ದಕ್ಷಿಣ ಆಫ್ರಿಕಾ ವಿಶ್ವ ಟೆಸ್ಟ್ ಚಾಂಪಿಯನ್: ಕಳಚಿದ ಚೋಕರ್ಸ್ ಪಟ್ಟ
ದಕ್ಷಿಣ ಆಫ್ರಿಕಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಇತಿಹಾಸ ನಿರ್ಮಿಸಿದೆ. ಅಮೋಘ ಪ್ರದರ್ಶನ ನೀಡಿರುವ ದಕ್ಷಿಣ ಆಫ್ರಿಕಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಆಸ್ಟ್ರೇಲಿಯಾ ತಂಡವನ್ನು 5 ವಿಕೆಟ್‌ಗಳಿಂದ ಮಣಿಸಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ. ಈ ಮೂಲಕ ದಕ್ಷಿಣ ಆಫ್ರಿಕಾ ಚೋಕರ್ಸ್ ಪಟ್ಟವನ್ನು ಕಳಚಿದೆ. ಲಾರ್ಡ್ಸ್‌ನಲ್ಲಿ ನಡೆದ ಪಂದ್ಯದಲ್ಲಿ ತೆಂಬು ಬವುಮಾ ತಂಡ ಸೊಗಸಾದ ಪ್ರದರ್ಶನ ನೀಡಿ ಜಯ ಸಾಧಿಸಿದೆ. ಈ ಮೂಲಕ ಹಲವು ವರ್ಷಗಳಿಂದ ಇದ್ದ ಐಸಿಸಿ ಬರವನ್ನು ಈಡೇರಿಸಿಕೊಂಡಿದೆ.
ಶನಿವಾರ ನಾಲ್ಕನೇ ದಿನದಾಟದಲ್ಲಿ 69 ರನ್‌ಗಳ ಕಲೆ ಹಾಕಿದ ಆಫ್ರಿಕಾ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ. ಈ ಮೂಲಕ ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟವನ್ನು ಅಲಂಕರಿಸುವ ಕನಸು ನುಚ್ಚು ನೂರಾಗಿದೆ. ಈ ಗೆಲುವಿನ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗೆದ್ದ ಮೂರನೇ ತಂಡ ಎಂಬ ಹೆಗ್ಗಳಿಕೆ ದಕ್ಷಿಣ ಆಫ್ರಿಕಾ ತಂಡ ಪಾತ್ರವಾಗಿದೆ. ಈ ಮೊದಲು 2021ರಲ್ಲಿ ನ್ಯೂಜಿಲೆಂಡ್, 2023ರಲ್ಲಿ ಆಸ್ಟ್ರೇಲಿಯಾ ತಂಡಗಳು ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದವು. ಈಗ ಈ ಲೀಸ್ಟ್‌ಗೆ ದಕ್ಷಿಣ ಆಫ್ರಿಕಾ ಸೇರಿಕೊಂಡಿದೆ.

ದಕ್ಷಿಣ ಆಫ್ರಿಕಾ ಈ ಹಿಂದೆ ಹ್ಯಾನ್ಸಿ ಕ್ರೋನಿಯಾ ನಾಯಕತ್ವದಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತ್ತು. ಅದರ ನಂತರ ದಕ್ಷಿಣ ಆಫ್ರಿಕಾ ಯಾವುದೇ ಐಸಿಸಿ ಟೂರ್ನಿಯ ಚಾಂಪಿಯನ್ ಪಟ್ಟವನ್ನು ಅಲಂಕರಿಸಿರಲಿಲ್ಲ. ಈಗ ದಕ್ಷಿಣ ಆಫ್ರಿಕಾ ತಂಡ ಸ್ಥಿರ ಪ್ರದರ್ಶನ ನೀಡಿ ಅಬ್ಬರಿಸಿದೆ.
ಕಳಚಿದ ಚೋಕರ್ಸ್ ಪಟ್ಟ
ದಕ್ಷಿಣ ಆಫ್ರಿಕಾ ತಂಡ ವಿಶ್ವ ಕ್ರಿಕೆಟ್‌ನ ದೊಡ್ಡ ದೊಡ್ಡ ಟೂರ್ನಿಗಳ ಮಹತ್ವದ ಪಂದ್ಯಗಳಲ್ಲಿ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲವಾಗಿದ್ದರಿಂದ ಚೋಕರ್ಸ್ ಎಂದು ಕರೆಯುತ್ತಿದ್ದರು. ದಕ್ಷಿಣ ಆಫ್ರಿಕಾ 1999ರ ವಿಶ್ವಕಪ್ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತಿದ್ದು ಈ ತಂಡ ಬಹುಕಾಲ ನೆನಪಿನಲ್ಲಿ ಇಟ್ಟುಕೊಂಡ ಸೋಲಿನಲ್ಲಿ ಒಂದಾಗಿತ್ತು. ದಕ್ಷಿಣ ಆಫ್ರಿಕಾ ತಂಡವು ಫೈನಲ್‌ನಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ಸಾಧ್ಯವಾಗಲಿಲ್ಲ, ಏಕೆಂದರೆ ಅದು ಸೂಪರ್ ಸಿಕ್ಸ್ ಹಂತದಲ್ಲಿ ಆಸ್ಟ್ರೇಲಿಯಾ ವಿರುದ್ಧ ನಿರಾಸೆ ಕಂಡಿತು.

ಇನ್ನು 2007ರ ವಿಶ್ವಕಪ್ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಏಕಪಕ್ಷೀಯ ಸೋಲನ್ನು ಕಂಡಿತ್ತು. ದಕ್ಷಿಣ ಅಫ್ರಿಕಾ ಮೊದಲು ಬ್ಯಾಟಿಂಗ್ ಮಾಡಿ ಕೇವಲ 149 ರನ್‌ಗಳಿಗೆ ಆಲೌಟ್ ಆಯಿತು. ನಂತರ ಆಸ್ಟ್ರೇಲಿಯಾ ಪಂದ್ಯವನ್ನು ಸುಲಭವಾಗಿ ಗೆದ್ದಿತು.
ದಕ್ಷಿಣ ಆಫ್ರಿಕಾ ಟಿ20 ವಿಶ್ವಕಪ್‌ನಲ್ಲಿಯೂ ದೊಡ್ಡ ಪಂದ್ಯಗಳಲ್ಲಿ ಸೋಲನ್ನು ಎದುರಿಸಿದೆ. ಇದರಲ್ಲಿ 2009 ರ ಟಿ20 ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಭಾರತದ ವಿರುದ್ಧ ಸೋಲನ್ನು ಎದುರಿಸಬೇಕಾಯಿತು. ಇನ್ನು ಕಳೆದ ವರ್ಷ ನಡೆದ ಟಿ20 ವಿಶ್ವಕಪ್‌ನಲ್ಲಿ ಭಾರತದ ವಿರುದ್ಧವೂ ಆಫ್ರಿಕಾ ನಿರಾಸೆಯನ್ನು ಕಂಡಿತು. ಆದರೆ ಈ ಬಾರಿಯ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್‌ನಲ್ಲಿ ಸ್ಥಿರ ಪ್ರದರ್ಶನ ನೀಡಿದ ಆಫ್ರಿಕಾ ಗೆಲುವು ದಾಖಲಿಸಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications