ಕೋಲ್ಕತ್ತಾ, ಮೇ.24: ಟೀಂ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಅವರು ಶೀಘ್ರದಲ್ಲೇ ಬಿಸಿಸಿಐ ಸಲಹೆಗಾರರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಬಿಸಿಸಿಐ ಅಧ್ಯಕ್ಷ ಜಗಮೋಹನ್ ದಾಲ್ಮಿಯಾ ಅವರು ಸಂದರ್ಶನವೊಂದರಲ್ಲಿ ಹೇಳಿದ್ದಾರೆ.
ಸೌರವ್ ಗಂಗೂಲಿ ಜೊತೆಗೆ ರವಿ ಶಾಸ್ತ್ರಿ ಹಾಗೂ ಸಚಿನ್ ತೆಂಡೂಲ್ಕರ್ ಅವರು ಕೂಡಾ ಬಿಸಿಸಿಐ ಹಾಗೂ ಟೀಂ ಇಂಡಿಯಾದ ಸಲಹೆಗಾರರಾಗಿ ಕಾರ್ಯನಿರ್ವಹಿಸಲಿದ್ದಾರೆ.
ಕ್ರಿಕೆಟ್ ಗೆ ಸಂಬಂಧಿಸಿದ ಎಲ್ಲಾ ವಿಷಯಗಳಲ್ಲೂ ಈ ಮೂವರ ಸಲಹೆಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಪಡೆಯಲಿದೆ ಎಂದು ಅಧ್ಯಕ್ಶ ದಾಲ್ಮಿಯಾ ಅವರು ಇಂಡಿಯಾ ಟುಡೇಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಈ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ಅನುರಾಗ್ ಠಾಕೂರ್ ಜೊತೆ ಚರ್ಚೆ ನಡೆಸಲಾಗುತ್ತದೆ. ನಂತರ ಅಂತಿಮ ಪ್ರಕಟಣೆ ಹೊರಡಿಸಲಾಗುತ್ತದೆ ಎಂದರು. ಟೀಂ ಇಂಡಿಯಾದ ಹೊಸ ಕೋಚ್ ಆಯ್ಕೆ ಜವಾಬ್ದಾರಿ ಕೂಡಾ ಈ ಮೂವರು ದಿಗ್ಗಜರ ಮೇಲೆ ಹೊರೆಸಲಾಗಿದೆ.