For Quick Alerts
ALLOW NOTIFICATIONS  
For Daily Alerts
 

ICC Women's ODI Rankings: ಮತ್ತೆ ಅಗ್ರಸ್ಥಾನಕ್ಕೆ ಸ್ಮೃತಿ ಬಡ್ತಿ

ಅಂತಾರಾಷ್ಟ್ರೀಯ ಕ್ರಿಕೆಟ್‌ ಮಂಡಳಿ ಮಂಗಳವಾರ ನೂತನ ಮಹಿಳಾ ಶ್ರೇಯಾಂಕಾವನ್ನು ಬಿಡುಗಡೆ ಮಾಡಿದೆ. ಈ ವೇಳೆ ಟೀಮ್ ಇಂಡಿಯಾದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ ಅವರು ಮತ್ತೊಮ್ಮೆ ಏಕದಿನ ಕ್ರಿಕೆಟ್‌ನಲ್ಲಿ ನಂಬರ್ 1 ಸ್ಥಾನವನ್ನು ಅಲಂಕರಿಸಿದ್ದಾರೆ. ಇವರು ಆಸ್ಟ್ರೇಲಿಯಾದಲ್ಲಿ ನಡೆದಿದ್ದ ಏಕದಿನ ಸರಣಿಯಲ್ಲಿ ಸ್ಮೃತಿ ಮಂಧಾನ ಅಬ್ಬರದ ಪ್ರದರ್ಶನ ನೀಡಿದ ಫಲವಾಗಿ ಇವರ ಶ್ರೇಯಾಂಕದಲ್ಲಿ ಬಡ್ತಿ ಪಡೆದಿದ್ದಾರೆ.

ಟೀಮ್ ಇಂಡಿಯಾ ಆಸ್ಟ್ರೇಲಿಯಾ ಪ್ರವಾಸದಲ್ಲಿ ಆಡಿದ ಮೂರು ಪಂದ್ಯಗಳಲ್ಲಿ ಸೋಲು ಕಂಡಿದೆ. ಆದರೆ ಈ ಸರಣಿಯಲ್ಲಿ ಟೀಮ್ ಇಂಡಿಯಾ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಅಬ್ಬರದ ಪ್ರದರ್ಶನ ನೀಡಿದ್ದಾರೆ. ಟೀಮ್ ಇಂಡಿಯಾದ ಭರವಸೆಯ ಆಟಗಾರ್ತಿ ಸ್ಮೃತಿ ಮಂಧಾನ 790 ರೇಟಿಂಗ್ ಅಂಕಗಳನ್ನು ಹೊಂದಿದ್ದು, ಅಗ್ರ ಸ್ಥಾನವನ್ನು ಕಾಯ್ದುಕೊಂಡಿದ್ದಾರೆ. ಸ್ಮೃತಿ ಆಸೀಸ್‌ ವಿರುದ್ಧ 58 ಹಾಗೂ 31 ರನ್‌ಗಳ ಅಮೋಘ ಇನಿಂಗ್ಸ್‌ ಕಟ್ಟಿದ್ದರು. ಈ ಇನಿಂಗ್ಸ್‌ ಫಲವಾಗಿ ಸ್ಮೃತಿ ಅಗ್ರ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ.

Smriti Mandhana

ಸ್ಮೃತಿ ಮಂಧಾನ, ದಕ್ಷಿಣ ಆಫ್ರಿಕಾದ ಲಾರಾ ವೋಲ್ವಾರ್ಡ್ಟ್ ಅವರನ್ನು ಹಿಂದಿಕ್ಕಿ ನಂಬರ್ ಒನ್ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ. ಲಾರಾ ವೋಲ್ವಾರ್ಡ್ಟ್, ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಸ್ಥಿರ ಪ್ರದರ್ಶನ ನೀಡಿ ಮತ್ತೆ ನಂಬರ್ 1 ಸ್ಥಾನ ಅಲಂಕರಿಸುವ ಸಾಧ್ಯತೆ ಇದೆ.

ಆಸ್ಟ್ರೇಲಿಯಾದ ಬೆತ್ ಮೂನಿ ಮತ್ತು ಅಲಿಸಾ ಹೀಲಿ ಭಾರೀ ಏರಿಕೆ ಕಂಡಿದ್ದಾರೆ. ಹೀಲಿ ಭಾರತದ ವಿರುದ್ಧದ ಕೊನೆಯ ಪಂದ್ಯದಲ್ಲಿ ಶತಕ ಬಾರಿಸಿ ಅಬ್ಬರಿಸಿದ್ದರು. ಹೀಗಾಗಿ ಇಬ್ಬರೂ ಬ್ಯಾಟ್ಸ್ಮನ್ಗಳು ತಲಾ ಎರಡು ಸ್ಥಾನ ಜಿಗಿತ ಕಂಡಿದ್ದರು. ಮೂನಿ ಮೂರನೇ ಸ್ಥಾನ ಪಡೆದರೆ, ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿರುವ ಅಲಿಸಾ ಹೀಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಭಾರತ ವಿರುದ್ಧದ ಏಕೈಕ ಟೆಸ್ಟ್ ನಂತರ ಹೀಲಿ ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತರಾಗಲಿದ್ದಾರೆ.

ಹರ್ಮನ್‌ಗೆ ಬಡ್ತಿ

ಟೀಮ್ ಇಂಡಿಯಾದ ನಾಯಕಿ ಹರ್ಮನ್ ಪ್ರೀತ್ ಕೌರ್‌ ಸಹ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಸ್ಥಿರ ಪ್ರದರ್ಶನ ನೀಡಿದ್ದು, ಶ್ರೇಯಾಂಕದಲ್ಲಿ ನಾಲ್ಕು ಸ್ಥಾನ ಏರಿಕೆ ಕಂಡಿದ್ದಾರೆ. ಸದ್ಯ ಹರ್ಮನ್ ಒಂಬತ್ತನೇ ಸ್ಥಾನಕ್ಕೆ ತಲುಪಿದ್ದಾರೆ.

ಆಶ್ ಗಾರ್ಡ್ನರ್ ನಂ. 1 ಶ್ರೇಯಾಂಕದ ಏಕದಿನ ಆಲ್ರೌಂಡರ್ ಆಗಿ ಮುಂದುವರೆದಿದ್ದಾರೆ, ವೆಸ್ಟ್ ಇಂಡೀಸ್ನ ಹೇಲಿ ಮ್ಯಾಥ್ಯೂಸ್ ಎರಡನೇ ಸ್ಥಾನದಲ್ಲಿದ್ದಾರೆ.

Story first published: Tuesday, March 3, 2026, 17:16 [IST]
Other articles published on Mar 3, 2026
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+