For Quick Alerts
ALLOW NOTIFICATIONS  
For Daily Alerts
 

ಭಾರತ, ಆಸ್ಟ್ರೇಲಿಯಾ ದಾಖಲೆ ಅಳಿಸಿದ ದಕ್ಷಿಣ ಆಫ್ರಿಕಾ: ಏನಿದು ಸಾಧನೆ?

ದಕ್ಷಿಣ ಆಫ್ರಿಕಾ ಹಾಗೂ ವೆಸ್ಟ್‌ ಇಂಡೀಸ್‌ ನಡುವಣ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಪ್ರವಾಸಿ ಆಫ್ರಿಕಾ ತಂಡ 40 ರನ್‌ಗಳ ಜಯ ಸಾಧಿಸಿದೆ. ಈ ಸರಣಿಯಲ್ಲಿ ವೆಸ್ಟ್‌ ಇಂಡೀಸ್‌ ತವರಿನಲ್ಲಿ ಮುಗ್ಗರಿಸಿದೆ. ಈ ಸರಣಿಯಲ್ಲಿ ಆಫ್ರಿಕಾ ತಂಡದ ಕೇಶವ್ ಮಹರಾಜ್‌ ಅಮೋಘ ಪ್ರದರ್ಶನ ನೀಡಿದರು. ಈ ಸರಣಿಯಲ್ಲಿ ದಕ್ಷಿಣ ಆಫ್ರಿಕಾ ಅಮೋಘ ಪ್ರದರ್ಶನ ನೀಡಿ ಇತಿಹಾಸದ ಪುಟದಲ್ಲಿ ಸ್ಥಾನ ಪಡೆದಿದೆ.

ವೆಸ್ಟ್‌ ಇಂಡೀಸ್‌ ವಿರುದ್ಧದ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ 160 ರನ್‌ಗಳಿಸಿತು. ಮೊದಲ ಇನಿಂಗ್ಸ್ ಆರಂಭಿಸಿದ ವಿಂಡೀಸ್ 144 ರನ್‌ಗಳಿಗೆ ಸರ್ವಪತನ ಕಂಡಿತು. 16 ರನ್‌ಗಳ ಮುನ್ನಡೆ ಸಾಧಿಸಿದ ದಕ್ಷಿಣ ಆಫ್ರಿಕಾ ಎರಡನೇ ಇನಿಂಗ್ಸ್‌ನಲ್ಲಿ 246 ರನ್‌ ಸೇರಿಸಿತು. ಗೆಲುವಿಗೆ 262 ರನ್‌ಗಳ ಗುರಿಯನ್ನು ಬೆನ್ನಟಿದ ವಿಂಡೀಸ್ 222 ರನ್‌ಗಳಿಗೆ ಆಲೌಟ್ ಆಯಿತು. ಈ ಸರಣಿ ಗೆಲುವಿನ ಮೂಲಕ ದಕ್ಷಿಣ ಆಫ್ರಿಕಾ ವೆಸ್ಟ್ ಇಂಡೀಸ್ ವಿರುದ್ಧ ಸತತ 10ನೇ ಟೆಸ್ಟ್ ಸರಣಿಯನ್ನು ಗೆದ್ದುಕೊಂಡಿದೆ.

South Africa Secures Historic 10th Consecutive Test Series Win Against West Indies

ದಕ್ಷಿಣ ಆಫ್ರಿಕಾ ದಾಖಲೆ

ದಕ್ಷಿಣ ಆಫ್ರಿಕಾ ಈ ಸಾಧನೆಯೊಂದಿಗೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ದಾಖಲೆಯ ಪುಟ ಸೇರಿದೆ. ದಕ್ಷಿಣ ಆಫ್ರಿಕಾ ಒಂದು ತಂಡದ ವಿರುದ್ಧ ಸತತ 10 ಟೆಸ್ಟ್ ಸರಣಿಗಳನ್ನು ಗೆದ್ದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಮೂಲಕ ದಕ್ಷಿಣ ಆಫ್ರಿಕಾ, ಭಾರತ ಮತ್ತು ಆಸ್ಟ್ರೇಲಿಯಾದ ದಾಖಲೆಯನ್ನು ಮುರಿದಿದೆ. ಭಾರತ ಮತ್ತು ಆಸ್ಟ್ರೇಲಿಯಾ ವೆಸ್ಟ್ ಇಂಡೀಸ್ ವಿರುದ್ಧ ಸತತ 9 ಟೆಸ್ಟ್ ಸರಣಿಗಳನ್ನು ಗೆದ್ದಿವೆ.

ಅತಿ ಹೆಚ್ಚು ವಿಕೆಟ್‌ ಪಡೆದ ಸ್ಪಿನ್ ಬೌಲರ್

ಪ್ರವಾಸದಲ್ಲಿ ದಕ್ಷಿಣ ಆಫ್ರಿಕಾ ತಂಡದ ಸ್ಪಿನ್ ಬೌಲರ್‌ ಕೇಶವ್ ಮಹಾರಾಜ್ ಅಮೋಘ ಪ್ರದರ್ಶನ ನೀಡಿದರು. ಈ ಮೂಲಕ ಕೇಶವ್ ಮಹಾರಾಜ್‌ ಟೆಸ್ಟ್‌ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್‌ ಪಡೆದ ಸ್ಪಿನ್ ಬೌಲರ್ ಎಂಬ ಶ್ರೇಯವನ್ನು ತಮ್ಮದಾಗಿಸಿಕೊಂಡಿದ್ದಾರೆ. ಟೆಸ್ಟ್‌ನಲ್ಲಿ ಕೇಶವ್‌ ಮಹಾರಾಜ್‌ 171 ವಿಕೆಟ್‌ಗಳನ್ನು ಪಡೆದಿದ್ದಾರೆ. ಈ ಸರಣಿ ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ ಅಡಿಯಲ್ಲಿ ಆಡಲಾಗಿತ್ತು. ದಕ್ಷಿಣ ಆಫ್ರಿಕಾ ಈ ಸರಣಿಯನ್ನು 1-0 ಯಿಂದ ಗೆದ್ದು ಕೊಂಡಿದೆ. ಈ ಮೂಲಕ ದಕ್ಷಿಣ ಆಫ್ರಿಕಾ ಡಬ್ಲ್ಯುಟಿಸಿ ಪಾಯಿಂಟ್ಸ್‌ ಪಟ್ಟಿಯಲ್ಲಿ ಏರಿಕೆ ಕಂಡಿದೆ.

ವೆಸ್ಟ್‌ ಇಂಡೀಸ್ ತಂಡವನ್ನು ಮಣಿಸಿರುವ ದಕ್ಷಿಣ ಆಫ್ರಿಕಾ ಡಬ್ಲ್ಯುಟಿಸಿ ಪಾಯಿಂಟ್ಸ್‌ ಪಟ್ಟಿಯಲ್ಲಿ ಬಡ್ತಿ ಪಡೆದಿದೆ. ಆರನೇ ಸ್ಥಾನದಲ್ಲಿದ್ದ ದಕ್ಷಿಣ ಆಫ್ರಿಕಾ ಈಗ ಐದನೇ ಸ್ಥಾನಕ್ಕೆ ತಲುಪಿದೆ. ಪಾಕಿಸ್ತಾನ ತಂಡ ಆರನೇ ಸ್ಥಾನಕ್ಕೆ ಕುಸಿದಿದೆ. ಡಬ್ಲ್ಯುಟಿಸಿ ಪಾಯಿಂಟ್ಸ್‌ ಪಟ್ಟಿಯಲ್ಲಿ ಭಾರತ ಇನ್ನು ನಂಬರ್‌ ಒನ್‌ ಸ್ಥಾನದಲ್ಲಿ ಮುಂದುವರೆದಿದೆ.

South Africa Secures Historic 10th Consecutive Test Series Win Against West Indies

ವೆಸ್ಟ್‌ ಇಂಡೀಸ್ ವಿರುದ್ಧ ಹೆಚ್ಚು ಸರಣಿಗಳನ್ನು ಗೆದ್ದ ದಾಖಲೆ
ದಕ್ಷಿಣ ಆಫ್ರಿಕಾ ವೆಸ್ಟ್ ಇಂಡೀಸ್ ವಿರುದ್ಧ 10 ಸರಣಿಗಳನ್ನು ಗೆದ್ದಿದೆ - (1998-2024)
ವೆಸ್ಟ್ ಇಂಡೀಸ್ ವಿರುದ್ಧ ಭಾರತ 9 ಸರಣಿಗಳನ್ನು ಗೆದ್ದಿದೆ - (2002-23)
ವೆಸ್ಟ್ ಇಂಡೀಸ್ ವಿರುದ್ಧ ಆಸ್ಟ್ರೇಲಿಯಾ 9 ಸರಣಿಗಳನ್ನು ಗೆದ್ದುಕೊಂಡಿತು - (2000-22)

Story first published: Monday, August 19, 2024, 11:31 [IST]
Other articles published on Aug 19, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+