For Quick Alerts
ALLOW NOTIFICATIONS  
For Daily Alerts
 

PAK vs SA: ಪಾಕಿಸ್ತಾನ ವಿರುದ್ಧದ ಮೊದಲ ಟೆಸ್ಟ್‌ಗೆ ದಕ್ಷಿಣ ಆಫ್ರಿಕಾ ಪ್ಲೇಯಿಂಗ್-11 ರೆಡಿ

ಪಾಕಿಸ್ತಾನ ತಂಡ ಪ್ರಸ್ತುತ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿದೆ. ದಕ್ಷಿಣ ಆಫ್ರಿಕಾವನ್ನು ತವರಿನಲ್ಲಿ ಸೋಲಿಸಿ ಏಕದಿನ ಸರಣಿಯನ್ನು ಪಾಕಿಸ್ತಾನ ಗೆದ್ದಿದೆ. ಇದೀಗ ಟೆಸ್ಟ್ ಸರಣಿಯಲ್ಲಿ ಪಾಕಿಸ್ತಾನ ವಿರುದ್ಧ ಸೋಲಿನ ಸೇಡಿಗೆ ದಕ್ಷಿಣ ಆಫ್ರಿಕಾ ಸಜ್ಜಾಗಿದೆ. ಪಾಕಿಸ್ತಾನ ವಿರುದ್ಧ ಡಿಸೆಂಬರ್ 26 ರಿಂದ ಆರಂಭವಾಗಲಿರುವ ಬಾಕ್ಸಿಂಗ್ ಡೇ ಟೆಸ್ಟ್‌ಗೆ ದಕ್ಷಿಣ ಆಫ್ರಿಕಾ ತನ್ನ ಪ್ಲೇಯಿಂಗ್ ಹನ್ನೊಂದನ್ನು ಪ್ರಕಟಿಸಿದೆ. ದಕ್ಷಿಣ ಆಫ್ರಿಕಾ ಆಡುವ ಹನ್ನೊಂದರ ಬಳಗದಲ್ಲಿ ಅನ್‌ಕ್ಯಾಪ್ಡ್ ಆಲ್‌ರೌಂಡರ್ ಕಾರ್ಬಿನ್ ಬಾಷ್ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ದಕ್ಷಿಣ ಆಫ್ರಿಕಾ ತಂಡದಲ್ಲಿ ಸೇರ್ಪಡೆಗೊಂಡಿರುವ ಕಾರ್ಬಿನ್ ಬಾಷ್, ಮಾಜಿ ಟೆಸ್ಟ್ ಕ್ರಿಕೆಟಿಗ ಟೆರ್ಟಿಯಸ್ ಬಾಷ್ ಅವರ ಪುತ್ರ. ಕಾರ್ಬಿನ್ ತನ್ನ ಮೊದಲ ಟೆಸ್ಟ್ ಪಂದ್ಯವನ್ನು ಆಡಲು ಉತ್ಸಾಹಕರಾಗಿದ್ದಾರೆ. ದಕ್ಷಿಣ ಆಫ್ರಿಕಾದ ವೇಗದ ಬೌಲರ್‌ಗಳು ಗಾಯಗೊಳ್ಳುತ್ತಿರುವ ಮಧ್ಯೆ ಕಾರ್ಬಿನ್ ಬಾಷ್ ತಂಡಕ್ಕೆ ಸೇರಿರುವುದು ಕುತೂಹಲ ಮೂಡಿಸಿದೆ. 30 ವರ್ಷ ವಯಸ್ಸಿನ ಬಾಷ್ ದೇಶೀಯ ಕ್ರಿಕೆಟ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. 34 ಪ್ರಥಮ ದರ್ಜೆ ಪಂದ್ಯಗಳಲ್ಲಿ 40.46 ಸರಾಸರಿಯಲ್ಲಿ 1295 ರನ್ ಗಳಿಸಿದ್ದಾರೆ, ಇದರಲ್ಲಿ 10 ಅರ್ಧ ಶತಕಗಳು ಸೇರಿವೆ.

South Africa playing XI for first Test against Pakistan

ದಕ್ಷಿಣ ಆಫ್ರಿಕಾದ ವೇಗದ ಬೌಲರ್‌ಗಳಾದ ಜೆರಾಲ್ಡ್ ಕೊಯೆಟ್ಜಿ, ಲಿಜಾಡ್ ವಿಲಿಯಮ್ಸ್ ಮತ್ತು ಲುಂಗಿ ಎನ್‌ಗಿಡಿ ಅವರು ಗಾಯಗೊಂಡಿರುವ ಕಾರಣ ಮುಂದಿನ ವರ್ಷದ ಆರಂಭದವರೆಗೆ ತಂಡದಿಂದ ಹೊರಗುಳಿದಿದ್ದಾರೆ. ಅಪಾಯಕಾರಿ ವೇಗದ ಬೌಲರ್ ಕಗಿಸೊ ರಬಾಡ, ಮಾರ್ಕೊ ಜೆನ್ಸನ್ ಮತ್ತು ಡಾನ್ ಪ್ಯಾಟರ್ಸನ್ ಜೊತೆಗೆ ಬಾಷ್ ದಕ್ಷಿಣ ಆಫ್ರಿಕಾದ ಬೌಲಿಂಗ್ ವಿಭಾಗದ ಭಾಗವಾಗಿದ್ದಾರೆ.

ದಕ್ಷಿಣ ಆಫ್ರಿಕಾ ಮತ್ತು ಪಾಕಿಸ್ತಾನ ನಡುವಿನ ಎರಡು ಟೆಸ್ಟ್‌ಗಳ ಸರಣಿಯ ಮೊದಲ ಪಂದ್ಯವು ಸೆಂಚುರಿಯನ್‌ನಲ್ಲಿ ನಡೆಯಲಿದೆ. ಎರಡನೇ ಹಾಗೂ ಅಂತಿಮ ಟೆಸ್ಟ್ ಜನವರಿ 3ರಿಂದ ಆರಂಭವಾಗಲಿದೆ. ಈ ಟೆಸ್ಟ್ ಸರಣಿಯು ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲೂಟಿಸಿ) 2023-25 ರ ಭಾಗವಾಗಿದೆ. ಡಬ್ಲ್ಯೂಟಿಸಿ ಅಂಕಪಟ್ಟಿಯಲ್ಲಿ ಆಫ್ರಿಕಾ ಅಗ್ರಸ್ಥಾನದಲ್ಲಿದ್ದು, ಫೈನಲ್ ತಲುಪಲು ಈ ಸರಣಿಯನ್ನು ಗೆಲ್ಲಬೇಕಾಗಿದೆ. ಡಬ್ಲ್ಯೂಟಿಸಿ ಫೈನಲ್ ಟೆಸ್ಟ್ ಪಂದ್ಯವು ಜೂನ್ 2025 ರಲ್ಲಿ ಲಾರ್ಡ್ಸ್‌ನಲ್ಲಿ ನಡೆಯಲಿದೆ.

ದಕ್ಷಿಣ ಆಫ್ರಿಕಾ ಪ್ಲೇಯಿಂಗ್-11

ಟೋನಿ ಡಿ ಜೋರ್ಜಿ, ಐಡೆನ್ ಮಾರ್ಕ್ರಾಮ್, ರಿಯಾನ್ ರಿಕೆಲ್ಟನ್, ಟ್ರಿಸ್ಟಾನ್ ಸ್ಟಬ್ಸ್, ಟೆಂಬಾ ಬವುಮಾ (ನಾಯಕ), ಡೇವಿಡ್ ಬೆಡಿಂಗ್ಹ್ಯಾಮ್, ಕೈಲ್ ವೆರೆನ್ನೆ, ಮಾರ್ಕೊ ಜೆನ್ಸನ್, ಕಗಿಸೊ ರಬಾಡ, ಡೇನ್ ಪ್ಯಾಟರ್ಸನ್ ಮತ್ತು ಕಾರ್ಬಿನ್ ಬಾಷ್.

ದಕ್ಷಿಣ ಆಫ್ರಿಕಾ ವಿರುದ್ಧದ ಪಾಕಿಸ್ತಾನ ಟೆಸ್ಟ್ ತಂಡ

ಶಾನ್ ಮಸೂದ್ (ನಾಯಕ), ಸೌದ್ ಶಕೀಲ್ (ಉಪನಾಯಕ), ಅಮೀರ್ ಜಮಾಲ್, ಅಬ್ದುಲ್ಲಾ ಶಫೀಕ್, ಬಾಬರ್ ಅಜಮ್, ಹಸಿಬುಲ್ಲಾ (ವಿಕೆಟ್ ಕೀಪರ್), ಕಮ್ರಾನ್ ಗುಲಾಮ್, ಖುರ್ರಂ ಶಹಜಾದ್, ಮೀರ್ ಹಮ್ಜಾ, ಮೊಹಮ್ಮದ್ ಅಬ್ಬಾಸ್, ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್ ), ನಸೀಮ್ ಶಾ, ನೋಮನ್ ಅಲಿ, ಸೈಮ್ ಅಯೂಬ್ ಮತ್ತು ಸಲ್ಮಾನ್ ಅಲಿ ಅಗಾ.

Story first published: Wednesday, December 25, 2024, 18:11 [IST]
Other articles published on Dec 25, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+