IND vs SA: ಭಾರತ ಎದುರು ದಕ್ಷಿಣ ಆಫ್ರಿಕಾಕ್ಕೆ ರೋಚಕ ಜಯ
ದಕ್ಷಿಣ ಆಫ್ರಿಕಾ ಮತ್ತು ಭಾರತ ನಡುವೆ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ ನಡೆಯುತ್ತಿದೆ. ಗ್ಕೆಬರ್ಹಾದ ಸೇಂಟ್ ಜಾರ್ಜ್ ಪಾರ್ಕ್‌ನಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಭಾರತವನ್ನು ಸೋಲಿಸಿದೆ. ಮೊದಲ ಟಿ20 ಪಂದ್ಯದ ಗೆಲುವಿನ ಉತ್ಸಾಹದಲ್ಲಿದ್ದ ಭಾರತಕ್ಕೆ ಸೋಲಿನ ಕಹಿ ಅನುಭವಾಗಿದೆ. ಡರ್ಬನ್‌ನ ಕಿಂಗ್ಸ್‌ಮೀಡ್‌ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಭಾರತ ಸೋಲಿಸಿತ್ತು. ಇದೀಗ ಭಾರತ ವಿರುದ್ಧ ದಕ್ಷಿಣ ಆಫ್ರಿಕಾ 3 ವಿಕೆಟ್‌ಗಳ ಅಂತರದಿಂದ ಗೆದ್ದು ನಾಲ್ಕು ಪಂದ್ಯಗಳ ಟಿ20 ಸರಣಿಯಲ್ಲಿ 1-1 ರಲ್ಲಿ ಸಮಬಲ ಸಾಧಿಸಿದೆ.
ಎರಡನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 124 ರನ್‌ಗಳಿಸಲಷ್ಟೇ ಶಕ್ತವಾಯಿತು. ಭಾರತ ನೀಡಿದ 125 ರನ್‌ಗಳ ಸಾಧಾರಣ ಗುರಿಯನ್ನು ಬೆನ್ನತ್ತಿದ ದಕ್ಷಿಣ ಆಫ್ರಿಕಾ ತಂಡ ಟೀಮ್ ಇಂಡಿಯಾ ಸ್ಪಿನ್ ದಾಳಿಗೆ ತತ್ತರಿಸಿ ಸೋಲುವ ಹಂತಕ್ಕೆ ತಲುಪಿತ್ತು. ಆದರೆ ಕೊನೆಯಲ್ಲಿ ಟ್ರಿಸ್ಟಾನ್ ಸ್ಟಬ್ಸ್ ಮತ್ತು ಜೆರಾಲ್ಡ್ ಕೋಟ್ಜಿ ಅಬ್ಬರಿಸುವ ಮೂಲಕ ಗೆಲುವು ದಕ್ಷಿಣ ಆಫ್ರಿಕಾಗೆ ಗೆಲುವು ತಂದುಕೊಟ್ಟರು.

ಟಾಸ್ ಗೆದ್ಧ ದಕ್ಷಿಣ ಆಫ್ರಿಕಾದ ನಾಯಕ ಏಡೆನ್ ಮಾರ್ಕ್ರಾಮ್ ಮೊದಲು ಭಾರತ ತಂಡವನ್ನು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಆದರೆ ಭಾರತದ ಪರ ಅಭಿಷೇಕ್ ಶರ್ಮಾ ಮತ್ತು ಸಂಜು ಸ್ಯಾಮ್ಸನ್ ಅವರು ಅಂದುಕೊಂಡತೆ ಇನ್ನಿಂಗ್ಸ್ ತೆರೆಯಲು ಸಾಧ್ಯವಾಗಲಿಲ್ಲ. ಕಳೆದ ಪಂದ್ಯದಲ್ಲಿ ಶತಕ ಬಾರಿಸಿದ ಸಂಜು ಎರಡನೇ ಟಿ20 ಪಂದ್ಯದಲ್ಲಿ ಖಾತೆ ತೆರೆಯದೆ ಔಟಾದರು. ನಂತರ ಅಭಿಷೇಕ್ ಶರ್ಮಾ ಮತ್ತು ನಾಯಕ ಸೂರ್ಯಕುಮಾರ್ ಯಾದವ್ ತಲಾ 4 ರನ್ ಗಳಿಸಿ ವಿಕೆಟ್ ಕಳೆದುಕೊಂಡರು. ನಂತರ ಕ್ರೀಸ್‌ಗೆ ಬಂದ ಟೀಮ್ ಇಂಡಿಯಾ ಬ್ಯಾಟರ್‌ಗಳ ಜವಾಬ್ದಾರಿಯುತ ಇನ್ನಿಂಗ್ಸ್ ಆಡುವಲ್ಲಿ ಎಡುವಿದರು.
