For Quick Alerts
ALLOW NOTIFICATIONS  
For Daily Alerts
 

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಕೋಲ್ಕತ್ತಾ ಆಸ್ಪತ್ರೆಗೆ ದಾಖಲು

Sourav Ganguly admitted to Kolkata Hospital after experience chest pain

ಕೋಲ್ಕತ್ತಾ: ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಅಧ್ಯಕ್ಷ, ಟೀಮ್ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಅವರು ಶನಿವಾರ (ಜನವರಿ 2) ಕೋಲ್ಕತ್ತಾದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಂಗೂಲಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿದು ಬಂದಿದೆ.

ತಿಳಿದು ಬಂದ ಮಾಹಿತಿ ಪ್ರಕಾರ, 'ಬಂಗಾಳ ಹುಲಿ', 'ದಾದಾ' ಖ್ಯಾತಿಯ ಸೌರವ್ ಗಂಗೂಲಿಗೆ ಹೃದಯಾಘಾತ ಆಗಿದೆ ಎನ್ನಲಾಗಿದೆ. ಹೀಗಾಗಿ ಗಂಗೂಲಿ ಶನಿವಾರ ಸಂಜೆಯೊಳಗಾಗಿ ಆ್ಯಂಜಿಯೋಪ್ಲ್ಯಾಸ್ಟಿ ಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ಹೇಳಲಾಗಿದೆ.

ಶನಿವಾರ ಮುಂಜಾನೆ ಜಿಮ್‌ನಲ್ಲಿ ಅಭ್ಯಾಸ ಮಾಡುತ್ತಿದ್ದಾಗ ಗಂಗೂಲಿಗೆ ಹೃದಯಬೇನೆ ಕಾಣಿಸಿಕೊಂಡಿತು. ಆ ಕೂಡಲೇ ಅವರನ್ನು ಕೋಲ್ಕತ್ತಾದ ವುಡ್‌ಲ್ಯಾಂಡ್‌ ಹಾಸ್ಪಿಟಲ್‌ಗೆ ದಾಖಲಿಸಲಾಗಿದೆ. ಶನಿವಾರ ಆ್ಯಂಜಿಯೋಪ್ಲ್ಯಾಸ್ಟಿ ನಡೆಸಿದ ಬಳಿಕ ಭಾರತ ಮಾಜಿ ನಾಯಕ ಡಿಸ್‌ಚಾರ್ಜ್‌ ಆಗಲಿದ್ದಾರೆ ಎಂದು ಮಾಹಿತಿ ಲಭಿಸಿದೆ.

ಭಾರತ ತಂಡದ ಪರ ಎಡಗೈ ಬ್ಯಾಟ್ಸ್‌ಮನ್‌ ಸೌರವ್ ಗಂಗೂಲಿ ಅವರು 113 ಟೆಸ್ಟ್ ಪಂದ್ಯಗಳಲ್ಲಿ 42.18ರ ಸರಾಸರಿಯಲ್ಲಿ 7212 ರನ್, 311 ಏಕದಿನ ಪಂದ್ಯಗಳಲ್ಲಿ 40.73ರ ಸರಾಸರಿಯಂತೆ 11363 ರನ್ ಗಳಿಸಿದ್ದಾರೆ. ಐಪಿಎಲ್‌ನಲ್ಲಿ 59 ಪಂದ್ಯಗಳಲ್ಲಿ 1349 ರನ್ ಬಾರಿಸಿದದ್ದಾರೆ. ಟೆಸ್ಟ್‌ನಲ್ಲಿ 16, ಏಕದಿನದಲ್ಲಿ 22 ಶತಕಗಳನ್ನು ಬಾರಿಸಿದ್ದಾರೆ.

Story first published: Saturday, January 2, 2021, 14:18 [IST]
Other articles published on Jan 2, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+