For Quick Alerts
ALLOW NOTIFICATIONS  
For Daily Alerts
 

ಮಹಿಳಾ ವಿಶ್ವಕಪ್‌ಗೂ ಮುನ್ನ ಎದುರಾಳಿಗೆ ನಡುಕ ಹುಟ್ಟಿಸಿದ ಸ್ಮೃತಿ

ಸೆಪ್ಟಂಬರ್‌ ಕೊನೆಯಲ್ಲಿ ಭಾರತದಲ್ಲಿ ಮಹಿಳಾ ಏಕದಿನ ವಿಶ್ವಕಪ್‌ ನಡೆಯಲಿದೆ. ಈ ಟೂರ್ನಿಗೆ ತೆರೆಯ ಮರೆಯಲ್ಲಿ ಭರ್ಜರಿ ಸಿದ್ಧತೆಗಳು ನಡೆದಿವೆ. ಈ ಮೆಗಾ ಟೂರ್ನಿಗೆ ಪೂರ್ವಭಾವಿಯಾಗಿ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ಮಹಿಳಾ ಏಕದಿನ ಟೂರ್ನಿಯ ಎರಡನೇ ಪಂದ್ಯದಲ್ಲಿ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧನಾ ಅಮೋಘ ಪ್ರದರ್ಶನ ನೀಡಿದ್ದಾರೆ. ಇವರ ಫಾರ್ಮ್‌ ನಿಜಕ್ಕೂ ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಭಾಗವಹಿಸುವ ತಂಡಗಳಿಗೆ ತಲೆ ನೋವಾಗಿದೆ.

ನ್ಯೂ ಚಂಡೀಗಡ್‌ ಅಂಗಳದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಫೀಲ್ಡಿಂಗ್ ಮಾಡುವ ನಿರ್ಧಾರವನ್ನು ಮಾಡಿತು. ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 49.5 ಓವರ್‌ಗಳಲ್ಲಿ 292 ರನ್‌ಗಳಿಗೆ ಅಲೌಟ್ ಆಯಿತು. ಈ ವೇಳೆ ಭಾರತದ ಆರಂಭಿಕ ಆಟಗಾರ್ತಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ತಂಡಕ್ಕೆ ಆಧಾರವಾಗಿದ್ದಾರೆ.

Smriti Mandhana s Form a Threat to Opponents in Women s ODI World Cup

ಟೀಮ್ ಇಂಡಿಯಾದ ಆರಂಭಿಕ ಜೋಡಿಯಾದ ಪ್ರತಿಕಾ ರಾವಲ್‌ (25) ಹಾಗೂ ಸ್ಮೃತಿ ಮಂಧನಾ ಅಮೋಘ ಜೊತೆಯಾಟದ ಕಾಣಿಕೆ ನೀಡಿದ್ದಾರೆ. ಇವರು ಮೊದಲ ವಿಕೆಟ್‌ಗೆ 70 ರನ್‌ ಸೇರಿಸಿದ್ದಾರೆ. ಎರಡನೇ ಪಂದ್ಯದಲ್ಲಿ ಸ್ಮೃತಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ಶತಕ ಬಾರಿಸಿದ್ದಾರೆ. ಇವರು 91 ಎಸೆತಗಳಲ್ಲಿ 14 ಬೌಂಡರಿ, 4 ಸಿಕ್ಸರ್ ಸಹಾಯದಿಂದ 117 ರನ್‌ ಬಾರಿಸಿದ್ದಾರೆ. ಈ ಮೂಲಕ ಸ್ಮೃತಿ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ.

ಸ್ಮೃತಿ ದಾಖಲೆ

ವಿಶ್ವ ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ ಸ್ಮೃತಿ ಅತಿ ಹೆಚ್ಚು ಶತಕಗಳನ್ನು ಬಾರಿಸಿದ ಆಟಗಾರ್ತಿಯರ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಜಿಗಿದಿದ್ದಾರೆ. ಸ್ಮೃತಿ 107 ಪಂದ್ಯಗಳಲ್ಲಿ 12 ಶತಕ ಬಾರಿಸಿ ಅಬ್ಬರಿಸಿದ್ದಾರೆ. ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಆಸ್ಟ್ರೇಲಿಯಾದ ಸ್ಟಾರ್ ಆಟಗಾರ್ತಿ ಮೆಗ್‌ ಲ್ಯಾನಿಂಗ್‌ ಇದ್ದು ಇವರ ಖಾತೆಯಲ್ಲಿ 15 ಶತಕಗಳು ಇವೆ. ಇನ್ನು ನ್ಯೂಜಿಲೆಂಡ್‌ ಬ್ಯಾಟರ್‌ ಸೂಜಿ ಬೇಟ್ಸ್‌ 13 ಶತಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.

Smriti Mandhana s Form a Threat to Opponents in Women s ODI World Cup

ಈ ಶತಕದ ಮೂಲಕ ಸ್ಮೃತಿ ಮತ್ತೊಂದು ದಾಖಲೆಯನ್ನು ಬರೆದಿದ್ದಾರೆ. ಆರಂಭಿಕ ಆಟಗಾರ್ತಿಯಾಗಿ ಅತಿ ಹೆಚ್ಚು ಶತಕಗಳನ್ನು ಬಾರಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಈಗ ಇವರು ಜಂಟಿ ಅಗ್ರ ಸ್ಥಾನವನ್ನು ಪಡೆದಿದ್ದಾರೆ. ಇವರು ನ್ಯೂಜಿಲೆಂಡ್‌ ಬ್ಯಾಟರ್‌ ಸೂಜಿ ಬೇಟ್ಸ್ ಅವರೊಂದಿಗೆ ಅಗ್ರ ಸ್ಥಾನ ಹಂಚಿಕೊಂಡಿದ್ದಾರೆ.

ಪಂದ್ಯದ ಫಲಿತಾಂಶ

ಗುರಿಯನ್ನು ಹಿಂಬಾಲಿಸಿದ ಆಸ್ಟ್ರೇಲಿಯಾ ಮಹಿಳಾ ತಂಡ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾದರು. ಅನ್ನಾಬೆಲ್ ಸದರ್ಲ್ಯಾಂಡ್ 45, ಎಲ್ಲಿಸ್‌ ಪೆರ್ರಿ 44 ರನ್‌ ಸಿಡಿಸಿ ತಂಡಕ್ಕೆ ನೆರವಾದರು. ಉಳಿದ ಆಟಗಾರರು ರನ್‌ ಕಲೆ ಹಾಕುವಲ್ಲಿ ವಿಫಲರಾದರು. ಪರಿಣಾಮ ಆಸೀಸ್‌ 40.5 ಓವರ್‌ಗಳಲ್ಲಿ 190 ರನ್‌ಗಳಿಗೆ ಆಲೌಟ್ ಆಯಿತು. ಭಾರತ 102 ರನ್‌ಗಳ ಭರ್ಜರಿ ಜಯ ದಾಖಲಿಸಿತು. ಟೀಮ್ ಇಂಡಿಯಾದ ಪರ ಕ್ರಾಂತಿ ಗೌಡ 3, ದೀಪ್ತಿ ಶರ್ಮಾ 2 ವಿಕೆಟ್‌ ಕಬಳಿಸಿದರು. ಈ ಗೆಲುವಿನ ಮೂಲಕ ಟೀಮ್ ಇಂಡಿಯಾ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-1 ಸಮಬಲ ಸಾಧಿಸಿದೆ.

Story first published: Wednesday, September 17, 2025, 18:49 [IST]
Other articles published on Sep 17, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+