ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ ವಿರುದ್ಧದ ಟೆಸ್ಟ್ ಸರಣಿಗೆ 21 ಆಟಗಾರರ ತಂಡ ಪ್ರಕಟಿಸಿದ ದಕ್ಷಿಣ ಆಫ್ರಿಕಾ; ಯಾರಿಗೆಲ್ಲಾ ಸ್ಥಾನ?

South Africa announced their 21 men squad for the test series against India

ಇತ್ತೀಚೆಗಷ್ಟೇ ಭಾರತ ಪ್ರವಾಸವನ್ನು ಕೈಗೊಂಡಿದ್ದ ಕಿವೀಸ್ ಕಿವಿ ಹಿಂಡಿದ್ದ ಟೀಮ್ ಇಂಡಿಯಾ ಇದೀಗ ಹರಿಣಗಳ ಬೇಟೆಯನ್ನಾಡಲು ಡಿಸೆಂಬರ್ 17ರಂದು ದಕ್ಷಿಣ ಆಫ್ರಿಕಾಕ್ಕೆ ಹಾರಲಿದೆ.

ಭಾರತ vs ಕಿವೀಸ್ ಟೆಸ್ಟ್ ನಂತರ WTC 21-23 ಅಂಕಪಟ್ಟಿ ಹೀಗಿದೆ; ಅಂಕ ಹೆಚ್ಚಿದ್ದರೂ ಭಾರತಕ್ಕಿಲ್ಲ ಅಗ್ರಸ್ಥಾನ!ಭಾರತ vs ಕಿವೀಸ್ ಟೆಸ್ಟ್ ನಂತರ WTC 21-23 ಅಂಕಪಟ್ಟಿ ಹೀಗಿದೆ; ಅಂಕ ಹೆಚ್ಚಿದ್ದರೂ ಭಾರತಕ್ಕಿಲ್ಲ ಅಗ್ರಸ್ಥಾನ!

ಹೌದು, ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಗಿದ ಬಳಿಕ ಭಾರತ ಪ್ರವಾಸವನ್ನು ಕೈಗೊಂಡು ಟೀಮ್ ಇಂಡಿಯಾ ವಿರುದ್ಧ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಮತ್ತು 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಹೀನಾಯವಾಗಿ ಸೋಲುವುದರ ಮೂಲಕ ನ್ಯೂಜಿಲೆಂಡ್ ಮುಖಭಂಗಕ್ಕೆ ಒಳಗಾಗಿತ್ತು. ಇತ್ತ ನ್ಯೂಜಿಲೆಂಡ್ ತಂಡವನ್ನು ಟಿ ಟ್ವೆಂಟಿ ಮತ್ತು ಟೆಸ್ಟ್ ಎರಡೂ ಸರಣಿಗಳಲ್ಲಿಯೂ ಸೋಲಿಸಿದ ಟೀಮ್ ಇಂಡಿಯಾ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಮತ್ತು ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಟೂರ್ನಿಗಳ ಪ್ರತೀಕಾರವನ್ನು ತೀರಿಸಿಕೊಂಡಿತು.

ಪುನೀತ್‌ ನೆನೆದು ವಿಶೇಷವಾಗಿ ಗೌರವ ಸಲ್ಲಿಸಿದ ಡೇವಿಡ್ ವಾರ್ನರ್; ವಿಡಿಯೋ ವೈರಲ್ಪುನೀತ್‌ ನೆನೆದು ವಿಶೇಷವಾಗಿ ಗೌರವ ಸಲ್ಲಿಸಿದ ಡೇವಿಡ್ ವಾರ್ನರ್; ವಿಡಿಯೋ ವೈರಲ್

ಇನ್ನು ನ್ಯೂಜಿಲೆಂಡ್ ವಿರುದ್ಧ ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ 372 ರನ್‌ಗಳ ಬೃಹತ್ ಅಂತರದಿಂದ ಜಯ ಸಾಧಿಸಿದ ವಿರಾಟ್ ಕೊಹ್ಲಿ ಪಡೆ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿದೆ. ಹೀಗೆ ನ್ಯೂಜಿಲೆಂಡ್ ತಂಡದ ವಿರುದ್ಧ ದೊಡ್ಡ ಗೆಲುವನ್ನು ಸಾಧಿಸಿ ಒಳ್ಳೆಯ ಹಂತದಲ್ಲಿರುವ ಟೀಮ್ ಇಂಡಿಯಾ ಡಿಸೆಂಬರ್ 26ರಿಂದ ಆರಂಭವಾಗಲಿರುವ 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಸೆಣಸಾಟ ನಡೆಸಲಿದೆ.

'ನಾಯಕತ್ವವನ್ನು ಕಡೆಗಣಿಸಬಾರದು'; ಪಂದ್ಯ ಮುಗಿಯುವ ಮುನ್ನವೇ ಆಕಾಶ್ ಚೋಪ್ರಾ ಹೇಳಿದ್ದು ಯಾರಿಗೆ?'ನಾಯಕತ್ವವನ್ನು ಕಡೆಗಣಿಸಬಾರದು'; ಪಂದ್ಯ ಮುಗಿಯುವ ಮುನ್ನವೇ ಆಕಾಶ್ ಚೋಪ್ರಾ ಹೇಳಿದ್ದು ಯಾರಿಗೆ?

ಎಲ್ಲಾ ಸರಿ ಇದ್ದಿದ್ದರೆ ಭಾರತ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಂಡು ಟಿ ಟ್ವೆಂಟಿ, ಏಕದಿನ ಮತ್ತು ಟೆಸ್ಟ್ ಸರಣಿಗಳನ್ನು ಆಡಬೇಕಿತ್ತು. ಆದರೆ ದಕ್ಷಿಣ ಆಫ್ರಿಕಾದಲ್ಲಿ ಸದ್ಯ ಒಮಿಕ್ರಾನ್ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಮುಂಜಾಗ್ರತಾ ಕ್ರಮದಿಂದ ಟಿ ಟ್ವೆಂಟಿ ಸರಣಿಯನ್ನು ರದ್ದು ಮಾಡಲಾಗಿದೆ. ಒಮಿಕ್ರಾನ್ ಭೀತಿಯಿಂದ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವೆ ನಡೆಯಬೇಕಿದ್ದ ಪಂದ್ಯಗಳಲ್ಲಿ ಬದಲಾವಣೆಗಳಾಗಿದ್ದು ಇತ್ತಂಡಗಳ ನಡುವೆ 3 ಪಂದ್ಯಗಳ ಟೆಸ್ಟ್ ಸರಣಿ ಮತ್ತು 3 ಪಂದ್ಯಗಳ ಏಕದಿನ ಸರಣಿ ಮಾತ್ರ ನಡೆಯಲಿದೆ. ಮೊದಲಿಗೆ ಇತ್ತಂಡಗಳ ನಡುವೆ ನಡೆಯಲಿರುವ ಟೆಸ್ಟ್ ಸರಣಿಯ ಪರಿಷ್ಕೃತ ವೇಳಾಪಟ್ಟಿ ಪ್ರಕಟವಾದ ಬೆನ್ನಲ್ಲೇ ಇದೀಗ ದಕ್ಷಿಣ ಆಫ್ರಿಕಾ ಕ್ರಿಕೆಟ್ ಬೋರ್ಡ್ 21 ಆಟಗಾರರ ತಂಡವನ್ನು ಪ್ರಕಟಿಸಿದೆ. ಹೀಗೆ ದಕ್ಷಿಣ ಆಫ್ರಿಕಾ ಭಾರತ ವಿರುದ್ಧದ ಟೆಸ್ಟ್ ಸರಣಿಗೆ ಪ್ರಕಟಿಸಿರುವ ತಂಡದಲ್ಲಿ ಯಾವ ಯಾವ ಆಟಗಾರರು ಸ್ಥಾನ ಪಡೆದುಕೊಂಡಿದ್ದಾರೆ ಎಂಬುದರ ಕುರಿತ ಮಾಹಿತಿ ಈ ಕೆಳಕಂಡಂತಿದೆ.

ಭಾರತ ವಿರುದ್ಧದ ಟೆಸ್ಟ್ ಸರಣಿಗೆ ಪ್ರಕಟವಾಗಿರುವ ದಕ್ಷಿಣ ಆಫ್ರಿಕಾ ತಂಡ ಈ ಕೆಳಕಂಡಂತಿದೆ

ಭಾರತ ವಿರುದ್ಧದ ಟೆಸ್ಟ್ ಸರಣಿಗೆ ಪ್ರಕಟವಾಗಿರುವ ದಕ್ಷಿಣ ಆಫ್ರಿಕಾ ತಂಡ ಈ ಕೆಳಕಂಡಂತಿದೆ

ಡೀನ್ ಎಲ್ಗರ್ (ನಾಯಕ), ಟೆಂಬಾ ಬವುಮಾ (ಉಪನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಕಗಿಸೊ ರಬಾಡ, ಸರೆಲ್ ಎರ್ವೀ, ಬ್ಯೂರಾನ್ ಹೆಂಡ್ರಿಕ್ಸ್, ಜಾರ್ಜ್ ಲಿಂಡೆ, ಕೇಶವ್ ಮಹಾರಾಜ್, ಲುಂಗಿ ಎನ್‌ಗಿಡಿ, ಐಡೆನ್ ಮಾರ್ಕ್ರಾಮ್, ವಿಯಾನ್ ಮುಲ್ಡರ್, ಆನ್ರಿಚ್ ನಾರ್ಟ್ಜೆ, ಕೀಗನ್ ಪೀಟರ್ಸ್ , ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ಕೈಲ್ ವೆರ್ರೆಯ್ನ್ನೆ, ಮಾರ್ಕೊ ಜಾನ್ಸೆನ್, ಗ್ಲೆಂಟನ್ ಸ್ಟೌರ್ಮನ್, ಪ್ರೆನೆಲನ್ ಸಬ್ರಾಯೆನ್, ಸಿಸಂಡಾ ಮಗಾಲಾ, ರಿಯಾನ್ ರಿಕೆಲ್ಟನ್, ಡುವಾನ್ನೆ ಒಲಿವಿಯರ್.

ಮತ್ತೆ ಟೆಸ್ಟ್ ತಂಡ ಸೇರಿದ ರಬಾಡ, ಕ್ವಿಂಟನ್ ಡಿ ಕಾಕ್ ಮತ್ತು ನಾರ್ಕಿಯಾ

ಮತ್ತೆ ಟೆಸ್ಟ್ ತಂಡ ಸೇರಿದ ರಬಾಡ, ಕ್ವಿಂಟನ್ ಡಿ ಕಾಕ್ ಮತ್ತು ನಾರ್ಕಿಯಾ

ಸದ್ಯ ದಕ್ಷಿಣ ಆಫ್ರಿಕಾದಲ್ಲಿ ಒಮಿಕ್ರಾನ್ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣದಿಂದಾಗಿ ಹೆಚ್ಚು ಆಟಗಾರರನ್ನೊಳಗೊಂಡ ತಂಡವನ್ನು ದಕ್ಷಿಣ ಆಫ್ರಿಕಾ ಕ್ರಿಕೆಟ್ ಬೋರ್ಡ್ ಪ್ರಕಟಿಸಿದೆ. ಹೀಗಾಗಿ ಟೆಸ್ಟ್ ತಂಡದಿಂದ ಹೊರಗುಳಿದಿದ್ದ ಕಗಿಸೋ ರಬಾಡ, ಕ್ವಿಂಟನ್ ಡಿ ಕಾಕ್ ಮತ್ತು ಅನ್ರಿಚ್ ನಾರ್ಕಿಯಾ ಮರಳಿ ತಂಡ ಸೇರಿದ್ದಾರೆ.

ಭಾರತ vs ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಯ ವೇಳಾಪಟ್ಟಿ

ಭಾರತ vs ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಯ ವೇಳಾಪಟ್ಟಿ

ಮೊದಲ ಟೆಸ್ಟ್‌: ಡಿಸೆಂಬರ್ 26-30, ಸೂಪರ್‌ಸ್ಪೋರ್ಟ್ಸ್ ಪಾರ್ಕ್‌, ಸೆಂಚುರಿಯನ್

ಎರಡನೇ ಟೆಸ್ಟ್: ಜನವರಿ 3-7, ವಾಂಡರರ್ಸ್ ಕ್ರೀಡಾಂಗಣ, ಜೋಹಾನ್ಸ್‌ಬರ್ಗ್

ಮೂರನೇ ಟೆಸ್ಟ್: ಜನವರಿ 11-15, ನ್ಯೂಲ್ಯಾಂಡ್ಸ್, ಕೇಪ್‌ ಟೌನ್

Story first published: Wednesday, December 8, 2021, 9:03 [IST]
Other articles published on Dec 8, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X