ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಚೊಚ್ಚಲ ಪಂದ್ಯದಲ್ಲಿ 4 ವಿಕೆಟ್ ಹಾಗೂ ಅರ್ಧಶತಕ ಸಿಡಿಸಿ ದಾಖಲೆ ಬರೆದ ಸ್ನೇಹ್ ರಾಣಾ

Sneh Rana becomes the first Indian to score a half-century and grab a four-wicket haul On debut

ಭಾರತ ಹಾಗೂ ಇಂಗ್ಲೆಂಡ್ ವನಿತೆಯರ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ಪರವಾಗಿ ಚೊಚ್ಚಲ ಟೆಸ್ಟ್ ಪಂದ್ಯವನ್ನಾಡಿ ಸೇಹ್ ರಾಣಾ ಭರವಸೆಯನ್ನು ಮೂಡಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ಈ ಟೆಸ್ಟ್ ಪಂದ್ಯದಲ್ಲಿ ಸ್ನೇಹ್ ರಾಣಾ ಭಾರತೀಯ ಮಹಿಳಾ ಕ್ರಿಕೆಟಿಗರ ಪೈಕಿ ದಾಖಲೆಯೊಂದನ್ನು ಬರೆದಿದ್ದಾರೆ.

ಆಡಿದ ಚೊಚ್ಚಲ ಪಂದ್ಯದಲ್ಲಿ ಅರ್ಧ ಶತಕ ಹಾಗೂ ನಾಲ್ಕು ವಿಕೆಟ್‌ಗಳ ಗೊಂಚಲು ಪಡೆದ ಮೊದಲ ಭಾರತೀಯ ಆಟಗಾರ್ತಿ ಎನಿಸಿದ್ದಾರೆ ಸ್ನೇಹ್ ರಾಣಾ. ವಿಶ್ವ ಮಟ್ಟದಲ್ಲಿ ನಾಲ್ಕನೇ ಆಟಗಾರ್ತಿಯಾಗಿ ಅವರು ಗುರುತಿಸಿಕೊಂಡಿದ್ದಾರೆ.

ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತ 131 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡಿದ್ದಾಗ ಕಣಕ್ಕಿಳಿದಿದ್ದ ಸ್ನೇಹ್ ರಾಣಾ ಅದ್ಭುತ ಆಟವನ್ನು ಪ್ರದರ್ಶಿಸಿ ಅರ್ಧ ಶತಕಗಳಿಸಿದರು. ಎರಡನೇ ಇನ್ನಿಂಗ್ಸ್‌ನಲ್ಲಿ ಅಜೇಯ 80 ರನ್‌ಗಳ ಅಮೂಲ್ಯ ರನ್‌ಗಳನ್ನು ಗಳಿಸಿ ತಂಡವನ್ನು ಸೋಲಿನಿಂದ ಪಾರು ಮಾಡಿದ್ದಲ್ಲದೆ ಡ್ರಾ ಮಾಡಿಕೊಳ್ಳಲು ಪ್ರಮುಖ ಕಾರಣರಾದರು.

ಭಾರತ vs ಇಂಗ್ಲೆಂಡ್ ಮಹಿಳೆಯರ ಟೆಸ್ಟ್: ಡ್ರಾ ಮಾಡಿಕೊಳ್ಳಲು ಯಶಸ್ವಿಯಾದ ಭಾರತೀಯ ವನಿತೆಯರುಭಾರತ vs ಇಂಗ್ಲೆಂಡ್ ಮಹಿಳೆಯರ ಟೆಸ್ಟ್: ಡ್ರಾ ಮಾಡಿಕೊಳ್ಳಲು ಯಶಸ್ವಿಯಾದ ಭಾರತೀಯ ವನಿತೆಯರು

ತಾನಿಯಾ ಭಾಟಿಯಾ ಅವರೊಂದಿಗೆ ಸೇರಿ 104 ರನ್‌ಗಳ ಅಜೇಯ ಜೊತೆಯಾಟವನ್ನು ಅವರು ನೀಡಿದರು. ಇನ್ನು ಅಜೇಯ 80 ರನ್‌ಗಳನ್ನು ಗಳಿಸುವ ಮೂಲಕ ಆರಕ್ಕಿಂತ ಕೆಳ ಕ್ರಮಾಂಕದಲ್ಲಿ ಅತಿ ಹೆಚ್ಚು ರನ್‌ಗಳಿಸಿದ ಭಾರತೀಯ ಆಟಗಾರ್ತಿ ಎನಿಸಿಕೊಂಡಿದ್ದಾರೆ ಸ್ನೇಹ್ ರಾಣಾ.

ಸ್ನೇಹ್ ರಾಣಾ ಹಾಗೂ ತಾನಿಯಾ ಭಾಟಿಯಾ ಬ್ಯಾಟಿಂಗ್ ಸಾಹಸದಿಂದಾಗಿ ಇಂಗ್ಲೆಂಡ್ ವಿರುದ್ಧದ ಏಕೈಕ ಟೆಸ್ಟ್ ಪಂದ್ಯ ಡ್ರಾದಲ್ಲಿ ಅಂತ್ಯ ಕಂಡಿದೆ. ಈ ಜೋಡಿ ಭಾರತೀಯ ಮಹಿಳಾ ತಂಡದ ಪರವಾಗಿ 9ನೇ ವಿಕೆಟ್‌ಗೆ ಅತಿ ಹೆಚ್ಚಿನ ರನ್‌ಗಳ ಜೊತೆಯಾಟವನ್ನು ನೀಡಿದ ಸಾಧನೆಯನ್ನು ಕೂಡ ಮಾಡಿದ್ದಾರೆ.

ಮೊದಲಿಗೆ ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ್ದ ಇಂಗ್ಲೆಂಡ್ ಮಹಿಳೆಯರ ತಂಡ 396/9 ರನ್‌ಗಳಿಸಿ ಡಿಕ್ಲೇರ್ ಮಾಡಿತ್ತು. ನಂತರ ಭಾರತ 231 ರನ್‌ಗಳಸಲಷ್ಟೇ ಶಕ್ತವಾಗಿ ಫಾಲೋಆನ್‌ಗೆ ತುತ್ತಾಯಿತು. ಹೀಗಾಗಿ ಮತ್ತೊಮ್ಮೆ ಬ್ಯಾಟಿಂಗ್‌ಗೆ ಇಳಿದ ಭಾರತ ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಸ್ನೇಹ್ ರಾಣಾ ಹಾಗೂ ತಾನಿಯಾ ಭಾಟಿಯಾ ಸಾಹಸದಿಂದ 344/8 ರನ್‌ಗಳಿಸಲು ಶಕ್ತವಾಯಿತು. ಈ ಮೂಲಕ ನಾಲ್ಕು ದಿನಗಳ ಟೆಸ್ಟ್ ಪಂದ್ಯ ಡ್ರಾ ಕಂಡಿದೆ.

Story first published: Sunday, June 20, 2021, 11:40 [IST]
Other articles published on Jun 20, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X