Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Champions Trophy: ಇಂಗ್ಲೆಂಡ್ ಮಣಿಸಿ ಸೆಮಿಸ್ ತಲುಪುವ ನಿರೀಕ್ಷೆಯಲ್ಲಿ ಆಫ್ರಿಕಾ

ಐಸಿಸಿ 2025ರ ಚಾಂಪಿಯನ್ಸ್ ಟ್ರೋಫಿ ಅಂತಿಮ ಹಂತಕ್ಕೆ ಬಂದಿದೆ. ಕೇವಲ ಒಂದು ಸೆಮಿಫೈನಲ್ ಸ್ಥಾನ ಮಾತ್ರ ಉಳಿದಿದೆ. ದಕ್ಷಿಣ ಆಫ್ರಿಕಾ ಮತ್ತು ಅಫ್ಘಾನಿಸ್ತಾನ ತಂಡಗಳು ಇನ್ನೂ ಪೈಪೋಟಿಯಲ್ಲಿವೆ. ದಕ್ಷಿಣ ಆಫ್ರಿಕಾ ತಂಡ ಸೆಮಿಫೈನಲ್ ತಲುಪಲು ಉಳಿದಿರುವ ತನ್ನ ಕೊನೆಯ ಗುಂಪ ಹಂತದ ಪಂದ್ಯವನ್ನು ಗೆಲ್ಲಲೇಬೇಕು. ಚಾಂಪಿಯನ್ಸ್ ಟ್ರೋಫಿಯ ಕೊನೆಯ ಬಿ ಗುಂಪಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್ ತಂಡಗಳು ಇಂದು (ಶನಿವಾರ) ಮುಖಾಮುಖಿಯಾಗುತ್ತಿವೆ.

ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್ ನಡುವಿನ ರೋಚಕ ಪಂದ್ಯ ಕರಾಚಿಯ ಸ್ಟೇಡಿಯಂನಲ್ಲಿ ನಡೆಯಲಿದೆ. ದಕ್ಷಿಣ ಆಫ್ರಿಕಾ ತಂಡಕ್ಕೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾದರೆ, ಇಂಗ್ಲೆಂಡ್ ತಂಡ ಈಗಾಗಲೇ ಟೂರ್ನಿಯಿಂದ ಹೊರಬಿದ್ದಿದೆ. ಇಂಗ್ಲೆಂಡ್ ತಂಡವನ್ನು ಮಣಿಸುವ ಮೂಲಕ ದಕ್ಷಿಣ ಆಫ್ರಿಕಾ ಸೆಮಿಫೈನಲ್ ತಲಪುವ ಲೆಕ್ಕಚಾರದಲ್ಲಿದೆ.

South Africa hopes to beat England and reach Champions Trophy 2025 semis

ಶುಕ್ರವಾರ ನಡೆಯಬೇಕಿದ್ದ ಅಫ್ಘಾನಿಸ್ತಾನ ಮತ್ತು ಆಸ್ಟ್ರೇಲಿಯಾ ನಡುವಿನ ಬಿ ಗುಂಪಿನ ಹೈವೋಲ್ಟೇಜ್ ಪಂದ್ಯ ಮಳೆಯಿಂದ ರದ್ದಾಯಿತು. ಇದಾದ ನಂತರ ಆಸ್ಟ್ರೇಲಿಯಾ ಜೊತೆ ಅಫ್ಘಾನಿಸ್ತಾನ ತಂಡ ಅಂಕಗಳನ್ನು ಹಂಚಿಕೊಂಡಿರುವುದರಿಂದ ಇನ್ನೂ ಅಂತಿಮ ನಾಲ್ಕರ ಘಟ್ಟಕ್ಕೆ ಅರ್ಹತೆ ಪಡೆಯುವ ಸ್ಪರ್ಧೆಯಲ್ಲಿದೆ. ಇತ್ತ ದಕ್ಷಿಣ ಆಫ್ರಿಕಾ ಇನ್ನೂ ಒಂದು ಪಂದ್ಯ ಬಾಕಿ ಇದ್ದು, ಹೆಚ್ಚಿನ ನಿವ್ವಳ ರನ್ ರೇಟ್ ಹೊಂದಿದೆ. ಒಂದು ವೇಳೆ ಈ ಪಂದ್ಯವನ್ನು ಆಫ್ರಿಕಾ ಸೋತರೆ ರನ್ ರೇಟ್ ಮೂಲಕ ಸೆಮಿಸ್ ತಲುಪಬಹುದು ಎಂಬ ಲೆಕ್ಕಚಾರ ನಡೆಯುತ್ತಿದೆ.

ಇಂಗ್ಲೆಂಡ್ ವಿರುದ್ಧ ದಕ್ಷಿಣ ಆಫ್ರಿಕಾ ಗೆದ್ದರೆ ನೇರವಾಗಿ ಸೆಮಿಫೈನಲ್ ತಲುಪಲಿದೆ. ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನ ವಿರುದ್ಧ ಸೋತ ನಂತರ, ಇಂಗ್ಲೆಂಡ್ ತಂಡ ಟೂರ್ನಿಯಿಂದ ಹೊರಗುಳಿದಿದೆ. ಇಂಗ್ಲೆಂಡ್ ಏಕದಿನ ತಂಡದ ನಾಯಕರಾಗಿ ಜೋಸ್ ಬಟ್ಲರ್ ಅವರಿಗೆ ದಕ್ಷಿಣ ಆಫ್ರಿಕಾ ವಿರುದ್ಧ ಕೊನೆಯ ಪಂದ್ಯವಾಗಿರುತ್ತದೆ. ಬಟ್ಲರ್ ಫೆಬ್ರವರಿ 28 ಶುಕ್ರವಾರದಂದು ತಮ್ಮ ನಾಯಕತ್ವ ರಾಜೀನಾಮೆ ನೀಡಿದ್ದಾರೆ.

ಉಭಯ ತಂಡಗಳು

ದಕ್ಷಿಣ ಆಫ್ರಿಕಾ: ಟೆಂಬಾ ಬವುಮಾ (ನಾಯಕ), ಟೋನಿ ಡಿ ಜೊರ್ಜಿ, ಮಾರ್ಕೊ ಜಾನ್ಸೆನ್, ಹೆನ್ರಿಚ್ ಕ್ಲಾಸೆನ್ (ವಿಕೆಟ್‌ಕೀಪರ್), ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ವಿಯಾನ್ ಮುಲ್ಡರ್, ಲುಂಗಿ ಎನ್‌ಗಿಡಿ, ಕಗಿಸೊ ರಬಾಡಾ, ರಿಯಾನ್ ರಿಕೆಲ್ಟನ್, ತಬ್ರೈಜ್ ಶಮ್ಸಿ, ಟ್ರಿಸ್ಟಾನ್ ಸ್ಟಬ್ಸ್, ಡ್ಯೂಸ್ಸೆನ್, ಡುಸ್ಸೆನ್, ರಾಸ್ಸೆನ್.

ಇಂಗ್ಲೆಂಡ್: ಜೋಸ್ ಬಟ್ಲರ್ (ನಾಯಕ), ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಟಾಮ್ ಬ್ಯಾಂಟನ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸ್, ಬೆನ್ ಡಕೆಟ್, ಜೇಮೀ ಓವರ್ಟನ್, ಜೇಮೀ ಸ್ಮಿತ್, ಲಿಯಾಮ್ ಲಿವಿಂಗ್ಸ್ಟೋನ್, ಆದಿಲ್ ರಶೀದ್, ಜೋ ರೂಟ್, ಸಾಕಿಬ್ ಮಹಮೂದ್, ಫಿಲ್ ಸಾಲ್ಟ್ (ವಿಕೆಟ್‌ಕೀಪರ್), ಮಾರ್ಕ್ ವುಡ್

Story first published: Saturday, March 1, 2025, 7:14 [IST]
Other articles published on Mar 1, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+