ಆಸ್ಟ್ರೇಲಿಯಾ ಪ್ರವಾಸಕ್ಕೆ ದಕ್ಷಿಣ ಆಫ್ರಿಕಾ ಆಟಗಾರ ಹಾಶಿಮ್ ಆಮ್ಲ ಇಲ್ಲ

ಡರ್ಬನ್, ಅಕ್ಟೋಬರ್ 16: ಕೈ ಬೆರಳಿಗೆ ಗಾಯ ಮಾಡಿಕೊಂಡಿರುವ ದಕ್ಷಿಣ ಆಫ್ರಿಕಾ ಆಟಗಾರ ಹಾಸಿಮ್ ಆಮ್ಲ ಅವರು ಇನ್ನೂ ಚೇತರಿಸಿಕೊಂಡಿಲ್ಲವಾದ್ದರಿಂದ ಮುಂಬರಲಿರುವ ಆಸ್ಟ್ರೇಲಿಯಾ ಪ್ರವಾಸದಲ್ಲಿ ಅವರು ಪಾಲ್ಗೊಳ್ಳುತ್ತಿಲ್ಲ ಎಂದು ದಕ್ಷಿಣ ಆಫ್ರಿಕಾ ತಂಡದ ಕೋಚ್ ಒಟಿಸ್ ಗಿಬ್ಸನ್ ಹೇಳಿದ್ದಾರೆ.
ಸೆಪ್ಟೆಂಬರ್ ನಲ್ಲಿ ನಡೆದಿದ್ದ ಕೆರಿಬಿಯನ್ ಪ್ರೀಮಿಯರ್ ಲೀಗ್ ಪಂದ್ಯದ ವೇಳೆ 35ರ ಹರೆಯದ ಆಮ್ಲ ಕೈ ಬೆರಳಿಗೆ ಗಾಯ ಮಾಡಿಕೊಂಡಿದ್ದರು. ಹೀಗಾಗಿ ಜಿಂಬಾಬ್ವೆ ವಿರುದ್ಧದ ಏಕದಿನ ಪಂದ್ಯಕ್ಕೆ ಡೀನ್ ಎಲ್ಗರ್ ಅವರಿಗೆ ಅವಕಾಶ ನೀಡಲಾಗಿದೆ. ಆಸ್ಟ್ರೇಲಿಯ ಪ್ರವಾಸ ಪಂದ್ಯ ನವೆಂಬರ್ ನಲ್ಲಿ ನಡೆಯಲಿದೆ.
'ಹಾಶಿಮ್ ಅವರು ಗಾಯಾಳಾಗಿದ್ದಾರೆ. ಹೀಗಾಗಿ ಅವರನ್ನು ತಂಡದಿಂದ ಹೊರಗಿಡಲಾಗಿದೆ. ಈ ಬಗ್ಗೆ ನಾವು ಈಗಾಗಲೇ ಅವರೊಡನೆ ಮಾತನಾಡಿದ್ದೇವೆ. ನಾವವರಿಗೆ ಸುಧಾರಿಸಿಕೊಳ್ಳಲು ಸಾಧ್ಯವಾದಷ್ಟು ಹೆಚ್ಚಿನ ಸಮಯ ನೀಡಲು ಬಯಸಿದ್ದೇವೆ. ಮುಂದಿನ ವರ್ಷ ವಿಶ್ವಕಪ್ ವೇಳೆಗೆ ಅವರನ್ನು ತಂಡದಲ್ಲಿ ಬಳಸಿಕೊಳ್ಳುವ ಉದ್ದೇಶವಿದೆ' ಎಂದು ಒಟಿಸ್ ವಿವರಿಸಿದ್ದಾರೆ.
Story first published: Tuesday, October 16, 2018, 16:24 [IST]
Other articles published on Oct 16, 2018
Log in for Better Reading Experience!
By signing in, you agree to our Terms and Privacy Policy
Gender
Select your Gender
- Male
- Female
- Others
Age
Select your Age Range
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications