ಭಾರತದ ಹಲವು ಕ್ರಿಕೆಟಿಗರು ನಿವೃತ್ತಿಯಾಗಲಿದ್ದಾರೆ, ಈತನೇ ಭವಿಷ್ಯದ ನಾಯಕ ಎಂದ ಸುನಿಲ್ ಗವಾಸ್ಕರ್

ಮಹತ್ವದ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ 10 ವಿಕೆಟ್‌ಗಳ ಹೀನಾಯ ಸೋಲನುಭವಿಸುವ ಮೂಲಕ ಟಿ20 ವಿಶ್ವಕಪ್‌ನಿಂದ ಹೊರಬಿದ್ದಿದೆ. ಭಾರತದ ಸೋಲಿನ ನಂತರ, ತಂಡದ ಹಲವು ಕ್ರಿಕೆಟಿಗರು ನಿವೃತ್ತಿಯಾಗುವ ಸಾಧ್ಯತೆ ಇದೆ ಎಂದು ಭಾರತದ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಹೇಳಿದ್ದಾರೆ.
ಮೊದಲು ಬ್ಯಾಟಿಂಗ್ ಮಾಡಿದ ಭಾರತ ಆರಂಭಿಕರಾದ ರಾಹುಲ್ ಮತ್ತು ರೋಹಿತ್ ಶರ್ಮಾ ಅವರ ವೈಫಲ್ಯದಿಂದ 20 ಓವರ್ ಗಳಲ್ಲಿ 168 ರನ್ ಗಳಿಸಿದರು. ಈ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ತಂಡ, 16 ಓವರ್ ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 170 ರನ್ ಗಳಿಸುವ ಮೂಲಕ ಫೈನಲ್ ಪ್ರವೇಶಿಸಿದರು. ಜೋಸ್ ಬಟ್ಲರ್ ಮತ್ತು ಅಲೆಕ್ಸ್ ಹೇಲ್ಸ್ ಭಾರತದ ಬೌಲರ್ ಗಳನ್ನು ಮನಬಂದಂತೆ ದಂಡಿಸಿದರು.
ಭಾರತ-ಇಂಗ್ಲೆಂಡ್ ಪಂದ್ಯದ ನಂತರ ಮಾತನಾಡಿದ ಸುನಿಲ್ ಗವಾಸ್ಕರ್, ಭಾರತ ತಂಡದಲ್ಲಿ ಅತೀ ಶೀಘ್ರದಲ್ಲೇ ಮಹತ್ವದ ಬದಲಾವಣೆಗಳನ್ನು ಕಾಣಬಹುದು ಎಂದು ನಿರೀಕ್ಷಿಸಿದ್ದಾರೆ. ಅಲ್ಲದೆ, ಹಾರ್ದಿಕ್ ಪಾಂಡ್ಯ ವಿಶ್ವಕಪ್ ನಂತರ ಭಾರತದ ನಾಯಕತ್ವವನ್ನು ವಹಿಸಿಕೊಳ್ಳಬಹುದು ಎಂದು ಹೇಳಿದ್ದಾರೆ.

ತಂಡದ ಹಲವರು ನಿವೃತ್ತಿ ಸಾಧ್ಯತೆ
ಈ ಸೋಲಿನ ನಂತರ ಭಾರತ ತಂಡದ ಹಲವು ಹಿರಿಯ ಕ್ರಿಕೆಟಿಗರು ನಿವೃತ್ತಿ ತೆಗೆದುಕೊಳ್ಳಬಹುದು ಎಂದು ಸುನಿಲ್ ಗವಾಸ್ಕರ್ ಹೇಳಿದ್ದಾರೆ. 30 ವರ್ಷದ ಮೇಲ್ಪಟ್ಟ ಹಲವು ಕ್ರಿಕೆಟಿಗರು ಈಗ ಕ್ರಿಕೆಟ್‌ನಿಂದ ನಿವೃತ್ತಿಯಾಗುವ ಬಗ್ಗೆ ಯೋಚಿಸುತ್ತಿರಬಹುದು ಎಂದ ಅವರು, ಶೀಘ್ರದಲ್ಲಿ ತಂಡದಲ್ಲಿ ಹಲವು ಬದಲಾವಣೆಯಾಗಲಿದೆ ಎಂದು ನಿರೀಕ್ಷೆ ಮಾಡಿದ್ದಾರೆ.
ರವಿಚಂದ್ರನ್ ಅಶ್ವಿನ್, ರೋಹಿತ್ ಶರ್ಮಾ, ಭುವನೇಶ್ವರ್ ಕುಮಾರ್, ಕೆಎಲ್ ರಾಹುಲ್ ಕಳಪೆ ಪ್ರದರ್ಶನದ ಬಗ್ಗೆ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿವೆ. ಟಿ20 ತಂಡದಲ್ಲಿ ಹೊಸಬರಿಗೆ ಅವಕಾಶ ನೀಡಬೇಕು ಎಂದು ಹೇಳಿದ್ದಾರೆ.
IPL 2023: ಆಟಗಾರರ ಹರಾಜಿಗೂ ಮುನ್ನ ತಂಡದಿಂದ ಹೊರಬೀಳಲಿರುವ 5 ದುಬಾರಿ ಆಟಗಾರರು