ನಂತರ ಕ್ರೀಸ್‌ಗೆ ಬಂದ ತಿಲಕ್ ವರ್ಮಾ 20 ರನ್, ಅಕ್ಷರ್ ಪಟೇಲ್ 27 ರನ್ ಮತ್ತು ಹಾರ್ದಿಕ್ ಪಾಂಡ್ಯ ಅಜೇಯ 39 ರನ್ ಗಳಿಸಿದರು. ಈ ಮೂಲಕ ಭಾರತ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 124 ರನ್‌ಗಳ ಸಾಧಾರಣ ಮೊತ್ತ ಕಲೆಹಾಕಿತು. ದಕ್ಷಿಣ ಆಫ್ರಿಕಾ ಪರ ಮಾರ್ಕೊ ಯಾನ್ಸೆನ್, ಗೆರಾಲ್ಡ್ ಕೊಯೆಟ್ಜಾ, ಸಿಮೆಲಾನೆ, ಮಾರ್ಕ್ರಂ ಮತ್ತು ಪೀಟರ್ ತಲಾ 1 ವಿಕೆಟ್ ಪಡೆದು ಮಿಂಚಿದರು.
ವರುಣ್ ಸ್ಪಿನ್ ಮ್ಯಾಜಿಕ್
ಭಾರತ ನೀಡಿದ 124 ರನ್‌ಗಳ ಸಾಧಾರಣ ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾವನ್ನು ವರುಣ್ ಚಕ್ರವರ್ತಿ ತಮ್ಮ ಸ್ಪಿನ್ ಬೌಲಿಂಗ್ ಮೂಲಕ ಕಾಡಿದರು. ತಮ್ಮ ನಾಲ್ಕು ಓವರ್‌ಗಳ ಕೋಟಾದಲ್ಲಿ ಒಬ್ಬರ ನಂತರ ಒಬ್ಬರಂತೆ ಐವರು ಬ್ಯಾಟರ್‌ಗಳನ್ನು ಬಲಿ ಪಡೆದರು. ಆದರೆ, ಅವರ ಅದ್ಭುತ ಬೌಲಿಂಗ್ ಪ್ರದರ್ಶನದ ಹೊರತಾಗಿಯೂ ಭಾರತಕ್ಕೆ ಪಂದ್ಯ ಗೆಲ್ಲಲು ಸಾಧ್ಯವಾಗಲಿಲ್ಲ. ಚಕ್ರವರ್ತಿ ನಾಲ್ಕು ಓವರ್‌ಗಳಲ್ಲಿ ಕೇವಲ 17 ರನ್‌ಗಳನ್ನು ಬಿಟ್ಟುಕೊಟ್ಟು ಐದು ವಿಕೆಟ್‌ಗಳನ್ನು ಕಬಳಿಸಿ ಮಿಂಚಿದರು. ಮೊದಲ ಬಾರಿಗೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅವರು ಐದು ವಿಕೆಟ್ ಪಡೆದ ಸಾಧನೆ ಮಾಡಿದರು.
ದಕ್ಷಿಣ ಆಫ್ರಿಕಾ ಪರ ರ್‍ಯಾನ್ ರಿಕಲ್‌ಟನ್ (13), ರೀಜಾ ಹೆಂಡ್ರಿಕ್ಸ್ (24), ನಾಯಕ ಏಡೆನ್ ಮಾರ್ಕ್ರಮ್ (3), ಮಾರ್ಕೊ ಯಾನ್ಸನ್ (7), ಹೆನ್ರಿಕ್ ಕ್ಲಾಸೆನ್ (2) ಅವರು ತಂಡದ ಗೆಲುವಿಗೆ ನೆರವಾಗದೆ ಔಟಾದರೆ, ಡೇವಿಡ್ ಮಿಲ್ಲರ್ ಬಂದ ದಾರಿಕೆ ಸುಂಕವಿಲ್ಲದಂತೆ ಮೊದಲ ಎಸೆತದಲ್ಲೇ ವಿಕೆಟ್ ಕಳೆದುಕೊಂಡರು. ಈ ಹಂತದಲ್ಲಿ ಹರಿಣಗಳ ಪಡೆ ಸೋಲಿನ ಸುಳಿಯಲ್ಲಿತ್ತು. ಆದರೆ ದಕ್ಷಿಣ ಆಫ್ರಿಕಾಗೆ ಟ್ರಿಸ್ಟಾನ್ ಸ್ಟಬ್ಸ್ ಮತ್ತು ಗೆರಾಲ್ಡ್ ಕೊಯೆಟ್ಜಾ ಆಸರೆಯಾದರು. ಈ ಜೋಡಿ 41 ಎಸೆತಗಳಲ್ಲಿ ಅಜೇಯ 47 ರನ್ ಗಳಿಸುವ ಮೂಲಕ ತಂಡಕ್ಕೆ ಗೆಲುವಿಗೆ ಕೊಡುಗೆ ನೀಡಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications