಹಾಕುವಲ್ಲಿ ವಿಫಲರಾದರು. ಅಂತಿಮವಾಗಿ ಭಾರತ 48.5 ಓವರ್‌ಗಳಲ್ಲಿ 330 ರನ್‌ಗಳಿಗೆ ಆಲೌಟ್ ಆಯಿತು.
ಪ್ರಸಕ್ತ ವಿಶ್ವಕಪ್‌ನಲ್ಲಿ ಅನ್ನಾಬೆಲ್ ಸದರ್ಲ್ಯಾಂಡ್ 5 ವಿಕೆಟ್ ಪಡೆದ ಮೊದಲ ಆಟಗಾರ್ತಿ ಎಂಬ ಖ್ಯಾತಿ ಪಡೆದರು. ಸೋಫಿ ಮೊಲಿನೆಕ್ಸ್ 3 ವಿಕೆಟ್ ಉರುಳಿಸಿದರು.
ಏಕದಿನ ವಿಶ್ವಕಪ್‌ನಲ್ಲಿ ಗರಿಷ್ಠ ಸ್ಕೋರ್
ಟೀಮ್ ಇಂಡಿಯಾ ಭರ್ಜರಿ ಪ್ರದರ್ಶನದ ಮೂಲಕ ಏಕದಿನ ವಿಶ್ವಕಪ್‌ನಲ್ಲಿ ಅತ್ಯಧಿಕ ರನ್ ಕಲೆ ಹಾಕಿದ ಕೀರ್ತಿಯನ್ನು ತನ್ನದಾಗಿಸಿಕೊಂಡಿತು. ಈ ಮೂಲಕ 2022ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ದಾಖಲಿಸಿದ್ದ 8 ವಿಕೆಟ್‌ಗೆ 317 ರನ್‌ಗಳ ದಾಖಲೆಯನ್ನು ಅಳಿಸಿ ಹಾಕಿದರು. ಅಲ್ಲದೆ ಪ್ರಸಕ್ತ ವಿಶ್ವಕಪ್‌ನಲ್ಲಿ ಭಾರತ ಅತ್ಯಧಿಕ ರನ್ ಕಲೆ ಹಾಕಿದ ಕೀರ್ತಿಯನ್ನು ಸಹ ತನ್ನದಾಗಿಸಿಕೊಂಡಿತು. ಆಸ್ಟ್ರೇಲಿಯಾ ಈ ಪಂದ್ಯವನ್ನು ಗೆಲ್ಲಲು 331 ರನ್‌ಗಳ ಬೇಕಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications