ಸ್ಮೃತಿ, ಕನ್ನಡತಿ ಶ್ರೇಯಾಂಕ ಮಿಂಚು: ಭಾರತಕ್ಕೆ 17 ರನ್ ಜಯ
ಆಡಿಲೇಡ್: ಭರವಸೆಯ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧನಾ ಹಾಗೂ ಜೆಮಿಮಾ ರೊಡ್ರಿಗಸ್ ಅವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಟೀಮ್ ಇಂಡಿಯಾ ಮೂರನೇ ಟಿ20 ಪಂದ್ಯದಲ್ಲಿ 17 ರನ್‌ಗಳಿಂದ ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಜಯ ಸಾಧಿಸಿದ್ದು, ಮೂರು ಪಂದ್ಯಗಳ ಸರಣಿಯನ್ನು 2-1 ರಿಂದ ಗೆದ್ದು ದಾಖಲೆ ಬರೆದಿದೆ.
ಟಾಸ್ ಗೆದ್ದ ಟೀಮ್ ಇಂಡಿಯಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಆರಂಭಿಕ ಶೆಫಾಲಿ ವರ್ಮಾ (7) ದೊಡ್ಡ ಇನಿಂಗ್ಸ್ ಕಟ್ಟುವಲ್ಲಿ ವಿಫಲರಾದರು. 19 ರನ್‌ಗಳಿಂದ ಒಂದು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ತಂಡಕ್ಕೆ ಉಪನಾಯಕಿ ಸ್ಮೃತಿ ಮಂಧಾನ ಹಾಗೂ ಜೆಮಿಮಾ ಜೋಡಿ ಅಬ್ಬರಿಸಿತು. ಈ ಜೋಡಿಯ ಆಟಕ್ಕೆ ಬ್ರೇಕ್ ಹಾಕುವಲ್ಲಿ ಆಸ್ಟ್ರೇಲಿಯಾದ ಬೌಲರ್‌ಗಳು ವಿಫಲರಾದರು. ಈ ಜೊಡಿ ಎರಡನೇ ವಿಕೆಟ್‌ಗೆ 121 ರನ್ ಸೇರಿಸಿತು.

ಸ್ಮೃತಿ ಮಂಧಾನ ಹಾಗೂ ಜೆಮಿಮಾ ರೊಡ್ರಿಗಸ್ ಅವರು ಎರಡನೇ ವಿಕೆಟ್‌ಗೆ 121 ರನ್‌ಗಳ ಜೊತೆಯಾಟದ ಕಾಣಿಕೆ ನೀಡಿದರು. ಈ ಮೂಲಕ ಮಹಿಳಾ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್‌ಗಳ ಜೊತೆಯಾಟವನ್ನು ನೀಡಿದರು. ಈ ಮೂಲಕ ಈ ಜೋಡಿ ಮಿಥಾಲಿ ರಾಜ್ ಹಾಗೂ ಪೂನಮ್ ರಾವತ್ ಅವರು ನೀಡಿ 98 ರನ್‌ಗಳ ಜೊತೆಯಾಟದ ಕಾಣಿಕೆಯನ್ನು ಅಳಿಸಿಹಾಕಿದರು.
ಸ್ಮೃತಿ, ಜೆಮಿಮಾ ಅರ್ಧಶತಕ
ಸ್ಮೃತಿ ಮಂಧಾನ ಭರ್ಜರಿ ಬ್ಯಾಟಿಂಗ್ ನಡೆಸಿದರು. ಇವರು 55 ಎಸೆತಗಳಲ್ಲಿ 8 ಬೌಂಡರಿ, 3 ಸಿಕ್ಸರ್ ಸಹಾಯದಿಂದ 82 ರನ್ ಸಿಡಿಸಿದರು. ಮಧ್ಯಮ ಕ್ರಮಾಂಕದಲ್ಲಿ ರಿಚಾ ಘೋಷ್ (18) ರನ್ ಕಲೆ ಹಾಕುವಲ್ಲಿ ವಿಫಲರಾದರು. ಮೂರನೇ ಕ್ರಮಾಂಕದ ಸ್ಟಾರ್ ಬ್ಯಾಟರ್ ಜೆಮಿಮಾ ರೊಡ್ರಿಗಸ್ ಇವರು 46 ಎಸೆತಗಳಲ್ಲಿ 4 ಬೌಂಡರಿ ಸಹಾಯದಿಂದ 59 ರನ್ ಬಾರಿಸಿದರು. ಅಂತಿಮವಾಗಿ ಭಾರತ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 176 ರನ್ ಸೇರಿಸಿತು.
ಗಾರ್ಡ್ನರ್ ಏಕಾಂಗಿ ಹೋರಾಟ
ಆಸ್ಟ್ರೇಲಿಯಾದ ಆರಂಭಿಕ ಆಟಗಾರ್ತಿಯರು ಭರ್ಜರಿ ಆಟದ ಪ್ರದರ್ಶನ ನೀಡಲಿಲ್ಲ. ಜಾರ್ಜಿಯಾ ವೋಲ್ (10), ಬೆತ್ ಮೂನಿ (6) ಉತ್ತಮ ಜೊತೆಯಾಟದ ಕಾಣಿಕೆ ನೀಡಲಿಲ್ಲ. ಎಲೈಸ್ ಪೆರ್ರಿ ದೊಡ್ಡ ಇನಿಂಗ್ಸ್ ಕಟ್ಟಲಿಲ್ಲ. ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದ ಫೋಬೆ ಲಿಚ್‌ಫೀಲ್ಡ್ (26) ಸಮಯೋಚಿತ ಬ್ಯಾಟಿಂಗ್ ನಡೆಸಿದರು. ಉಳಿದಂತೆ ಕೆಳ ಕ್ರಮಾಂಕದ ಬ್ಯಾಟರ್‌ಗಳ ರನ್ ಕಲೆ ಹಾಕುವಲ್ಲಿ ಎಡವಿದರು. ಸ್ಟಾರ್ ಆಟಗಾರ್ತಿ ಆಶ್ಲೀ ಗಾರ್ಡ್ನರ್ 5 ಬೌಂಡರಿ, 1 ಸಿಕ್ಸರ್ ನೆರವಿನಿಂದ 57 ರನ್ ಬಾರಿಸಿ ಸೋಲಿನ ಅಂತರವನ್ನು ಕಡಿಮೆ ಮಾಡಿದರು.

ಭಾರತದ ಪರ ಕನ್ನಡತಿ ಶ್ರೇಯಾಂಕ ಪಾಟೀಲ್ ಹಾಗೂ ಶ್ರೀ ಚರಣಿ ತಲಾ ಮೂರು ವಿಕೆಟ್ ಕಬಳಿಸಿದರು. ಭಾರತ ಈ ಸರಣಿಯ ಮೊದಲ ಪಂದ್ಯದಲ್ಲಿ ಗೆಲುವು ದಾಖಲಿಸಿತ್ತು. ಆದರೆ ಎರಡನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಜಯ ಸಾಧಿಸಿದ್ದರಿಂದ, ಮೂರನೇ ಪಂದ್ಯ ರೋಚಕತೆ ಹೆಚ್ಚಿಸಿತ್ತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications