ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ದಕ್ಷಿಣ ಆಫ್ರಿಕಾ ತಂಡ ಪ್ರಕಟ

ದಕ್ಷಿಣ ಆಫ್ರಿಕಾ ತಂಡ ತವರಿನಲ್ಲಿ ಈ ತಿಂಗಳಾಂತ್ಯದಲ್ಲಿ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದ್ದು ಈ ಸರಣಿಗಾಗಿ 16 ಆಟಗಾರರ ಬಲಿಷ್ಠ ಸ್ಕ್ವಾಡ್ ಪ್ರಕಟಿಸಿದೆ. ಈ ತಂಡದಲ್ಲಿ ಆಲ್‌ರೌಂಡರ್ ಸಿಸಂಡ ಸಮಗಲ ಹಾಗೂ ಮಾರ್ಕೋ ಜಾನ್ಸನ್ ಮರಳಿ ಸ್ಥಾನವನ್ನು ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಕಳಪೆ ಫಾರ್ಮ್‌ನಲ್ಲಿದ್ದರೂ ಟೆಂಬಾ ಬವುಮಾ ನಾಯಕತ್ವದಲ್ಲಿ ಮುಂದುವರಿದಿದ್ದಾರೆ.
ಇನ್ನು ದಕ್ಷಿಣ ಆಫ್ರಿಕಾ ವಥಟ್‌ಬಾಲ್ ತಂಡಕ್ಕೆ ಹೊಸ ಕೋಚ್ ನೇಮಕಗೊಂಡಿದ್ದಾರೆ. ಕೋಚ್ ರಾಬ್ ವಾಲ್ಟರ್ ಫೆಬ್ರವರಿ 1 ರಿಂದ ದಕ್ಷಿಣ ಆಫ್ರಿಕಾ ಜೊತೆಗೆ ಹೊಸ ಜವಾಬ್ಧಾರಿ ವಹಿಸಿಕೊಳ್ಳಲಿದ್ದಾರೆ. ಇನ್ನು ಟೆಸ್ಟ್ ತಂಡಕ್ಕೆ ಹೊಸ ಕೋಚ್ ಆಗಿ ಶುಕ್ರಿ ಕಾನ್ರಾಡ್ ನೇಮಕಗೊಂಡಿದ್ದಾರೆ.
ದಕ್ಷಿಣ ಆಫ್ರಿಕಾ ತಂಡ ಕಳೆದ ಕೆಲ ತಿಂಗಳುಗಳಿಂದ ಅತ್ಯಂತ ಕಳಪೆ ಪ್ರದರ್ಶನ ನೀಡಿದೆ. ಟಿ20 ವಿಶ್ವಕಪ್‌ನಲ್ಲಿ ಉತ್ತಮ ಪ್ರದರ್ಶನ ನೀಡಲು ವಿಫಲವಾಗಿದ್ದ ದ. ಆಫ್ರಿಕಾ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯಲ್ಲಿಯೂ ಅತ್ಯಂತ ಕಳಪೆ ಪ್ರದರ್ಶನ ನೀಡಿತ್ತು. ಇದೀಗ ತವರಿನಲ್ಲಿ ವೈಟ್‌ಬಾಲ್ ಸರಣಿಯಲ್ಲಿ ಮಿಂಚಲು ಸಜ್ಜಾಗಿದೆ.
ಸರಣಿಯು ಜನವರಿ 27ರಂದು ಬ್ಲೋಮ್‌ಫಾಂಟೈನ್‌ನಲ್ಲಿ ಪ್ರಾರಂಭವಾಗಲಿದ್ದು ಐದು ದಿನಗಳ ನಂತರ ಕಿಂಬರ್ಲಿಯಲ್ಲಿ ಅಂತ್ಯವಾಗಲಿದೆ. ಕಳೆದ ಜುಲೈನಲ್ಲಿ ಇಂಗ್ಲೆಂಡ್‌ನಲ್ಲಿ ನಡೆದ ಮೂರು ಪಂದ್ಯಗಳ ಸರಣಿಯಲ್ಲಿ ಈ ಎರಡು ತಂಡಗಳು ಕೊನೆಯ ಬಾರಿಗೆ ಮುಖಾಮುಖಿಯಾಗಿದ್ದವು. ಲೀಡ್ಸ್‌ನಲ್ಲಿನ ಅಂತಿಮ ಪಂದ್ಯ ಮಳೆಯಿಂದ ರದ್ದಾಗ ಕಾರಣ ಸರಣಿ 1-1 ರಿಂದ ಸಮಬಲದೊಂದಿಗೆ ಅಂತ್ಯವಾಗಿತ್ತು.
ದಕ್ಷಿಣ ಆಫ್ರಿಕಾ ತಂಡ: ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್, ಹೆನ್ರಿಚ್ ಕ್ಲಾಸೆನ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಕೇಶವ್ ಮಹಾರಾಜ್, ರೀಜಾ ಹೆಂಡ್ರಿಕ್ಸ್, ಮಾರ್ಕೊ ಜಾನ್ಸೆನ್, ಸಿಸಂದಾ ಮಾಗಲಾ, ಜನೆಮನ್ ಮಲನ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ನೊಗಿಡ್, ವಾರಿಚ್ ನೊಗಿಡಿ ಪಾರ್ನೆಲ್, ಕಗಿಸೊ ರಬಾಡ, ತಬ್ರೈಜ್ ಶಮ್ಸಿ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications