BAN vs SA Test: ಬಾಂಗ್ಲಾದೇಶ ವಿರುದ್ಧ ಅಬ್ಬರಿಸಿದ ದ.ಆಫ್ರಿಕಾ: ಇತಿಹಾಸ ಬರೆದ ಏಡನ್ ಮಾರ್ಕ್ರಮ್
ಸದ್ಯ ದಕ್ಷಿಣ ಆಫ್ರಿಕಾ ಬಾಂಗ್ಲಾ ಪ್ರವಾಸದಲ್ಲಿದೆ. ಈ ವೇಳೆ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಏಳು ವಿಕೆಟ್‌ಗಳಿಂದ ಆತಿಥೇಯ ತಂಡವನ್ನು ಮಣಿಸಿ ಅಬ್ಬರಿಸಿದೆ. ಈ ಮೂಲಕ ಆಫ್ರಿಕಾ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0ಯಿಂದ ಮುನ್ನಡೆ ಸಾಧಿಸಿದೆ.
ಈ ಪಂದ್ಯದಲ್ಲಿ ಮೊದಲ ಬ್ಯಾಟ್ ಮಾಡಿದ ಬಾಂಗ್ಲಾ ಮೊದಲ ಇನಿಂಗ್ಸ್‌ನಲ್ಲಿ 106 ರನ್‌ಗಳಿಗೆ ಆಲೌಟ್ ಆಯಿತು. ಮೊದಲ ಇನಿಂಗ್ಸ್‌ನಲ್ಲಿ ದಕ್ಷಿಣ ಆಫ್ರಿಕಾ 308 ರನ್‌ಗಳಿಗೆ ಸರ್ವಪತನ ಕಂಡಿತು. ಇನಿಂಗ್ಸ್ ಹಿನ್ನಡೆಯೊಂದಿಗೆ ಎರಡನೇ ಇನಿಂಗ್ಸ್ ಆರಂಭಿಸಿದ ಬಾಂಗ್ಲಾ 307 ರನ್ ಸೇರಿಸಿತು. ಎರಡನೇ ಇನಿಂಗ್ಸ್‌ನಲ್ಲಿ ದಕ್ಷಿಣ ಆಫ್ರಿಕಾ 3 ವಿಕೆಟ್‌ಗೆ ಅಗತ್ಯ ರನ್ ಕಲೆ ಹಾಕಿ ಮಿಂಚಿತು. ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ನಾಯಕ ಏಡನ್ ಮಾರ್ಕ್ರಮ್ ಇತಿಹಾಸ ಸೃಷ್ಟಿಸಿದ್ದಾರೆ.

ಮಾರ್ಕ್ರಮ್ ಇತಿಹಾಸ
10 ವರ್ಷಗಳ ನಂತರ ಏಷ್ಯಾದಲ್ಲಿ ಟೆಸ್ಟ್ ಪಂದ್ಯವನ್ನು ಗೆದ್ದ ದಕ್ಷಿಣ ಆಫ್ರಿಕಾದ ನಾಯಕ ಎಂಬ ಹೆಗ್ಗಳಿಕೆಯನ್ನು ಇವರು ತಮ್ಮದಾಗಿಸಿಕೊಂಡಿದ್ದಾರೆ. ಢಾಕಾದಲ್ಲಿ ಬಾಂಗ್ಲಾದೇಶ ತಂಡವನ್ನು ಮಣಿಸುವ ಮೂಲಕ ಮಾರ್ಕ್ರಮ್ ಈ ವಿಶೇಷ ಸಾಧನೆ ಮಾಡಿದರು. ಪಂದ್ಯದ ಹೀರೋ ಆಫ್ರಿಕನ್ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಕೈಲ್ ವೆರೀನ್ ಆಗಿ ಮಿಂಚಿದ್ದಾರೆ.
ಮೊದಲ ಇನಿಂಗ್ಸ್‌ನಲ್ಲಿ ಏಳನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡುತ್ತಿದ ವೀರೀನ್ 144 ಎಸೆತಗಳಲ್ಲಿ 114 ರನ್ ಬಾರಿಸಿ ಮಿಂಚಿದರು. ಇವರ ಮನಮೋಹಕ ಇನಿಂಗ್ಸ್‌ನಲ್ಲಿ 8 ಬೌಂಡರಿ, 2 ಸಿಕ್ಸರ್‌ಗಳು ಸೇರಿವೆ. ಇವರ ಈ ಮನಮೋಹಕ ಆಟದ ಪರಿಣಾಮವಾಗಿ ಇವರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಲಭಿಸಿದೆ. ಈ ಮೂಲಕ ದಕ್ಷಿಣ ಆಫ್ರಿಕಾ ಎರಡು ಪಂದ್ಯಗಳ ಸರಣಿಯಲ್ಲಿ ಮುನ್ನಡೆ ಸಾಧಿಸಿದೆ.

ದ.ಆಫ್ರಿಕಾ 4ನೇ ಸ್ಥಾನ
ಈ ಗೆಲುವಿನಿಂದ ದಕ್ಷಿಣ ಆಫ್ರಿಕಾ ತಂಡ 12 ಅಂಕ ಗಳಿಸಿದೆ. ಈಗ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಪಾಯಿಂಟ್‌ಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಬಡ್ತಿ ಪಡೆದಿದೆ. ಇವರ ಗೆಲುವಿನ ಸರಾಸರಿ ಶೇಕಡಾ 47.62 ಆಗಿದೆ. ಈ ಪಂದ್ಯಕ್ಕೂ ಮುನ್ನ ದಕ್ಷಿಣ ಆಫ್ರಿಕಾ 38.89 ಅಂಕಗಳೊಂದಿಗೆ ಆರನೇ ಸ್ಥಾನದಲ್ಲಿತ್ತು. ಈ ಗೆಲುವಿನ ಮೂಲಕ ಆಫ್ರಿಕಾ ನ್ಯೂಜಿಲೆಂಡ್, ಇಂಗ್ಲೆಂಡ್ ಕ್ರಮವಾಗಿ ಐದು ಹಾಗೂ ಆರನೇ ಸ್ಥಾನದಲ್ಲಿವೆ.
ಭಾರತಕ್ಕೆ ಅಗ್ರ ಸ್ಥಾನ
ಭಾರತ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಭಾರತ 12 ಪಂದ್ಯಗಳಲ್ಲಿ 8 ಜಯ ದಾಖಲಿಸಿದ್ದು, ಗೆಲುವಿನ ಶೇಕಡಾ 68.06 ಆಗಿದೆ. ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿ ಆಸ್ಟ್ರೇಲಿಯಾ ಇದ್ದು, ಶ್ರೀಲಂಕಾ ಮೂರನೇ ಸ್ಥಾನದಲ್ಲಿದೆ.
ಉಭಯ ತಂಡಗಳ ನಡುವಣ ಎರಡನೇ ಟೆಸ್ಟ್ ಪಂದ್ಯ ಚಿತ್ತಗಾಂಗ್‌ನಲ್ಲಿ ಅಕ್ಟೋಬರ್ 29 ರಿಂದ ನಡೆಯಲಿದೆ. ಈ ಪಂದ್ಯದಲ್ಲಿ ಗೆಲುವು ಸಾಧಿಸಿ ಸರಣಿ ಗೆಲುವಿನ ವಿಶ್ವಾಸದಲ್ಲಿ ದಕ್ಷಿಣ ಆಫ್ರಿಕಾ ಇದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications