ದಕ್ಷಿಣ ಆಫ್ರಿಕಾಕ್ಕೆ 5 ವಿಕೆಟ್ ಜಯ: ಜಿಂಬಾಬ್ವೆಗೆ ನಿರಾಸೆ
ನವದೆಹಲಿ: ಸಂಘಟಿತ ಆಟದ ಪ್ರದರ್ಶನ ನೀಡಿದ ದಕ್ಷಿಣ ಆಫ್ರಿಕಾ ಟಿ20 ವಿಶ್ವಕಪ್‌ನ ಸೂಪರ್ 8 ಹಂತದ ಪಂದ್ಯದಲ್ಲಿ 5 ವಿಕೆಟ್ ಗಳಿಂದ ಜಿಂಬಾಬ್ವೆ ತಂಡವನ್ನು ಮಣಿಸಿತು. ಈ ಮೂಲಕ ದಕ್ಷಿಣ ಆಫ್ರಿಕಾ ಅಜೇಯವಾಗಿ ಸೆಮಿಫೈನಲ್ ಹಂತವನ್ನು ಪ್ರವೇಶಿಸಿದೆ.
ಮಹತ್ವದ ಪಂದ್ಯದಲ್ಲಿ ಟಾಸ್ ಜಿಂಬಾಬ್ವೆ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಜಿಂಬಾಬ್ವೆ ತಂಡದ ಪರ ಟಾಸ್ ಆರ್ಡರ್ ಬ್ಯಾಟರ್‌ಗಳು ರನ್ ಕಲೆ ಹಾಕುವಲ್ಲಿ ವಿಫಲರಾದರು. ತಡಿವಾನಾಶೆ ಮರುಮಣಿ (7), ಬ್ರಿಯಾನ್ ಬೆನೆಟ್ (15), ಡಿಯೋನ್ ಮೈಯರ್ಸ್ (11), ಸೂಪರ್ 8 ಹಂತದ ಕೊನೆಯ ಪಂದ್ಯದಲ್ಲಿ ರನ್ ಕಲೆ ಹಾಕುವಲ್ಲಿ ವಿಫಲರಾದರು. ಟಾಪ್ ಆರ್ಡರ್ ಬ್ಯಾಟರ್‌ಗಳು ರನ್ ಕಲೆ ಹಾಕುವಲ್ಲಿ ವಿಫಲರಾದರು.

ನಾಯಕ ಸಿಕಂದರ್ ರಾಜಾ ದಕ್ಷಿಣ ಆಫ್ರಿಕಾ ಬೌಲರ್‌ಗಳನ್ನು ಕಾಡಿದರು. ಇವರು ತಮ್ಮ ಅನುಭವವನ್ನು ಬಳಸಿಕೊಂಡು ಬ್ಯಾಟ್ ಮಾಡಿದ ಸಿಕಂದರ್ ರಾಜಾ 43 ಎಸೆತಗಳಲ್ಲಿ 73 ರನ್ ಬಾರಿಸಿ ತಂಡಕ್ಕೆ ಆಧಾರವಾದರು. ಇವರ ಅಮೋಘ ಇನಿಂಗ್ಸ್‌ನಲ್ಲಿ 8 ಬೌಂಡರಿ, 4 ಸಿಕ್ಸರ್ ಬಾರಿಸಿ ಮಿಂಚಿದರು. ಕ್ಲೈವ್ ಮದಾಂಡೆ 3 ಬೌಂಡರಿ ಸಹಾಯದಿಂದ ಅಜೇಯ 26 ರನ್ ಸಿಡಿಸಿ ತಂಡಕ್ಕೆ ಆಧಾರವಾದರು. ಅಂತಿಮವಾಗಿ ಜಿಂಬಾಬ್ವೆ 20 ಓವರ್‌ಗಳಲ್ಲಿ 7 ವಿಕೆಟ್‌ಗೆ 153 ರನ್ ಸಿಡಿಸಿದರು. ದಕ್ಷಿಣ ಆಫ್ರಿಕಾದ ಪರ ಕ್ವೆನಾ ಮಾಫಕಾ, ಕಾರ್ಬಿನ್ ಬಾಷ್ ತಲಾ 2 ವಿಕೆಟ್ ಪಡೆದರು.
ಕಳಪೆ ಆರಂಭ
154 ರನ್‌ಗಳ ಗುರಿಯನ್ನು ಹಿಂಬಾಲಿಸಿದ ದಕ್ಷಿಣ ಆಫ್ರಿಕಾ ತಂಡದ ಆರಂಭಿಕರಾದ ಕ್ವಿಂಟನ್ ಡಿಕಾಕ್ (0), ನಾಯಕ ಐಡನ್ ಮಾರ್ಕ್ರಾಮ್ (4) ರನ್ ಕಲೆ ಹಾಕುವಲ್ಲಿ ವಿಫಲರಾದರು. ಮಧ್ಯಮ ಕ್ರಮಾಂಕದಲ್ಲಿ ರಯಾನ್ ರಿಕಲ್ಟನ್ 4 ಸಿಕ್ಸರ್ ಸಹಾಯದಿಂದ 31 ರನ್ ಬಾರಿಸಿ ಔಟ್ ಆದರು. ದಕ್ಷಿಣ ಆಫ್ರಿಕಾದ ಪರ ಡೇವಿಡ್ ಮಿಲ್ಲರ್ ಹಾಗೂ ಡೆವಾಲ್ಡ್ ಬ್ರೆವಿಸ್ ಜೋಡಿ ನಾಲ್ಕನೇ ವಿಕೆಟ್‌ಗೆ ಉತ್ತಮ ಜೊತೆಯಾಟದ ಕಾಣಿಕೆ ನೀಡಿದರು. ಈ ಜೋಡಿ 25 ಎಸೆತಗಳಲ್ಲಿ 50 ರನ್ ಸೇರಿಸಿದರು.

ಡೇವಿಡ್ ಮಿಲ್ಲರ್ 2 ಬೌಂಡರಿ, 2 ಸಿಕ್ಸರ್ ಸಹಾಯದಿಂದ 22 ರನ್ ಬಾರಿಸಿ ಔಟ್ ಆದರು. ಮಿನಿ ಎಬಿಡಿ ವಿಲಿಯರ್ಸ್ ಎಂದೇ ಖ್ಯಾತಿ ಪಡೆದಿರುವ ಬ್ರೆವಿಸ್ 2 ಬೌಂಡರಿ, 4 ಸಿಕ್ಸರ್ ನೆರವಿನಿಂದ 42 ರನ್ ಸಿಡಿಸಿದರು. ಆರನೇ ವಿಕೆಟ್‌ಗೆ ಜಾರ್ಜ್ ಲಿಂಡೆ (ಅಜೇಯ 30) ಹಾಗೂ ಟ್ರಿಸ್ಟನ್ ಸ್ಟಬ್ಸ್ (ಅಜೇಯ 21) ಒತ್ತಡವನ್ನು ಮೆಟ್ಟಿನಿಂತು ರನ್‌ಗಳನ್ನು ಕಲೆ ಹಾಕಿತು. ಈ ಜೋಡಿ 44 ಎಸೆತಗಳಲ್ಲಿ ಅಜೇಯ 53 ರನ್ ಸಿಡಿಸಿತು. ಅಂತಿಮವಾಗಿ ದಕ್ಷಿಣ ಆಫ್ರಿಕಾ 17.5 ಓವರ್‌ಗಳಲ್ಲಿ 5 ವಿಕೆಟ್‌ಗೆ 154 ರನ್ ಸಿಡಿಸಿ ಜಯ ಸಾಧಿಸಿತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications