Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Smriti Mandhana: 29ನೇ ವಸಂತಕ್ಕೆ ಕಾಲಿಟ್ಟ RCB ನಾಯಕಿ: ಇಲ್ಲಿದೆ 10 ದಾಖಲೆಗಳ ಪಟ್ಟಿ

ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್‌ ಸ್ಮೃತಿ ಮಂಧನಾ ಇಂದು (ಜುಲೈ 18) 29ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸದ್ದು ಮಾಡಿ ದೇಶಕ್ಕೆ ಕೀರ್ತಿ ತಂದಿರುವ ಸ್ಟಾರ್ ಬ್ಯಾಟರ್‌ ಸ್ಮೃತಿ, ಸದ್ಯ ಭಾರತ ತಂಡದ ಉಪನಾಯಕಿ. ಇವರು ತಮ್ಮ ಧಮಾಕೆದಾರ್ ಬ್ಯಾಟಿಂಗ್‌ನಿಂದ ತಂಡಕ್ಕೆ ನೆರವಾಗಿದ್ದಾರೆ. ಸ್ಮೃತಿ ಮಂಧನಾ ಮಹಿಳಾ ಪ್ರೀಮಿಯರ್‌ ಲೀಗ್‌ನಲ್ಲಿ ಮಿಂಚು ಹರಿಸಿರುವ ಸಾಧಕಿ. ಇವರು ಈ ಲೀಗ್‌ನಲ್ಲಿ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡದ ಪರ ಕಣಕ್ಕೆ ಇಳಿಯುತ್ತಾರೆ. ಅಲ್ಲದೆ ಈ ತಂಡಕ್ಕೆ ಚಾಂಪಿಯನ್ ಪಟ್ಟವನ್ನು ತೊಡಿಸಿದ ಹಿರಿಮೆ ಇವರದ್ದಾಗಿದೆ.

ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಬ್ಯಾಟರ್‌ ಇತ್ತೀಚಿಗೆ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯಲ್ಲಿ ಸ್ಥಿರ ಪ್ರದರ್ಶನ ನೀಡಿದ್ದಾರೆ. ಅಲ್ಲದೆ ಶತಕ ಬಾರಿಸಿ ಅಬ್ಬರಿಸಿದ್ದಾರೆ. ಸ್ಮೃತಿ ಈಗಾಗಲೇ ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್‌ನಲ್ಲಿ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಅವರು ನಿರ್ಮಿಸಿರುವ 10 ದಾಖಲೆಗಳ ಪಟ್ಟಿ ಇಲ್ಲಿದೆ.

Smriti Mandhana Turns 29 A Look at 10 Milestones of India amp amp RCB s Star Batter

ಸ್ಮೃತಿ ಮಂಧನಾ ಭಾರತದ ಪರ ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕಗಳನ್ನು ಬಾರಿಸಿದ ದಾಖಲೆಯನ್ನು ಹೊಂದಿದ್ದಾರೆ. ಇವರು ಏಕದಿನ ಫಾರ್ಮೆಟ್‌ನಲ್ಲಿ 10 ಶತಕ ಸಿಡಿಸಿದ್ದಾರೆ.

ಸ್ಮೃತಿ ಭಾರತದ ಪರ 153 ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ ಪಂದ್ಯಗಳಲ್ಲಿ 29.93 ಸರಾಸರಿಯಲ್ಲಿ 3982 ರನ್‌ ಕಲೆ ಹಾಕಿದ್ದಾರೆ. ಈ ಫಾರ್ಮೆಟ್‌ನಲ್ಲಿ ಭಾರತದ ಪರ ಕಲೆ ಹಾಕಿದ ಗರಿಷ್ಠ ರನ್ ಇದಾಗಿದೆ.

ದಾಖಲೆಗಳ ಒಡತಿ

ಭಾರತದ ಪರ ಸ್ಮೃತಿ ಮಂಧನಾ ಟಿ20 ಕ್ರಿಕೆಟ್‌ನಲ್ಲಿ ಗರಿಷ್ಠ ಸ್ಕೋರ್‌ ಬಾರಿಸಿದ ಹೆಗ್ಗಳಿಕೆ ತಮ್ಮದಾಗಿಸಿಕೊಂಡಿದ್ದಾರೆ. ಇಂಗ್ಲೆಂಡ್ ಪ್ರವಾಸದಲ್ಲಿ ಇವರು ಬಾರಿಸಿದ 112 ರನ್‌ ಗರಿಷ್ಠ ರನ್ ಆಗಿದೆ.

ಸ್ಮೃತಿ ಮಂಧನಾ ಮೂರು ಫಾರ್ಮೆಟ್‌ಗಳಲ್ಲಿ ಶತಕ ಬಾರಿಸಿದ ಭಾರತದ ಮೊದಲ ಆಟಗಾರ್ತಿ.

ಟೀಮ್ ಇಂಡಿಯಾದ ಆರಂಭಿಕ ಆಟಗಾರ್ತಿ ದ್ವಿಪಕ್ಷೀಯ ಟಿ20 ಸರಣಿಯಲ್ಲಿ ಅತಿ ಹೆಚ್ಚು ರನ್‌ ಕಲೆ ಹಾಕಿದ ಸಾಧನೆಯನ್ನು ಬರೆದಿದ್ದಾರೆ. ಇವರು ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ 200ಕ್ಕೂ ಹೆಚ್ಚು ರನ್ ಕಲೆ ಹಾಕಿದ್ದಾರೆ.

ಸ್ಮೃತಿ ಒಂದೇ ಕ್ಯಾಲೆಂಡರ್‌ ವರ್ಷದಲ್ಲಿ ಅತಿ ಹೆಚ್ಚು ಶತಕ ಬಾರಿಸಿದ ದಾಖಲೆಯನ್ನು ಸಹ ತಮ್ಮ ಹೆಸರಿಗೆ ನಮೂದಿಸಿಕೊಂಡಿದ್ದಾರೆ. ಇವರು ಕಳೆದ ವರ್ಷ 4 ಶತಕಗಳನ್ನು ಬಾರಿಸಿ ಅಬ್ಬರಿಸಿದ್ದರು.

ಸ್ಮೃತಿ ಮಂಧನಾ ಒಂದೇ ಕ್ಯಾಲೆಂಡರ್‌ ವರ್ಷದಲ್ಲಿ 100ಕ್ಕೂ ಹೆಚ್ಚು ಬೌಂಡರಿ ಬಾರಿಸಿದ ದಾಖಲೆಯನ್ನು ಹೊಂದಿದ್ದಾರೆ. ಇವರು ಕಳೆದ ವರ್ಷ 23 ಟಿ20 ಪಂದ್ಯಗಳಲ್ಲಿ 104 ಬೌಂಡರಿ ಬಾರಿಸಿದ್ದರು.

ಮಹಿಳಾ ಟಿ20 ಕ್ರಿಕೆಟ್‌ ಇತಿಹಾಸದಲ್ಲಿ ಸ್ಮೃತಿ 32 ಬಾರಿ 50ಕ್ಕೂ ಹೆಚ್ಚು ರನ್ ಸಾಧನೆ ಮಾಡಿದ್ದಾರೆ.

ಒಂದೇ ಕ್ಯಾಲೆಂಡರ್‌ ವರ್ಷದಲ್ಲಿ ಮಹಿಳಾ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಕಲೆ ಹಾಕಿದ ಹೆಗ್ಗಳಿಕೆ ಇವರದ್ದಾಗಿದೆ. ಇವರು ಕಳೆದ ವರ್ಷ 763 ರನ್‌ ಸಿಡಿಸಿದ್ದಾರೆ.

ಭಾರತದ ಪರ ಟಿ20 ಕ್ರಿಕೆಟ್‌ನಲ್ಲಿ ವೇಗವಾಗಿ 4 ಸಾವಿರ ರನ್‌ಗಳನ್ನು ಕಲೆ ಹಾಕಿದ ಮಹಿಳಾ ಆಟಗಾರ್ತಿ ಎಂಬ ಹಿರಿಮೆ ಹೊಂದಿದ್ದಾರೆ.

Story first published: Friday, July 18, 2025, 13:42 [IST]
Other articles published on Jul 18, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+