For Quick Alerts
ALLOW NOTIFICATIONS  
For Daily Alerts
 

ENG vs SA: ನಾಯಕನನ್ನು ಬದಲಾಯಿಸಿದ ದಕ್ಷಿಣ ಆಫ್ರಿಕಾ

ಐಸಿಸಿ 2025ರ ಚಾಂಪಿಯನ್ಸ್ ಟ್ರೋಫಿಯ 11ನೇ ಗುಂಪು ಹಂತದ ಪಂದ್ಯವು ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾ ನಡುವೆ ಕರಾಚಿಯ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ದಕ್ಷಿಣ ಆಫ್ರಿಕಾ ಈಗಾಗಲೇ ಸೆಮಿಫೈನಲ್ ತಲುಪಿದ್ದು, ಇಂಗ್ಲೆಂಡ್ ತಂಡ ಸೆಮಿಫೈನಲ್ ರೇಸ್‌ನಿಂದ ಹೊರಗುಳಿದಿದೆ. ಇಂಗ್ಲೆಂಡ್ ವೈಟ್ ಬಾಲ್ ತಂಡದ ನಾಯಕತ್ವದಿಂದ ಕೆಳಗಿಳಿಯುವ ನಿರ್ಧಾರವನ್ನು ಘೋಷಿಸಿದ ನಂತರ, ಜೋಸ್ ಬಟ್ಲರ್ ಇಂದು ನಾಯಕನಾಗಿ ತಮ್ಮ ಕೊನೆಯ ಪಂದ್ಯವನ್ನು ಆಡುತ್ತಿದ್ದಾರೆ. ಮತ್ತೊಂದೆಡೆ ಈ ಪಂದ್ಯಕ್ಕೂ ಮೊದಲು ದಕ್ಷಿಣ ಆಫ್ರಿಕಾ ತನ್ನ ನಾಯಕನನ್ನು ಬದಲಾಯಿಸುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದೆ.

ಇಂದು ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ 2025ರ ಬಿ ಗುಂಪಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತನ್ನ ನಾಯಕನನ್ನು ಬದಲಾಯಿಸಿದೆ. ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡದ ನಾಯಕತ್ವವನ್ನು ಸ್ಟಾರ್ ಬ್ಯಾಟರ್ ಐಡೆನ್ ಮಾರ್ಕ್ರಾಮ್ ಅವರಿಗೆ ನೀಡಲಾಗಿದೆ.

South Africa changes captain for Champions Trophy 2025 group stage match against England

ದಕ್ಷಿಣ ಆಫ್ರಿಕಾದ ನಿಯಮಿತ ನಾಯಕ ಟೆಂಬಾ ಬವುಮಾ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಆಡುತ್ತಿಲ್ಲ. ಅನಾರೋಗ್ಯದ ಕಾರಣ ಟೆಂಬಾ ಬವುಮಾ ಹಾಗೂ ಟೋನಿ ಡಿ ಜಾರ್ಜಿ ಪಂದ್ಯದಿಂದ ಹೊರಗುಳಿದಿದ್ದಾರೆ. ಬವುಮಾ ಅನುಪಸ್ಥಿತಿಯಲ್ಲಿ ಮಾರ್ಕ್ರಾಮ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಇಂದು ಆಫ್ರಿಕಾ ಪರ ಟ್ರಿಸ್ಟಾನ್ ಸ್ಟಬ್ಸ್ ಬ್ಯಾಟಿಂಗ್ ಆರಂಭಿಸಲಿದ್ದು, ಹೆನ್ರಿಕ್ ಕ್ಲಾಸೆನ್ ಮಧ್ಯಮ ಕ್ರಮಾಂಕದಲ್ಲಿ ಆಡಲಿದ್ದಾರೆ.

ಇಂಗ್ಲೆಂಡ್ ಧ್ವಂಸ

ಟಾಸ್ ಗೆದ್ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಆದರೆ ಇಂಗ್ಲೆಂಡ್ ತಂಡದಿಂದ ನಿರೀಕ್ಷಿತ ಬ್ಯಾಟಿಂಗ್ ಪ್ರದರ್ಶನ ಬಂದಿಲ್ಲ. ಕೇವಲ 38.2 ಓವರ್‌ಗಳಲ್ಲಿ 179 ರನ್‌ಗಳಿಗೆ ಇಂಗ್ಲೆಂಡ್ ತಂಡ ಆಲೌಟ್ ಆಗಿದೆ. ಇಂಗ್ಲೆಂಡ್ ಪರ ಜೋ ರೂಟ್ 37 ರನ್ ಗಳಿಸುವ ಮೂಲಕ ಗರಿಷ್ಠ ಸ್ಕೋರರ್ ಆಗಿದ್ದಾರೆ.

ದಕ್ಷಿಣ ಆಫ್ರಿಕಾ ಪರ ಬೌಲರ್‌ಗಳು ಸಂಘಟಿತ ಬೌಲಿಂಗ್ ಪ್ರದರ್ಶನವನ್ನು ನೀಡಿದ್ದಾರೆ. ಮಾರ್ಕೊ ಜಾನ್ಸೆನ್ ಮತ್ತು ವಿಯಾನ್ ಮುಲ್ಡರ್ 3 ವಿಕೆಟ್ ಪಡೆದು ಮಿಂಚಿದರೆ, ಕೇಶವ ಮಹಾರಾಜ್ ತಲಾ 2 ವಿಕೆಟ್ ಉರುಳಿಸಿದ್ದಾರೆ. ಲುಂಗಿ ಎನ್‌ಗಿಡಿ ಹಾಗು ಕಗಿಸೊ ರಬಾಡ ತಲಾ 1 ವಿಕೆಟ್ ಪಡೆದಿದ್ದಾರೆ.

ಉಭಯ ತಂಡಗಳ ಪ್ಲೇಯಿಂಗ್-11

ಇಂಗ್ಲೆಂಡ್‌: ಫಿಲಿಪ್ ಸಾಲ್ಟ್, ಬೆನ್ ಡಕೆಟ್, ಜೇಮೀ ಸ್ಮಿತ್ (ವಿಕೆಟ್ ಕೀಪರ್), ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜೇಮೀ ಓವರ್ಟನ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಸಾಕಿಬ್ ಮಹಮೂದ್.

ದಕ್ಷಿಣ ಆಫ್ರಿಕಾ: ಟ್ರಿಸ್ಟಾನ್ ಸ್ಟಬ್ಸ್, ರಯಾನ್ ರಿಕಲ್ಟನ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಕ್ ಕ್ಲಾಸೆನ್ (ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ವಿಯಾನ್ ಮುಲ್ಡರ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಕಾಗಿಸೊ ರಬಾಡ, ಲುಂಗಿ ಎನ್‌ಗಿಡಿ.

Story first published: Saturday, March 1, 2025, 17:42 [IST]
Other articles published on Mar 1, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+