Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Champions Trophy 2025: ದಕ್ಷಿಣ ಆಫ್ರಿಕಾ ತಂಡಕ್ಕೆ ಬವುಮಾ ನಾಯಕ: ಸ್ಟಾರ್‌ ವೇಗಗಳ ಕಂ ಬ್ಯಾಕ್‌

ಐಸಿಸಿ ಚಾಂಪಿಯನ್ಸ್‌ ಟ್ರೋಫಿಗೆ ದಿನಗಣನೆ ಆರಂಭವಾಗಿದೆ. ಈ ನಿಟ್ಟಿನಲ್ಲಿ ಹಲವು ದೇಶಗಳು ತಮ್ಮ ತಮ್ಮ ತಂಡವನ್ನು ಪ್ರಕಟಿಸುತ್ತಿವೆ. ಇನ್ನೇನು ಕೆಲವೇ ದಿನಗಳಲ್ಲಿ ಭಾರತ ತಂಡವನ್ನು ಸಹ ಈ ಮೆಗಾ ಟೂರ್ನಿಗೆ ಪ್ರಕಟಿಸಲಾಗುತ್ತದೆ. ಈ ಟೂರ್ನಿಯಲ್ಲಿ ಒಟ್ಟು 8 ತಂಡಗಳು ಭಾಗವಹಿಸಲಿದ್ದು, ಈಗಾಗಲೇ ಆರು ತಂಡಗಳನ್ನು ಪ್ರಕಟಿಸಲಾಗಿದೆ. ದಕ್ಷಿಣ ಆಫ್ರಿಕಾ ಚಾಂಪಿಯನ್ಸ್ ಟ್ರೋಫಿಗೆ ತಂಡವನ್ನು ಪ್ರಕಟಿಸಿದ್ದು, ಅನುಭವಿ ಆಟಗಾರ ತೆಂಬು ಬವುಮಾ ತಂಡವನ್ನು ಮುನ್ನಡೆಸಲಿದ್ದಾರೆ. ವೇಗಿ ಜೆರಾಲ್ಡ್ ಕೊಯೆಟ್ಜಿ ಗಾಯದ ಕಾರಣ ತಂಡದಲ್ಲಿ ಸ್ಥಾನ ಪಡೆದಿಲ್ಲ.

ಚಾಂಪಿಯನ್ಸ್ ಟ್ರೋಫಿಗೆ ದಕ್ಷಿಣ ಆಫ್ರಿಕಾದ ಹೆಡ್ ಕೋಚ್‌ ರಾಬ್ ವಾಲ್ಟರ್ ತಂಡವನ್ನು ಪ್ರಕಟಿಸಿದ್ದಾರೆ. ಫೆಬ್ರವರಿಯಲ್ಲಿ ನಡೆಯಲಿರುವ ಟೂರ್ನಿಗೆ ದಕ್ಷಿಣ ಆಫ್ರಿಕಾ 15 ಸದಸ್ಯರ ತಂಡ ಘೋಷಿಸಿದೆ. ಭಾರತದಲ್ಲಿ ನಡೆದ ಏಕದಿನ ವಿಶ್ವಕಪ್‌ನಲ್ಲಿ ಆಡಿದ ಹತ್ತು ಆಟಗಾರರು ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಸಫಲರಾಗಿದ್ದಾರೆ.

South Africa Announces Squad for ICC Champions Trophy 2025 Temba Bavuma to Lead

ತಂಡಕ್ಕೆ ಮರಳಿರುವ ವೇಗಿಗಳು

ಪ್ರಕಟಿತ ದಕ್ಷಿಣ ಆಫ್ರಿಕಾ ತಂಡದಲ್ಲಿ ವೇಗದ ಬೌಲರ್‌ಗಳು ತಂಡಕ್ಕೆ ಮರಳಿದ್ದಾರೆ. ವೇಗಿ ಎನ್ರಿಕ್‌ ನೋಕಿಯಾ, ಲುಂಗಿ ಎನ್‌ಗಿಡಿ ಇವರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಕಳೆದ ಕೆಲವು ದಿನಗಳಿಂದ ಇವರು ಗಾಯಕ್ಕೆ ತುತ್ತಾಗಿದ್ದರಿಂದ ತಂಡದಿಂದ ದೂರ ಉಳಿದಿದ್ದರು. ನೋಕಿಯಾ ಬೆರಳಿನ ಗಾಯದ ಸಮಸ್ಯೆಯನ್ನು ಎದುರಿಸಿದರೆ, ಲುಂಗಿ ಎನ್‌ಗಿಡಿ ತೊಡೆಸಂದು ಗಾಯದಿಂದ ಬಳಲುತ್ತಿದ್ದರು.

ದಕ್ಷಿಣ ಆಫ್ರಿಕಾ ಪಂದ್ಯಗಳು ಯಾವಾಗ?

ವಿಯಾನ್ ಮುಲ್ಡರ್, ಟೋನಿ ಡಿ ಜಾರ್ಜಿ ಮತ್ತು ರಿಯಾನ್ ರಿಕಲ್ಟನ್ ಇದೇ ಮೊದಲ ಬಾರಿಗೆ ಐಸಿಸಿ ಟೂರ್ನಿಯಲ್ಲಿ ಪದಾರ್ಪಣೆ ಮಾಡಲಿದ್ದಾರೆ. ದಕ್ಷಿಣ ಆಫ್ರಿಕಾ ತಂಡ ಚಾಂಪಿಯನ್ಸ್‌ ಟ್ರೋಫಿಯಲ್ಲಿ ತನ್ನ ಅಭಿಯಾನವನ್ನು ಫೆಬ್ರವರಿ 21 ರಿಂದ ಆರಂಭಿಸಲಿದೆ. ಮೊದಲ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡವನ್ನು ಎದುರಿಸಲಿರುವ ಆಫ್ರಿಕಾ, ಎರಡನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಕಾದಾಟ ನಡೆಸಲಿದೆ. ಈ ಪಂದ್ಯ ಫೆಬ್ರವರಿ 25 ರಂದು ರಾವಲ್ಪಿಂಡಿಯಲ್ಲಿ ನಡೆಯಲಿದೆ. ಮಾರ್ಚ್ 1 ರಂದು ಇಂಗ್ಲೆಂಡ್ ವಿರುದ್ಧ ಹೋರಾಡಲಿದೆ.

2017 ರ ಬಳಿಕ ಇದೇ ಮೊದಲ ಬಾರಿಗೆ ಚಾಂಪಿಯನ್ಸ್‌ ಟ್ರೋಫಿ ಪಂದ್ಯವನ್ನು ಆಡಲಾಗತ್ತಿದ್ದು. ಪಾಕಿಸ್ತಾನ ಹಾಲಿ ಚಾಂಪಿಯನ್‌ ಆಗಿದೆ. ಇನ್ನು 1998 ರಲ್ಲಿ ದಕ್ಷಿಣ ಆಫ್ರಿಕಾ ಮೊದಲ ಬಾರಿಗೆ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿಯನ್ನು ಗೆದ್ದಿತ್ತು. ಇತ್ತೀಚಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸ್ಥಿರ ಪ್ರದರ್ಶನ ನೀಡಿದ ಯುವ ಆಟಗಾರರಿಗೂ ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ಸ್ಥಾನ ನೀಡಲಾಗಿದೆ.

ದಕ್ಷಿಣ ಆಫ್ರಿಕಾ ತಂಡ: ಟೆಂಬಾ ಬವುಮಾ (ನಾಯಕ), ಟೋನಿ ಡಿ ಜಾರ್ಗಿ, ಮಾರ್ಕೊ ಜಾನ್ಸನ್, ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ವಿಯಾನ್ ಮುಲ್ಡರ್, ಲುಂಗಿ ಎನ್ಗಿಡಿ, ಅನ್ರಿಚ್ ನಾರ್ಟ್ಜೆ, ರಿಯಾನ್ಸಿ ರಬಾಡ, ರಿಯಾನ್ಸಿ ರಬಾಡ , ಟ್ರಿಸ್ಟಾನ್ ಸ್ಟಬ್ಸ್, ರಾಸ್ಸೀ ವ್ಯಾನ್ ಡೆರ್ ಡಸ್ಸೆನ್.

Story first published: Monday, January 13, 2025, 14:10 [IST]
Other articles published on Jan 13, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+