'ನಾಯಕತ್ವವನ್ನು ಕಡೆಗಣಿಸಬಾರದು'; ಪಂದ್ಯ ಮುಗಿಯುವ ಮುನ್ನವೇ ಆಕಾಶ್ ಚೋಪ್ರಾ ಹೇಳಿದ್ದು ಯಾರಿಗೆ?

ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ರನ್ನರ್ ಅಪ್ ಆಗಿ ಹೊರಹೊಮ್ಮಿದ ನಂತರ ಭಾರತ ಪ್ರವಾಸವನ್ನು ಕೈಗೊಂಡಿದ್ದ ನ್ಯೂಜಿಲೆಂಡ್ ಟೀಮ್ ಇಂಡಿಯಾ ವಿರುದ್ಧ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಮತ್ತು 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಿತ್ತು. ಮೊದಲಿಗೆ ಟೀಮ್ ಇಂಡಿಯಾ ವಿರುದ್ಧದ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಎಲ್ಲಾ ಪಂದ್ಯಗಳನ್ನು ಸೋಲುವುದರ ಮೂಲಕ ವೈಟ್ ವಾಷ್ ಮುಖಭಂಗಕ್ಕೆ ಒಳಗಾದ ಕಿವೀಸ್ ನಂತರ ನಡೆದ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ನ್ಯೂಜಿಲೆಂಡ್ ವಿರಾಟ್ ಕೊಹ್ಲಿ ನಾಯಕತ್ವದ ಟೀಮ್ ಇಂಡಿಯಾವನ್ನು ಎದುರಿಸಲಾಗದೇ ಮಣ್ಣು ಮುಕ್ಕಿದೆ.

ಪುನೀತ್‌ ನೆನೆದು ವಿಶೇಷವಾಗಿ ಗೌರವ ಸಲ್ಲಿಸಿದ ಡೇವಿಡ್ ವಾರ್ನರ್; ವಿಡಿಯೋ ವೈರಲ್ಪುನೀತ್‌ ನೆನೆದು ವಿಶೇಷವಾಗಿ ಗೌರವ ಸಲ್ಲಿಸಿದ ಡೇವಿಡ್ ವಾರ್ನರ್; ವಿಡಿಯೋ ವೈರಲ್

ಹೌದು, ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆಗಳನ್ನು ಹುಟ್ಟುಹಾಕಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿ ನಿಗದಿತ ಸಮಯಕ್ಕಿಂತ ಬೇಗನೆ ಮುಕ್ತಾಯಗೊಂಡಿದೆ. ಇತ್ತಂಡಗಳ ನಡುವೆ ಮೊದಲಿಗೆ ಕಾನ್ಪುರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪ್ರಥಮ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿತ್ತು. ಇತ್ತ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ಭರ್ಜರಿ 372 ರನ್‌ಗಳ ಅಂತರದಿಂದ ಜಯ ಸಾಧಿಸುವುದರ ಮೂಲಕ ಸರಣಿಯನ್ನು 1-0 ಅಂತರದಿಂದ ವಶಕ್ಕೆ ಪಡೆಯಿತು.

ಪಂದ್ಯದಲ್ಲಿ ಟಾಸ್ ಗೆದ್ದ ವಿರಾಟ್ ಕೊಹ್ಲಿ ಮೊದಲಿಗೆ ಬ್ಯಾಟಿಂಗ್ ಮಾಡುವ ಆಯ್ಕೆಯನ್ನು ಆರಿಸಿಕೊಂಡರು. ಹೀಗೆ ಮೊದಲನೇ ಇನ್ನಿಂಗ್ಸ್‌ ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾ ಮಯಾಂಕ್ ಅಗರ್ವಾಲ್, ಶುಬ್ ಮನ್ ಗಿಲ್, ಅಕ್ಷರ್ ಪಟೇಲ್ ಮತ್ತು ರವಿಚಂದ್ರನ್ ಅಶ್ವಿನ್ ಜವಾಬ್ದಾರಿಯುತ ಆಟದ ನೆರವಿನಿಂದ ಟೀಮ್ ಇಂಡಿಯಾ 325 ರನ್ ಕಲೆಹಾಕಿತು. ಅತ್ತ ತನ್ನ ಮೊದಲನೇ ಇನ್ನಿಂಗ್ಸ್ ಬ್ಯಾಟಿಂಗ್ ಆರಂಭಿಸಿದ ನ್ಯೂಜಿಲೆಂಡ್ ಟೀಮ್ ಇಂಡಿಯಾ ಬೌಲರ್‌ಗಳ ಎದುರು ಮಂಕಾಗಿ ಕೇವಲ 62 ರನ್‌ಗಳಿಗೆ ಆಲ್ ಔಟ್ ಆಯಿತು. ಹೀಗೆ ಮೊದಲನೇ ಇನ್ನಿಂಗ್ಸ್‌ನಲ್ಲಿಯೇ ದೊಡ್ಡ ಮುನ್ನಡೆ ಕಾಯ್ದುಕೊಂಡ ಭಾರತ ಫಾಲೋ ಆನ್ ತೆಗೆದುಕೊಳ್ಳದೇ ತನ್ನ ಎರಡನೇ ಇನಿಂಗ್ಸ್ ಬ್ಯಾಟಿಂಗ್ ಆರಂಭಿಸಿತು. ಹೀಗೆ ಎರಡನೇ ಇನ್ನಿಂಗ್ಸ್‌ನಲ್ಲಿ ತಂಡದ ಆಟಗಾರರ ಉತ್ತಮ ಬ್ಯಾಟಿಂಗ್ ಪ್ರದರ್ಶನದ ನೆರವಿನಿಂದ ಟೀಮ್ ಇಂಡಿಯಾ 7 ವಿಕೆಟ್ ನಷ್ಟಕ್ಕೆ 276 ರನ್ ಕಲೆಹಾಕಿ ಡಿಕ್ಲೇರ್ ಮಾಡಿಕೊಂಡಿತು. ಈ ಮೂಲಕ ಟೀಮ್ ಇಂಡಿಯಾ 539 ರನ್ ಮುನ್ನಡೆ ಸಾಧಿಸಿ ನ್ಯೂಜಿಲೆಂಡ್ ತಂಡಕ್ಕೆ ಗೆಲ್ಲಲು ಬರೋಬ್ಬರಿ 540 ರನ್‌ಗಳ ಬೃಹತ್ ಮೊತ್ತದ ಗುರಿಯನ್ನು ನೀಡಿತು. ಆದರೆ ಈ ಮೊತ್ತವನ್ನು ಬೆನ್ನತ್ತುವಲ್ಲಿ ವಿಫಲವಾದ ನ್ಯೂಜಿಲೆಂಡ್ 167 ರನ್‌ಗಳಿಗೆ ಆಲ್ ಔಟ್ ಆಗುವುದರ ಮೂಲಕ ಪಂದ್ಯದಲ್ಲಿ ಹೀನಾಯವಾಗಿ ಸೋತು ಟೆಸ್ಟ್ ಸರಣಿಯನ್ನು ಕೂಡ ಕೈಚೆಲ್ಲಿತು.

ಸನ್ ರೈಸರ್ಸ್ ಹೈದರಾಬಾದ್‌ನಿಂದ ಹೊರಬಿದ್ದ ನಂತರ ಮುಂದಿನ ನಡೆ ಕುರಿತು ಸುಳಿವು ನೀಡಿದ ವಾರ್ನರ್‌ಸನ್ ರೈಸರ್ಸ್ ಹೈದರಾಬಾದ್‌ನಿಂದ ಹೊರಬಿದ್ದ ನಂತರ ಮುಂದಿನ ನಡೆ ಕುರಿತು ಸುಳಿವು ನೀಡಿದ ವಾರ್ನರ್‌

ಹೀಗೆ ಎರಡನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಂದು ನ್ಯೂಜಿಲೆಂಡ್ ಟೀಂ ಇಂಡಿಯಾ ವಿರುದ್ಧ ಹೀನಾಯವಾಗಿ ಸೋತಿದೆ. ಆದರೆ ಇದಕ್ಕೂ ಹಿಂದಿನ ದಿನ ಅಂದರೆ ಮೂರನೇ ದಿನದಾಟದ ಮಧ್ಯಾಹ್ನದ ವೇಳೆಗೆ ಭಾರತದ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿದ್ದು "ನಾಯಕತ್ವವನ್ನು ಯಾವುದೇ ಕಾರಣಕ್ಕೂ ಕಡೆಗಣಿಸಬಾರದು ಎಂಬುದನ್ನು ಕೆಲವೊಂದು ಪಂದ್ಯಗಳು ನಿಮಗೆ ನೆನಪಿಸುತ್ತವೆ" ಎಂದು ಬರೆದುಕೊಂಡಿದ್ದಾರೆ.

ಆಕಾಶ್ ಚೋಪ್ರಾ ಈ ರೀತಿಯ ಬರಹವನ್ನು ಬರೆದುಕೊಳ್ಳುವುದರ ಮೂಲಕ ಮಾಡಿರುವ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ ಗೊಂದಲವನ್ನು ಉಂಟುಮಾಡಿದೆ. ಏಕೆಂದರೆ ಈ ಪಂದ್ಯಕ್ಕೂ ಮುನ್ನ ನಡೆದ ಪ್ರಥಮ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಕೇನ್ ವಿಲಿಯಮ್ಸನ್ ಮುನ್ನಡೆಸಿದ್ದರು ಮತ್ತು ಭಾರತ ತಂಡವನ್ನು ಅಜಿಂಕ್ಯ ರಹಾನೆ ಮುನ್ನಡೆಸಿದ್ದರು. ಆದರೆ ಈ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಟಾಮ್ ಲಾಥಮ್ ಮುನ್ನಡೆಸಿದರೆ, ಭಾರತ ತಂಡವನ್ನು ವಿರಾಟ್ ಕೊಹ್ಲಿ ಮುನ್ನಡೆಸಿದ್ದಾರೆ. ಹೀಗಾಗಿ ಆಕಾಶ್ ಚೋಪ್ರಾ ವಿರಾಟ್ ಕೊಹ್ಲಿ ಆಗಮನದ ನಂತರ ಟೀಮ್ ಇಂಡಿಯಾ ಉತ್ತಮ ಪ್ರದರ್ಶನ ನೀಡಿತು ಎಂಬರ್ಥದಲ್ಲಿ ಟ್ವೀಟ್ ಮಾಡಿದ್ದಾರಾ ಅಥವಾ ಟಾಮ್ ಲಾಥಮ್ ನಾಯಕತ್ವದಲ್ಲಿ ನ್ಯೂಜಿಲೆಂಡ್ ಕಳಪೆ ಪ್ರದರ್ಶನ ನೀಡಿದೆ ಎಂಬರ್ಥದಲ್ಲಿ ಟ್ವೀಟ್ ಮಾಡಿದ್ದಾರಾ ಎಂಬ ಗೊಂದಲ ಉಂಟಾಗಿದೆ.

ನೆಟ್ಟಿಗರು ಕೂಡ ಇದೇ ಅನುಮಾನದೊಂದಿಗೆ ಆಕಾಶ್ ಚೋಪ್ರಾ ಅವರ ಈ ಟ್ವೀಟ್‌ಗೆ ಪ್ರತ್ಯುತ್ತರಗಳನ್ನು ನೀಡುತ್ತಿದ್ದು ಚರ್ಚೆಗಳಲ್ಲಿ ತೊಡಗಿದ್ದಾರೆ. ಆಕಾಶ್ ಚೋಪ್ರಾ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಟೀಂ ಇಂಡಿಯಾ ಉತ್ತಮ ಪ್ರದರ್ಶನ ನೀಡಿತು ಎಂಬರ್ಥದಲ್ಲಿ ಈ ಟ್ವೀಟ್ ಮಾಡಿದ್ದಾರೆ ಎಂದು ಕೆಲವೊಂದಿಷ್ಟು ಮಂದಿ ವಾದಿಸುತ್ತಿದ್ದರೆ, ಟಾಮ್ ಲಾಥಮ್ ನಾಯಕತ್ವದಲ್ಲಿ ನ್ಯೂಜಿಲೆಂಡ್ ಕಳಪೆ ಪ್ರದರ್ಶನ ನೀಡಿದ ಕಾರಣ ಟೀಮ್ ಇಂಡಿಯಾ ಉತ್ತಮ ಹಂತದಲ್ಲಿದೆ ಎಂಬರ್ಥದಲ್ಲಿ ಆಕಾಶ್ ಚೋಪ್ರಾ ಟ್ವೀಟ್ ಮಾಡಿದ್ದಾರೆ ಎಂದು ಮತ್ತೊಂದಷ್ಟು ನೆಟ್ಟಿಗರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹೀಗೆ ಆಕಾಶ್ ಚೋಪ್ರಾ ಮಾಡಿರುವ ಈ ಟ್ವೀಟ್ ಸದ್ಯ ಗೊಂದಲದ ಗೂಡಾಗಿ ಚರ್ಚೆಗಳಿಗೆ ಎಡೆಮಾಡಿಕೊಟ್ಟಿದೆ.

For Quick Alerts
ALLOW NOTIFICATIONS
For Daily Alerts
Story first published: Monday, December 6, 2021, 18:31 [IST]
Other articles published on Dec 6, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X