ಹಾರ್ದಿಕ್ ಪಾಂಡ್ಯ ಟೀಂ ಇಂಡಿಯಾದ ನಾಯಕ
ಕೆಲವರು ನಿವೃತ್ತಿಯಾದ ನಂತರ ಹಲವರು ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ. ಭಾರತದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಟೀಂ ಇಂಡಿಯಾದ ನಾಯಕನಾಗಲಿದ್ದಾರೆ ಎಂದು ಸುನಿಲ್ ಗವಾಸ್ಕರ್ ಹೇಳಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಗುಜರಾತ್ ಟೈಟಾನ್ಸ್ ತಂಡದ ನಾಯಕನಾಗಿ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದಾರೆ. ಮೊದಲ ಬಾರಿ ನಾಯಕನಾದ ಸಂದರ್ಭದಲ್ಲೇ ಟ್ರೋಫಿ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಗವಾಸ್ಕರ್ ಹೇಳಿದ್ದಾರೆ. ಗಮನಾರ್ಹವಾಗಿ, ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ಹಾರ್ದಿಕ್ ಪಾಂಡ್ಯ ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ.

ಅತ್ಯಂತ ಕೆಟ್ಟ ಪ್ರದರ್ಶನ ನೀಡಿದ ಟೀಂ ಇಂಡಿಯಾ
ಗುಂಪಿನ ಅಗ್ರಸ್ಥಾನಿಗಳಾಗಿ ಸೆಮಿಫೈನಲ್ ಪ್ರವೇಶಿಸಿದ ಟೀಂ ಇಂಡಿಯಾ ತನ್ನ ಸಾಮರ್ಥ್ಯಕ್ಕೆ ತಕ್ಕಂತೆ ಆಟ ಆಡುವಲ್ಲಿ ಸಂಪೂರ್ಣ ವಿಫಲವಾಯಿತು. ಭಾರತದ ಬೌಲಿಂಗ್ ಎಷ್ಟು ದುರ್ಬಲವಾಗಿದೆ ಎಂದು ಇಂಗ್ಲೆಂಡ್ ಬ್ಯಾಟರ್ ಗಳು ತೋರಿಸಿಕೊಟ್ಟರು. ಅಡಿಲೇಡ್ ಓವಲ್‌ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ಅರ್ಧಶತಕದ ನೆರವಿನಿಂದ 168 ರನ್ ಕಲೆಹಾಕಿದರು.
ಭುವನೇಶ್ವರ್ ಕುಮಾರ್ ಮತ್ತು ಮೊಹಮ್ಮದ್ ಶಮಿ ಸೇರಿದಂತೆ ಭಾರತದ ಎಲ್ಲಾ ಬೌಲರ್ ಗಳು ಸಂಪೂರ್ಣವಾಗಿ ವಿಫಲರಾದರು. ಭಾರತದ ವಿರುದ್ಧ ಗೆಲುವು ಸಾಧಿಸಿದ ನಂತರ ಇಂಗ್ಲೆಂಡ್ ನವೆಂಬರ್ 13 ರಂದು ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಪಾಕಿಸ್ತಾನದ ವಿರುದ್ಧ ಫೈನಲ್‌ನಲ್ಲಿ ಸೆಣೆಸಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications