ಟೀಂ ಇಂಡಿಯಾ ಇಂಗ್ಲೆಂಡ್‌ನಲ್ಲಿ, ಗಂಗೂಲಿ ದುಬೈನಲ್ಲಿ; ಐಪಿಎಲ್‌ಗಾಗಿ ದಾದಾ ಮಾಸ್ಟರ್ ಪ್ಲಾನ್

ಪ್ರಸ್ತುತ ಐಪಿಎಲ್ ಟೂರ್ನಿ ಕೊರೊನಾವೈರಸ್ ಕಾರಣದಿಂದಾಗಿ ಮುಂದೂಡಲ್ಪಟ್ಟಿದೆ. ಏಪ್ರಿಲ್ 9ರಂದು ಆರಂಭವಾಗಿದ್ದ ಈ ಬಾರಿಯ ಐಪಿಎಲ್ ಟೂರ್ನಿಯ ಬಯೋ ಬಬಲ್ ಒಳಗಡೆ ಕೊರೊನಾ ಪ್ರವೇಶಿಸಿ ವಿವಿಧ ತಂಡಗಳ ಕೆಲ ಆಟಗಾರರಲ್ಲಿ ಸೋಂಕು ಕಾಣಿಸಿಕೊಂಡ ಕಾರಣ ಪ್ರಸ್ತುತ ಐಪಿಎಲ್ ಟೂರ್ನಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.

ಧೋನಿ ಯಶಸ್ವಿ ನಾಯಕತ್ವದ ಹಿಂದೆ ಇದೆ ಆ ಆಟಗಾರನ ನಿರಂತರ ಸಲಹೆ; ಸತ್ಯಾಂಶ ಬಿಚ್ಚಿಟ್ಟ ರುತುರಾಜ್ ಗಾಯಕ್ವಾಡ್

ಭಾರತದಲ್ಲಿ ಆರಂಭವಾಗಿದ್ದ ಈ ಬಾರಿಯ ಟೂರ್ನಿಯ 29 ಪಂದ್ಯಗಳು ಯಶಸ್ವಿಯಾಗಿ ಮುಗಿದಿದ್ದು ಉಳಿದ 31 ಪಂದ್ಯಗಳನ್ನು ಯುಎಇಯಲ್ಲಿ ನಡೆಸಲು ಬಿಸಿಸಿಐ ತೀರ್ಮಾನಿಸಿದೆ. ಇತ್ತೀಚೆಗಷ್ಟೇ ನಡೆದ ಬಿಸಿಸಿಐ ವಿಶೇಷ ಸಾಮಾನ್ಯ ಸಭೆಯಲ್ಲಿ ಈ ಬಾರಿಯ ಐಪಿಎಲ್ ಟೂರ್ನಿಯನ್ನು ಯುಎಇಯಲ್ಲಿ ಸೆಪ್ಟೆಂಬರ್‌ 19ರಿಂದ ಮುನ್ನಡೆಸುವ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ವಿರಾಟ್ ಕೊಹ್ಲಿ, ಧೋನಿ ಮತ್ತು ಬಾಬರ್ ಅಜಮ್ ಬಗ್ಗೆ ರಶೀದ್ ಖಾನ್ ಒಂದೇ ಪದದಲ್ಲಿ ವಿವರಿಸಿದ್ದು ಹೀಗೆ

ಇದಕ್ಕೂ ಮುನ್ನ ಟೀಮ್ ಇಂಡಿಯಾ ತಂಡ ಜೂನ್ 18-22ರವರೆಗೆ ನ್ಯೂಜಿಲೆಂಡ್ ತಂಡದ ವಿರುದ್ಧ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯವನ್ನು ಆಡಲಿದೆ ಹಾಗೂ ಆಗಸ್ಟ್ 4ರಿಂದ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲಿದೆ. ಈ ಪಂದ್ಯಗಳನ್ನಾಡಲು ಭಾರತ ತಂಡ ಇಂಗ್ಲೆಂಡ್ ಪ್ರವಾಸವನ್ನು ಕೈಗೊಂಡಿದ್ದು, ಇಂಗ್ಲೆಂಡ್ ವಿರುದ್ಧದ ಸರಣಿ ಮುಗಿದ ಮೇಲೆ ಯುಎಇಯಲ್ಲಿ ಐಪಿಎಲ್ ನಡೆಸುವುದು ಸೌರವ್ ಗಂಗೂಲಿ ಯೋಜನೆಯಾಗಿದೆ. ಹೀಗಾಗಿ ಸೌರವ್ ಗಂಗೂಲಿ ಯುಎಇ ತಲುಪಿದ್ದು ಐಪಿಎಲ್ ಮುಂದುವರೆಸಲು ಪಣ ತೊಟ್ಟಿದ್ದಾರೆ.

ಎಮಿರೇಟ್ಸ್ ಕ್ರಿಕೆಟ್ ಬೋರ್ಡ್ ಜೊತೆ ಸಭೆ

ಎಮಿರೇಟ್ಸ್ ಕ್ರಿಕೆಟ್ ಬೋರ್ಡ್ ಜೊತೆ ಸಭೆ

ದುಬೈ ತಲುಪಿರುವ ಸೌರವ್ ಗಂಗೂಲಿ ಅಲ್ಲಿನ ಎಮಿರೇಟ್ಸ್ ಕ್ರಿಕೆಟ್ ಬೋರ್ಡ್ ಜೊತೆ ಸಭೆ ನಡೆಸಲಿದ್ದು, ಐಪಿಎಲ್ ಮುಂದುವರಿಕೆಯ ಕುರಿತು ಯಾವ ರೀತಿಯ ಯೋಜನೆಗಳನ್ನು ಹಾಕಿಕೊಳ್ಳಬೇಕು ಎಂಬ ವಿಷಯಗಳನ್ನು ಚರ್ಚಿಸಿ ತೀರ್ಮಾನಿಸಲಿದ್ದಾರೆ ಎನ್ನಲಾಗುತ್ತಿದೆ.

ಐಪಿಎಲ್ ಮಾತ್ರವಲ್ಲ ಟಿ ಟ್ವೆಂಟಿ ವಿಶ್ವಕಪ್ ಬಗ್ಗೆಯೂ ಚರ್ಚೆ

ಐಪಿಎಲ್ ಮಾತ್ರವಲ್ಲ ಟಿ ಟ್ವೆಂಟಿ ವಿಶ್ವಕಪ್ ಬಗ್ಗೆಯೂ ಚರ್ಚೆ

ಭಾರತದಲ್ಲಿ ಕೊರೊನಾವೈರಸ್ ಸದ್ಯಕ್ಕೆ ತಗ್ಗುವ ರೀತಿ ಕಾಣುತ್ತಿಲ್ಲ, ಹೀಗಾಗಿ ಅಕ್ಟೋಬರ್ ಹಾಗೂ ನವೆಂಬರ್ ತಿಂಗಳಿನಲ್ಲಿ ನಡೆಸಬೇಕಾಗಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯನ್ನು ಸಹ ಯುಎಇಯಲ್ಲಿ ನಡೆಸುವ ಸಾಧ್ಯತೆಗಳಿವೆ. ಆದ್ದರಿಂದ ಎಮಿರೇಟ್ಸ್ ಕ್ರಿಕೆಟ್ ಬೋರ್ಡ್ ಸಭೆಯಲ್ಲಿ ಟಿ ಟ್ವೆಂಟಿ ವಿಶ್ವಕಪ್ ಆಯೋಜನೆಯ ಕುರಿತು ಕೂಡ ಸೌರವ್ ಗಂಗೂಲಿ ಚರ್ಚಿಸಲಿದ್ದಾರೆ ಎನ್ನಲಾಗುತ್ತಿದೆ.

ಒಂದು ತಿಂಗಳ ಗಡುವು ನೀಡಿರುವ ಐಸಿಸಿ

ಒಂದು ತಿಂಗಳ ಗಡುವು ನೀಡಿರುವ ಐಸಿಸಿ

ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಭಾರತದಲ್ಲಿ ನಡೆಯಬೇಕಾಗಿತ್ತು, ಕೊರೊನಾ ಕಾರಣದಿಂದ ಇನ್ನೂ ಸಹ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಆರಂಭದ ದಿನಾಂಕವನ್ನು ಬಿಸಿಸಿಐ ತೀರ್ಮಾನಿಸಿಲ್ಲ. ಹೀಗಾಗಿ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯನ್ನು ಆರಂಭಿಸುವ ದಿನಾಂಕವನ್ನು ಪ್ರಕಟಿಸಲು ಬಿಸಿಸಿಐಗೆ ಐಸಿಸಿ ಒಂದು ತಿಂಗಳ ಗಡುವನ್ನು ನೀಡಿದೆ.

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Friday, June 4, 2021, 19:09 [IST]
Other articles published on Jun 4, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X